Kiren Rijuju:ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ದಲಿತರಿಲ್ಲ ಎಂದ ರಾಹುಲ್ ಗೆ ರಿಜುಜು ತಿರುಗೇಟು
Team Udayavani, Aug 25, 2024, 3:12 PM IST
ನವದೆಹಲಿ: ಸೌಂದರ್ಯ ಸ್ಪರ್ಧೆಯಾದ ಮಿಸ್ ಇಂಡಿಯಾ ಪಟ್ಟಿಯಲ್ಲಿ ದಲಿತ ಮತ್ತು ಆದಿವಾಸಿಗಳಿಲ್ಲ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಯನ್ನು ಕೇಂದ್ರ ಸಚಿವ ಕಿರಣ್ ರಿಜಿಜು ಅವರು “ಬಾಲ ಬುದ್ಧಿ” ಯಿಂದ ಮಾತ್ರ ಬರಬಹುದು ಎಂದು ಜರಿದಿದ್ದಾರೆ.
ಜಾತಿ ಗಣತಿಗೆ ಒತ್ತಾಯಿಸಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಸಂವಿಧನ್ ಸಮ್ಮಾನ್ ಸಮ್ಮೇಳನದಲ್ಲಿ, ರಾಹುಲ್ ಗಾಂಧಿ ಶನಿವಾರ (ಆ.24) “ಶೇ 90” ಜನಸಂಖ್ಯೆಯ ಭಾಗವಹಿಸುವಿಕೆ ಇಲ್ಲದೆ ಭಾರತವು ಉತ್ತಮವಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
“ನಾನು ಮಿಸ್ ಇಂಡಿಯಾ ಪಟ್ಟಿಯನ್ನು ಪರಿಶೀಲಿಸಿದ್ದೇನೆ, ಅದರಲ್ಲಿ ದಲಿತ, ಆದಿವಾಸಿ (ಬುಡಕಟ್ಟು) ಅಥವಾ ಒಬಿಸಿ (ಇತರ ಹಿಂದುಳಿದ ವರ್ಗಗಳು) ಮಹಿಳೆಯರು ಇರಲಿಲ್ಲ. ಕೆಲವರು ಕ್ರಿಕೆಟ್ ಅಥವಾ ಬಾಲಿವುಡ್ ಬಗ್ಗೆ ಮಾತನಾಡುತ್ತಾರೆ. ಯಾರೂ ಚಮ್ಮಾರರನ್ನು ಅಥವಾ ಪ್ಲಂಬರ್ ಅನ್ನು ತೋರಿಸುವುದಿಲ್ಲ. ಮಾಧ್ಯಮದಲ್ಲಿ ದೊಡ್ಡ ಸಾಧನೆ ಮಾಡಿದವರು 90 ಪ್ರತಿಶತದಿಂದ ಬಂದವರಲ್ಲ”ಎಂದು ರಾಹುಲ್ ಗಾಂಧಿ ಪ್ರಯಾಗ್‌ರಾಜ್ ನಲ್ಲಿ ಹೇಳಿದ್ದರು.
Now, He wants reservations in Miss India competitions, Films, sports! It is not only issue of “Bal Budhi”, but people who cheer him are – equally responsible too!
बाल बुद्धि मनोरंजन के लिए अच्छी हो सकती है पर अपनी विभाजनकारी चालों में, हमारे पिछड़े समुदायों का मजाक न उड़ाएं। pic.twitter.com/9Vm7ITwMJX— Kiren Rijiju (@KirenRijiju) August 25, 2024
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಕಿರಣ್ ರಿಜುಜು, ಕಾಂಗ್ರೆಸ್ ನಾಯಕರು ಸತ್ಯ ಪರಿಶೀಲನೆ ನಡೆಸಬೇಕು ಎಂದು ಸಲಹೆ ನೀಡಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಬುಡಕಟ್ಟು ಜನಾಂಗದ ದೇಶದ ಮೊದಲ ರಾಷ್ಟ್ರಪತಿ, ಪ್ರಧಾನಿ ನರೇಂದ್ರ ಮೋದಿ ಒಬಿಸಿಗೆ ಸೇರಿದವರು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದಿಂದ ಬಂದ ಕ್ಯಾಬಿನೆಟ್ ಮಂತ್ರಿಗಳ ದಾಖಲೆಯ ಸಂಖ್ಯೆ ಇದೆ ಎಂದು ಹೇಳಿದರು.
“ರಾಹುಲ್ ಗಾಂಧಿ ಅವರೇ, ಸರ್ಕಾರವು ಮಿಸ್ ಇಂಡಿಯಾವನ್ನು ಆಯ್ಕೆ ಮಾಡುವುದಿಲ್ಲ, ಸರ್ಕಾರವು ಒಲಿಂಪಿಕ್ಸ್ ಗೆ ಕ್ರೀಡಾಪಟುಗಳನ್ನು ಆಯ್ಕೆ ಮಾಡುವುದಿಲ್ಲ ಮತ್ತು ಸರ್ಕಾರಗಳು ಚಲನಚಿತ್ರಗಳಿಗೆ ನಟರನ್ನು ಆಯ್ಕೆ ಮಾಡುವುದಿಲ್ಲ” ಎಂದು ರಿಜಿಜು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
Mumbai; ಚುನಾವಣೆಗೆ ಏಕಾಂಗಿ ಸ್ಪರ್ಧೆ: ಉದ್ಧವ್ ಶಿವಸೇನೆ ಇಂಗಿತ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.