ಮಾಯಾವತಿ ಗೆಲ್ಲಬಾರದು!; ಯುಪಿ ಡಿಸಿಎಂ ಹುದ್ದೆಗೆ ಮೌರ್ಯ ರಾಜೀನಾಮೆ?
Team Udayavani, Jul 26, 2017, 10:11 AM IST
ಲಕ್ನೋ: ಉತ್ತರಪ್ರದೇಶದ ಮಹತ್ವದ ರಾಜಕೀಯ ವಿದ್ಯಮಾನವೊಂದರಲ್ಲಿ ಉಪಮುಖ್ಯಮಂತ್ರಿ ಸ್ಥಾನಕ್ಕೆ ಕೇಶವ್ ಪ್ರಸಾದ್ ಮೌರ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆಗಳು ದಟ್ಟವಾಗಿದೆ. ಇದಕ್ಕೆ ಕಾರಣವಾಗಿರುವುದು ಬಿಎಸ್‌ಪಿ ಅಧಿನಾಯಕಿ ಮಾಯಾವತಿ ಅವರು ಪುಲ್‌ಪುರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುತ್ತಾರೆ ಎನ್ನುವ ಸುದ್ದಿ.
ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಮೌರ್ಯ ಅವರು 2014 ರ ಲೋಕಸಭಾ ಚುನಾವಣೆಯಲ್ಲಿ ಸಮೀಪದ ಅಭ್ಯರ್ಥಿ ಬಿಎಸ್‌ಪಿಯ ಕಪಿಲ್ ಮುನಿ ಕಾರ್ವಾರಿಯಾ ವಿರುದ್ಧ 3 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಲೋಕಸಭಾ ಸದಸ್ಯರಾಗಿದ್ದರೂ ಮೌರ್ಯ ಅವರು ಉಪಮುಖ್ಯಮಂತ್ರಿಯಾಗಿದ್ದರು. ಡಿಸಿಎಂ ಹುದ್ದೆಯಲ್ಲಿ ಮುಂದುವರಿಯಬೇಕಾದರೆ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿದೆ.
ಪುಲ್‌ಪುರ್ ನಲ್ಲಿ ಬಿಎಸ್‌ಪಿ ಬಲವಾದ ಕಾರ್ಯಕರ್ತರ ಪಡೆ ಹೊಂದಿದ್ದು ಮಾಯಾವತಿ ಅವರು ಕಣಕ್ಕಿಳಿದರೆ ಗೆಲುವು ಸಾಧಿಸುವ ಸಾಧ್ಯತೆಗಳು ಹೆಚ್ಚಿವೆ. ಹೀಗಾಗಿ ಒಂದು ಸ್ಥಾನ ಕಳೆದುಕೊಳ್ಳಲು, ಮಾಯಾವತಿಗೆ ಗೆಲುವು ಸಿಗಬಾರದು ಎನ್ನುವ ಉದ್ದೇಶದಲ್ಲಿ ಮೌರ್ಯ ಅವರನ್ನು ಡಿಸಿಎಂ ಹುದ್ದೆಯಿಂದ ಕೆಳಗಿಳಿಯಲು ಹೇಳಿದೆ ಎಂದು ವರದಿಯಾಗಿದೆ. ಮೌರ್ಯ ಅವರಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಉನ್ನತ ಖಾತೆ ಸಿಗುವ ಸಾಧ್ಯತೆಗಳಿವೆ.
ದಲಿತರ ಪರ ಧ್ವನಿಯಾಗಲು ಸಂಸತ್ತಿನಲ್ಲಿ ಅವಕಾಶ ಇಲ್ಲ ಎಂದು ಮಾಯಾವತಿ ಅವರು ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದರು.ಇದೀಗ ಲೋಕಸಭಾ ಕ್ಷೇತ್ರ ತೆರವಾದರೆ ಕಣಕ್ಕಿಳಿಯಲು ಮುಂದಾಗಿದ್ದರು ಎಂದು ಹೇಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
MUST WATCH
ಹೊಸ ಸೇರ್ಪಡೆ
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.