ಕಿಸಾನ್ ಸ್ಕೀಮ್ ವಿಸ್ತರಣೆ ಅಧಿಸೂಚನೆ ಪ್ರಕಟ
Team Udayavani, Jun 9, 2019, 6:00 AM IST
ಹೊಸದಿಲ್ಲಿ: ನರೇಂದ್ರ ಮೋದಿ ಸರಕಾರದ ಮಹತ್ವಾ ಕಾಂಕ್ಷಿ ಯೋಜನೆ ಪಿಎಂ ಕಿಸಾನ್ ಅನ್ನು ಎಲ್ಲ ರೈತರಿಗೂ ವಿಸ್ತರಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಇದರಿಂದಾಗಿ 14.5 ಕೋಟಿ ರೈತರಿಗೆ ವಾರ್ಷಿಕ 6 ಸಾವಿರ ರೂ. ನೀಡಲಾಗುತ್ತದೆ. ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದ ಮರುದಿನ ಅಂದರೆ ಮೇ 31ರಂದು ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ನಿರ್ಧಾರ ಕೈಗೊಳ್ಳಲಾಗಿತ್ತು.
ಈ ವಿಚಾರವನ್ನು ಬಿಜೆಪಿ ತನ್ನ ಪ್ರಣಾಳಿಕೆಯಲ್ಲೂ ಪ್ರಕಟಿಸಿತ್ತು. 2 ಹೆಕ್ಟೇರುಗಳಿಗಿಂತ ಕಡಿಮೆ ಭೂಮಿ ಹೊಂದಿರುವ ರೈತರಿಗೆ ಈ ಯೋಜನೆ ಅನ್ವಯವಾಗುತ್ತಿತ್ತು. ಆದರೆ ಈಗ ಎಷ್ಟೇ ಭೂಮಿ ಇದ್ದರೂ ವಾರ್ಷಿಕ ಆರು ಸಾವಿರ ರೂ. ಲಭ್ಯವಾಗಲಿದೆ.
ಆದರೆ ಮಾಸಿಕ 10 ಸಾವಿರ ಪಿಂಚಣಿ ಪಡೆ ಯುತ್ತಿರುವವರು, ಸರಕಾರಿ ಉದ್ಯೋಗದಲ್ಲಿರುವ ಕುಟುಂಬದವರಿಗೆ ಈ ಯೋಜನೆ ಅನ್ವಯ ವಾಗುವುದಿಲ್ಲ. ಹೊಸ ಯೋಜನೆ ಅಡಿ ಸರಕಾರ 2019-20 ರಲ್ಲಿ 87 ಸಾವಿರ ಕೋಟಿ ರೂ. ವೆಚ್ಚ ಮಾಡಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.