ಉಗ್ರರಿಂದ ಅಪಹರಣಕ್ಕೊಳಗಾದ ಯೋಧ ಔರಂಗಜೇಬ್ ಶವವಾಗಿ ಪತ್ತೆ
Team Udayavani, Jun 15, 2018, 9:58 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಔರಂಗಜೇಬ್ ಎಂಬ ಯೋಧರೊಬ್ಬರನ್ನು ಉಗ್ರಗಾಮಿಗಳು ಗುರುವಾರ ಅಪಹರಿಸಿ ಹತ್ಯೆ ಮಾಡಿ ದ್ದಾರೆ.
ಗುಂಡಿನಿಂದ ಛಿದ್ರಗೊಂಡ ಅವರ ದೇಹ ಪುಲ್ವಾಮಾ ಜಿಲ್ಲೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಜೌರಿ ನಿವಾಸಿಯಾಗಿರುವ ಅವರು ರಂಜಾನ್ ರಜೆಗಾಗಿ ಮನೆಗೆ ಆಗಮಿಸಿದ್ದರು. ಅವರನ್ನು ಲಾಂಪೋರಾ ಎಂಬ ಲ್ಲಿಂದ ಅಪಹರಿಸಲಾಗಿತ್ತು. ಶೋಪಿಯಾನ್‌ನಲ್ಲಿ 44 ರೈಫಲ್ಸ್ ಪಡೆಯಲ್ಲಿ ಇವರು ಕಾರ್ಯನಿರ್ವಹಿಸುತ್ತಿದ್ದರು. ಶೋಧಕ್ಕಾಗಿ ವ್ಯಾಪಕ ಕಾರ್ಯಾಚರಣೆಯನ್ನು ನಡೆಸಲಾಗಿತ್ತು.
ಹಿಜ್ಬುಲ್ ಕಮಾಂಡರ್ ಸಮೀರ್ ಟೈಗರ್ ನನ್ನು ಹತ್ಯೆಗೈದ ಹಿರಿಯ ಸೇನಾಧಿಕಾರಿಯ ಪಡೆಯಲ್ಲಿ ಔರಂಗಜೇಬ್ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಇದೇ ಕಾರಣಕ್ಕೆ ಔರಂಗಜೇಬ್‌ರನ್ನು ಅಪಹರಿಸಿ ಹತ್ಯೆಗೈಯಲಾಗಿದೆಯೇ ಎಂಬುದಾಗಿ ತನಿಖೆ ನಡೆಸಲಾಗುತ್ತಿದೆ. ರಜೆ ಮೇಲೆ ಮನೆಗೆ ತೆರಳುತ್ತಿದ್ದಾಗ ಔರಂಗಜೇಬ್‌ರನ್ನು ಅಪಹರಿಸಲಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ. ಮಂಗಳವಾರ ಶಾಡಿಮಾರ್ಗ್ ಸೇನಾ ನೆಲೆಯ ಬಳಿ ಪ್ರಯಾಣಿಕ ವಾಹನವನ್ನೇರಿ ಔರಂಗಜೇಬ್ ಹೊರಟಿದ್ದರು. ಕೇವಲ ಎರಡು ಕಿ.ಮೀ ದೂರದಲ್ಲಿ ಸಶಸ್ತ್ರಧಾರಿ ಉಗ್ರ ವಾಹನವನ್ನು ತಡೆದು, ಯೋಧರನ್ನು ಅಪಹರಿಸಿದ್ದಾರೆ. ಅಪಹರಣದ ಸುದ್ದಿ ತಿಳಿಯುತ್ತಿದ್ದಂತೆ ಶೋಧ ಕಾರ್ಯಾಚರಣೆ ಆರಂಭಿಸಲಾಗಿತ್ತು. ಕಳೆದ ವರ್ಷ ಲೆ. ಉಮರ್ ಫಯಾಜ್‌ರನ್ನು ಕೂಡ ಅಪಹರಿಸಿ ಹತ್ಯೆಗೈಯಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Tribute Dr.Singh: ಡಾ.ಸಿಂಗ್ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.