ಜಹಾಂಗೀರ್ ಪುರಿ ಹಿಂಸಾಚಾರ: ಪ್ರಮುಖ ಆರೋಪಿ ಪಶ್ಚಿಮ ಬಂಗಾಳದಲ್ಲಿ ಸೆರೆ
Team Udayavani, Apr 28, 2022, 7:08 PM IST
ಕೋಲ್ಕತಾ : ಜಹಾಂಗೀರ್‌ಪುರಿ ಕೋಮುಗಲಭೆಯ ಮೋಸ್ಟ್ ವಾಂಟೆಡ್ ಆರೋಪಿಗಳಲ್ಲಿ ಒಬ್ಬನನ್ನು ಪಶ್ಚಿಮ ಬಂಗಾಳದಲ್ಲಿ ದೆಹಲಿ ಪೊಲೀಸ್ ಕ್ರೈಂ ಬ್ರಾಂಚ್ ಗುರುವಾರ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಆರೋಪಿಯನ್ನು ಫರೀದ್ ಅಲಿಯಾಸ್ ನೀತು ಎಂದು ಗುರುತಿಸಲಾಗಿದ್ದು, ಈತ ಕೋಮುಗಲಭೆಗಳಲ್ಲಿ ಅತ್ಯಂತ ಸಕ್ರಿಯವಾಗಿ ಪಾಲ್ಗೊಂಡಿದ್ದ ಮತ್ತು ಪ್ರಮುಖ ಪಾತ್ರ ವಹಿಸಿದ್ದ. ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾದ ನಮ್ಮ ಹಲವಾರು ತಂಡಗಳು ಗುರುವಾರ ತಮ್ಲುಕ್ ಗ್ರಾಮದ ಆತನ ಚಿಕ್ಕಮ್ಮನ ಮನೆಯಿಂದ ಬಂಧಿಸಿವೆ. ಅವನನ್ನು ಇಂದು ವಿಮಾನದ ಮೂಲಕ ನವದೆಹಲಿಗೆ ಕರೆತರಲಾಗುತ್ತಿದೆ ಎಂದು ಕ್ರೈಂ ಬ್ರಾಂಚ್ ಮೂಲವೊಂದು ತಿಳಿಸಿದೆ.
ಗಲಾಟೆ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಅಂದಿನಿಂದ, ಅವರು ತಮ್ಮ ಸ್ಥಳಗಳನ್ನು ಬದಲಾಯಿಸುತ್ತಿದ್ದರು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುತ್ತುತ್ತಿದ್ದರು ಎಂದು ಮೂಲಗಳು ತಿಳಿಸಿವೆ.
ಬಂಧಿತನ ವಿರುದ್ಧ 2010 ರಿಂದ ದರೋಡೆ, ಕಳ್ಳತನ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಆರು ಪ್ರಕರಣಗಳು ದಾಖಲಾಗಿವೆ ಮತ್ತು ಜಹಾಂಗೀರ್‌ಪುರಿ ಪ್ರದೇಶದಲ್ಲಿ ರೌಡಿ ಶೀಟರ್ ಆಗಿದ್ದಾನೆ. ಏಪ್ರಿಲ್ 16 ರಂದು ದೆಹಲಿಯ ಜಹಾಂಗೀರ್‌ಪುರಿಯಲ್ಲಿ ಹನುಮಾನ್ ಜಯಂತಿ ಮೆರವಣಿಗೆಯಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ ಸಂಭವಿಸಿದ್ದು, ಎಂಟು ಪೊಲೀಸ್ ಸಿಬ್ಬಂದಿ ಮತ್ತು ಸ್ಥಳೀಯ ನಿವಾಸಿ ಗಾಯಗೊಂಡಿದ್ದರು.ಘರ್ಷಣೆಯ ಸಮಯದಲ್ಲಿ ಕಲ್ಲು ತೂರಾಟ ಮತ್ತು ಬೆಂಕಿ ಹಚ್ಚಲಾಗಿದೆ ಮತ್ತು ಕೆಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.
ಹಿಂಸಾಚಾರದ ಕೆಲವು ದಿನಗಳ ನಂತರ, ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಅವರು ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪಗಳನ್ನು ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆದಿದ್ದಾರೆ.
ಪ್ರಕರಣದ ಐವರು ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಹಾಕಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.