ಇಂದಿನಿಂದ ಖೇಲೋ ಇಂಡಿಯಾ ಯೂತ್ ಗೇಮ್ಸ್
Team Udayavani, Jan 10, 2020, 6:50 AM IST
ಗುವಾಹಾಟಿ: ದೇಶದ ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಹೊರಹೊಮ್ಮಿಸುವ “ಖೇಲೋ ಇಂಡಿಯಾ’ದ 3ನೇ ಆವೃತ್ತಿ ಶುಕ್ರವಾರ ಗುವಾಹಾಟಿಯಲ್ಲಿ ಮೊದಲ್ಗೊಳ್ಳಲಿದೆ. ದೇಶದ 37 ರಾಜ್ಯಗಳ 6,800 ಕ್ರೀಡಾಪಟುಗಳು ಒಟ್ಟು 20 ಕ್ರೀಡೆಗಳಲ್ಲಿ ತಮ್ಮ ಸಾಮರ್ಥ್ಯವನ್ನು ಪಣಕ್ಕೊಡ್ಡಲಿದ್ದಾರೆ. ಇದರಲ್ಲಿ ಕರ್ನಾಟಕದ 288 ಸ್ಪರ್ಧಿಗಳಿದ್ದಾರೆ.
ಇಲ್ಲಿನ “ಇಂದಿರಾ ಗಾಂಧಿ ಸ್ಟೇಡಿಯಂ’ನಲ್ಲಿ ಜರಗಲಿರುವ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಅಸ್ಸಾಮ್ ಮುಖ್ಯಮಂತ್ರಿ ಸರ್ಬಾನಂದ ಸೋನೊವಾಲ್ ಮುಖ್ಯ ಅತಿಥಿಗಳಾಗಿರುತ್ತಾರೆ.
ಹಿಮಾ ದಾಸ್ ಸಹಿತ ದೇಶದ ತಾರಾ ಆ್ಯತ್ಲೀಟ್ಸ್ ಈ ಭವ್ಯ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ. ಆಧುನಿಕ ತಂತ್ರಜ್ಞಾನದ ಲೇಸರ್ ಶೋ ಜತೆಗೆ ಅಸ್ಸಾಂನ ಸಾಂಪ್ರದಾಯಿಕ ಕಲೆಗಳು ಈ ಸಂದರ್ಭದಲ್ಲಿ ಅನಾವರಣಗೊಳ್ಳಲಿವೆ.
“ಇದು ದೇಶದ ಕ್ರೀಡಾಕ್ರಾಂತಿಗೆ ಸಾಕ್ಷಿಯಾಗಬಲ್ಲ ಕೂಟ. ಇದು ಅಸ್ಸಾಮ್ನಲ್ಲಿ ನಡೆಯುತ್ತಿರುವುದು ಹೆಮ್ಮೆಯ ಸಂಗತಿ. ಕ್ರೀಡಾಕೂಟ ಯಶಸ್ವಿಯಾಗಲಿ, ಎಲ್ಲ ಕ್ರೀಡಾ ಪಟುಗಳಿಗೆ ಶುಭ ಹಾರೈಕೆಗಳು’ ಎಂದು ಸೋನೊವಾಲ್ ಈ ಸಂದರ್ಭದಲ್ಲಿ ಹೇಳಿದರು.
ಕ್ರೀಡಾಳುಗಳ ಪ್ರಯಾಣಕ್ಕೆಂದೇ ವಿಮಾನ ವ್ಯವಸ್ಥೆ ಮಾಡಿರುವುದು ಈ ಬಾರಿಯ ವಿಶೇಷ. ಕೋಲ್ಕತಾ ಮತ್ತು ಹೊಸದಿಲ್ಲಿಯಿಂದ ಈ ವಿಮಾನ ಗುವಾಹಾಟಿಗೆ ಹಾರಾಟ ನಡೆಸಲಿದೆ.
ಕರ್ನಾಟಕದ 288 ಸ್ಪರ್ಧಿಗಳು
ಈ ಕೂಟದಲ್ಲಿ ಕರ್ನಾಟಕದ 288 ಕ್ರೀಡಾಳುಗಳು ಪಾಲ್ಗೊಳ್ಳಲಿದ್ದಾರೆ. ಈಜು ಸ್ಪರ್ಧೆಯೊಂದರಲ್ಲೇ ನೂರರಷ್ಟು ಸ್ಪರ್ಧಿಗಳಿರುವುದು ವಿಶೇಷ. ಉಳಿದಂತೆ ಆ್ಯತ್ಲೆಟಿಕ್ಸ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಕಬಡ್ಡಿ, ಶೂಟಿಂಗ್, ವಾಲಿಬಾಲ್, ಕುಸ್ತಿ ಸ್ಪರ್ಧೆಗಳಲ್ಲಿ ರಾಜ್ಯದ ಕ್ರೀಡಾಳುಗಳು ಪದಕದ ರೇಸ್ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿನ ಎರಡೂ ಆವೃತ್ತಿಗಳಲ್ಲಿ ಕರ್ನಾಟಕ 4ನೇ ಸ್ಥಾನ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ
Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು
Manmohan Singh: ಮನಮೋಹನ್ ಸಿಂಗ್ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ
Puttur ನಗರಕ್ಕೂ ಬೇಕು ಟ್ರಾಫಿಕ್ ಸಿಗ್ನಲ್
INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.