ನಾಲ್ಕು ರಾಜ್ಯಗಳಲ್ಲಿ ಕೊಂಕಣಿ ಭಾಷೆಯ ಪ್ರಭಾವವಿದೆ : ಗೋವಾ ರಾಜ್ಯಪಾಲ ಪಿಳ್ಳೆ
Team Udayavani, Aug 26, 2022, 5:13 PM IST
ಪಣಜಿ: ಮಾತೃಭಾಷೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ಕೊಂಕಣಿ ಭಾಷೆಯ ಪ್ರಚಾರಕ್ಕೆ ಗರಿಷ್ಠ ಪ್ರಯತ್ನ ಮಾಡುವುದಾಗಿ ರಾಜ್ಯಪಾಲರಾದ ಪಿ.ಎಸ್.ಶ್ರೀಧರನ್ ಪಿಳ್ಳೆ ಹೇಳಿದರು. ದೇಶದ ನಾಲ್ಕು ರಾಜ್ಯಗಳಲ್ಲಿ ಕೊಂಕಣಿ ಭಾಷೆಯ ಪ್ರಭಾವವಿದೆ. ಕೊಂಕಣಿ ಗೋವಾದ ಮಾತೃಭಾಷೆ. ಆರು ತಿಂಗಳಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುತ್ತೇನೆ ಎಂದು ರಾಜ್ಯಪಾಲ ಶ್ರೀಧರನ್ ಪಿಳ್ಳೆ ಹೇಳಿದರು.
ವಾಸ್ಕೊ ಮುರಗಾಂವ ತಾಲೂಕಿನ ಏಳು ಪಂಚಾಯಿತಿಗಳ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ರಾಜ್ಯಪಾಲ ಪಿ. ಎಸ್. ಶ್ರೀಧರನ್ ಪಿಳ್ಳೆ ಪಾಲ್ಗೊಂಡರು. ಪ್ರಜಾಪ್ರಭುತ್ವದಲ್ಲಿ ಜನರಿಂದ ಚುನಾಯಿತರಾದವರು ಜನಪ್ರತಿನಿಧಿಗಳು ಮತ್ತು ಜನರೇ ಸರ್ವಶ್ರೇಷ್ಠರು. ನಾವು ಜನರ ಸೇವೆ ಮಾಡಲು ಜನರಿಂದ ಆಯ್ಕೆಯಾಗಿದ್ದೇವೆ. ಸಂವಿಧಾನದಲ್ಲಿ ಜನರೇ ಸರ್ವಶ್ರೇಷ್ಠರು. ಮುರಗಾಂವ ತಾಲೂಕಿನ ಎಲ್ಲ ಏಳು ಪಂಚಾಯಿತಿಗಳ ಚುನಾಯಿತ ಪಂಚಾಯಿತಿ ಸದಸ್ಯರು ಸದಾ ಜನಸೇವೆಗೆ ಸಿದ್ಧರಾಗಿರಬೇಕು ಹಾಗೂ ಜನರ ಕೊಡುಗೆಯನ್ನು ಸ್ವೀಕರಿಸಬೇಕು ಎಂದು ಸಲಹೆ ನೀಡಿದರು.
ಜನರ ಸೇವೆ ಮಾಡುತ್ತಾ ಹಳ್ಳಿಯ ಸೊಬಗನ್ನು ಕಾಪಾಡಿ ಎಂದು ಈ ಸಂದರ್ಭದಲ್ಲಿ ರಾಜ್ಯಪಾಲರು ಸಲಹೆ ನೀಡಿದರು. ನಾವು ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳಾಗಿದ್ದು, ಸಮಾಜಕ್ಕಾಗಿ ದುಡಿಯಲು ನಮ್ಮನ್ನು ಮುಡಿಪಾಗಿಡಬೇಕು. ನಾವು ಜನರ ಸೇವಕರಾಗಿದ್ದು, ಮೊದಲು ಗ್ರಾಮದ ಜನರ ಸೇವೆ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಕುಠಾಳಿ ಶಾಸಕ ಆಂಟೊನಿ ವಾಜ್, ಪಂಚಾಯಿತಿ ಸಚಿವ ಮಾವಿನ್ ಗುದಿನ್ಹೊ, ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.