Threat: ಪಂಜಾಬ್ ಸಿಎಂ ಮತ್ತು DGP ಗೆ ಜೀವ ಬೆದರಿಕೆ ಹಾಕಿದ ಖಾಲಿಸ್ತಾನಿ ಭಯೋತ್ಪಾದಕ ಪನ್ನೂನ್
ಗಣರಾಜ್ಯೋತ್ಸವ ದಿನದಂದು ಕೊಲ್ಲುವುದಾಗಿ ಬೆದರಿಕೆ
Team Udayavani, Jan 16, 2024, 1:02 PM IST
ಚಂಡೀಗಢ: ದೇಶದ ಗಣ್ಯ ವ್ಯಕ್ತಿಗಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಲೇ ಹೆಸರುವಾಸಿಯಾಗಿರುವ ಖಾಲಿಸ್ತಾನಿ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಇದೀಗ ಹೊಸ ಬೆದರಿಕೆ ಹಾಕಿದ್ದಾನೆ.
ಗಣರಾಜ್ಯೋತ್ಸವದಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರವ್ ಯಾದವ್ ಅವರನ್ನು ಕೊಲ್ಲುವುದಾಗಿ ಖಲಿಸ್ತಾನಿ ಭಯೋತ್ಪಾದಕ ಪನ್ನುನ್ ಮಂಗಳವಾರ ಬೆದರಿಕೆ ಹಾಕಿದ್ದಾನೆ.
ಸಿಖ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ ಮತ್ತು ಭಯೋತ್ಪಾದಕ ಪನ್ನುನ್, ಭಾರತೀಯ ಸಂಸ್ಥೆಗಳು ಮತ್ತು ಅಧಿಕಾರಿಗಳ ವಿರುದ್ಧ ನೀಡಿದ ಬೆದರಿಕೆಗಳ ಸರಣಿಯಲ್ಲಿ ಇದು ಇತ್ತೀಚಿನದು ಎನ್ನಲಾಗಿದೆ. ಕಳೆದ ತಿಂಗಳು, ಅವರು ಡಿಸೆಂಬರ್ 13 ಕ್ಕೂ ಮೊದಲು ಭಾರತೀಯ ಸಂಸತ್ತಿನ ಮೇಲೆ ದಾಳಿ ಮಾಡುವುದಾಗಿ ಖಲಿಸ್ತಾನಿ ನಾಯಕ ಹೇಳಿದ ವೀಡಿಯೊವನ್ನು ಬಿಡುಗಡೆ ಮಾಡಿದ್ದ. ಅದಕ್ಕೂ ಮೊದಲು ಖಲಿಸ್ತಾನಿ ಭಯೋತ್ಪಾದಕನಿಂದ ಮತ್ತೊಂದು ವೀಡಿಯೋ ಬಿಡುಗಡೆಯಾಗಿತ್ತು ಅದರಲ್ಲಿ ಅವರು ನವೆಂಬರ್ 19 ರಂದು ಏರ್ ಇಂಡಿಯಾದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.
2019 ರಲ್ಲಿ “ರಾಷ್ಟ್ರ ವಿರೋಧಿ ಮತ್ತು ವಿಧ್ವಂಸಕ” ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಉಲ್ಲೇಖಿಸಿ ಕೇಂದ್ರವು 2020 ರಲ್ಲಿ ಪನ್ನುನ್ ಅನ್ನು “ವೈಯಕ್ತಿಕ ಭಯೋತ್ಪಾದಕ” ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್ ಅಂತ್ಯಕ್ರಿಯೆ
Snowfall; ಭಾರೀ ಹಿಮಪಾತದಿಂದಾಗಿ ಜಮ್ಮು-ಶ್ರೀನಗರ ಹೆದ್ದಾರಿ ಬಂದ್; ಸಿಲುಕಿದ ವಾಹನಗಳು
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.