ವಿದ್ಯಾರ್ಥಿ ಫೆಸ್ಟ್‌ ಬಗ್ಗೆ ವಿಚಾರಿಸಿದಾತನನ್ನು ನಗ್ನಗೊಳಿಸಿ ವಿಡಿಯೋ


Team Udayavani, Jun 4, 2018, 11:29 AM IST

rape-video-shooting-700.jpg

ಕೋಲ್ಕತ : ಇಲ್ಲಿನ ಸೈಂಟ್‌ ಪಾಲ್ಸ್‌ ಕ್ಯಾಥಡ್ರಲ್‌ ಕಾಲೇಜಿನಲ್ಲಿ ನಡೆಯಲಿಕ್ಕಿರುವ ವಿದ್ಯಾರ್ಥಿ ಉತ್ಸವದ ಖರ್ಚು ವೆಚ್ಚಗಳ ಬಗ್ಗೆ ವಿಚಾರಿಸಿದನೆಂಬ ಕಾರಣಕ್ಕೆ ತೃಣಮೂಲ ಕಾಂಗ್ರೆಸ್‌ ಛಾತ್ರ ಪರಿಷತ್‌ (ಟಿಎಂಸಿಪಿ) ಕಾಲೇಜು ಘಟಕದ ಸದಸ್ಯನಾಗಿರುವ ಕಿರಿಯ ವಿದ್ಯಾರ್ಥಿಯನ್ನು ಸಂಘಟನೆಯ ಹಿರಿಯ ಸದಸ್ಯರು ಹಿಂಸಿಸಿ, ಪೂರ್ಣವಾಗಿ ನಗ್ನಗೊಳಿಸಿ, ವಿಡಿಯೋ ಮಾಡಿದ ಅಮಾನುಷ ಘಟನೆ ವರದಿಯಾಗಿದೆ. 

ಈ ವಿಡಿಯೋ ಚಿತ್ರಿಕೆ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್‌ ಆದುದನ್ನು ಅನುಸರಿಸಿ ಸಂತ್ರಸ್ತ ವಿದ್ಯಾರ್ಥಿ ನೀಡಿರುವ ದೂರಿನ ಪ್ರಕಾರ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಈ ಅಮಾನುಷ ಘಟನೆ ನಡೆದಿರುವುದು ನಿಜವೇ ಆಗಿದ್ದಲ್ಲಿ ಆ ಬಗ್ಗೆ ಕಾಲೇಜಿನಿಂದ ಬರುವ ವರದಿಯನ್ನು ಅನುಸರಿಸಿ ತಪ್ಪುಗಾರರ ವಿರುದ್ಧ ಕಠಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಪಶ್ಚಿಮ ಬಂಗಾಲದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಹೇಳಿದ್ದಾರೆ. 

ಈ ಘಟನೆ ಕಳೆದ ಮೇ 27ರಂದು ಕಾಲೇಜಿನ ವಿದ್ಯಾರ್ಥಿ ಸಂಘದ ಹಾಲ್‌ನಲ್ಲೇ ನಡೆಯಿತೆಂದು ಹೇಳಲಾಗಿದೆ. ಹಿಂಸೆಗೊಳಗಾಗಿ ನಗ್ನಗೊಳಿಸಲ್ಪಟ್ಟ ವಿದ್ಯಾರ್ಥಿಯು ತನ್ನ ಪೀಡಕರಲ್ಲಿ ತನ್ನನ್ನು ಬಿಡಿರೆಂದು ಗೋಗರೆಯುತ್ತಿರುವುದು ವಿಡಿಯೋದಲ್ಲಿ ಕಂಡು ಬರುತ್ತದೆ. 

ಟಿಎಂಸಿಪಿ ರಾಜ್ಯ ಅಧ್ಯಕ್ಷೆಯಾಗಿರುವ ಜಯಾ ದತ್ತಾ ಅವರು, ತಾನು ಈ ಘಟನೆಯ ಬಗ್ಗೆ ಕಾಲೇಜು ಅಧಿಕಾರಿಗಳೊಂದಿಗೆ ಮತ್ತು ಉತ್ತರ ಕೋಲ್ಕತ ಟಿಎಂಸಿಪಿ ಸದಸ್ಯರೊಂದಿಗೆ ಮಾತನಾಡಿ ನಿಜ ಸಂಗತಿಯನ್ನು ಅರಿತುಕೊಂಡು ಕ್ರಮತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. 

ಟಾಪ್ ನ್ಯೂಸ್

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

1-GGV

Greece Golden Visa:ಶೇ.37ರಷ್ಟು ಭಾರತೀಯ ಪ್ರಜೆಗಳ ಬಂಡವಾಳ

GDP

GDP ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಕೊಡುಗೆ ಹೆಚ್ಚು: ವರದಿ

adike

Bhutan; ಹಸುರು ಅಡಿಕೆ ಆಮದಿಗೆ ಕೇಂದ್ರ ಸರಕಾರ ಸಮ್ಮತಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.