ಕೊಪಾರ್ಡಿ ಪ್ರಕರಣ: ಅತ್ಯಾಚಾರಿಗಳಿಗೆ ಗಲ್ಲು
Team Udayavani, Nov 30, 2017, 6:40 AM IST
ಅಹಮದ್‌ನಗರ: ಮಹಾರಾಷ್ಟ್ರದಾದ್ಯಂತ ಭಾರೀ ಪ್ರತಿ ಭಟನೆ, ಆಕ್ರೋಶಕ್ಕೆ ಕಾರಣವಾಗಿದ್ದ ಕೊಪಾರ್ಡಿ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಮೂವರು ತಪ್ಪಿತಸ್ಥರಿಗೆ ಗಲ್ಲುಶಿಕ್ಷೆ ವಿಧಿಸಿ ಬುಧವಾರ ಇಲ್ಲಿನ ಸೆಷನ್ಸ್ ಕೋರ್ಟ್ ತೀರ್ಪಿತ್ತಿದೆ.
2016ರಲ್ಲಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರಗೈದಿದ್ದ ಮೂವರು ಯುವಕರು, ನಂತರ ಆಕೆಯನ್ನು ಬರ್ಬರವಾಗಿ ಕೊಲೆ ಮಾಡಿದ್ದರು. ಅತ್ಯಾಚಾರದ ಬಳಿಕ ಅವಳ ದೇಹಕ್ಕಿಡೀ ಗಾಯ ಮಾಡಿದ್ದ ಅಪರಾಧಿಗಳು, ಕೈಕಾಲುಗಳನ್ನೂ ಮುರಿದು ಹಾಕಿದ್ದರು. ಘಟನೆಯ ಭೀಕರತೆಯನ್ನು ಪರಿಗಣಿಸಿದ ನ್ಯಾಯಾಲಯ, ಮೂವರು ಆರೋಪಿಗಳನ್ನೂ ದೋಷಿಗಳು ಎಂದು ನ.18ರಂದು ತೀರ್ಪು ನೀಡಿತ್ತು. ಬುಧವಾರ ಶಿಕ್ಷೆ ಘೋಷಿಸಿದ ನ್ಯಾಯಾಲಯ, ಅಪರಾಧಿಗಳಿಗೆ ಮರಣದಂಡನೆಯೇ ಸೂಕ್ತ ಎಂದಿದೆ. ತೀರ್ಪು ಕುರಿತು ಪ್ರತಿಕ್ರಿಯಿಸಿರುವ ಬಾಲಕಿಯ ತಾಯಿ, “ನನ್ನ ಮಗಳಿಗೆ ಇಂದು ನಿಜವಾದ ನ್ಯಾಯ ಸಿಕ್ಕಿತು,’ ಎಂದಿದ್ದಾರೆ.
ಕೊಪಾರ್ಡಿ ಪ್ರಕರಣವನ್ನು ಖಂಡಿಸಿ ಅಂದು ಮರಾಠರು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ನಡೆಸಿದ್ದರು. ಅಲ್ಲದೆ, ಮುಖ್ಯಮಂತ್ರಿ ರಾಜಿನಾಮೆಗೂ ಒತ್ತಾಯ ಕೇಳಿ ಬಂದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
MUST WATCH
ಹೊಸ ಸೇರ್ಪಡೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ
Pro Kabaddi League: ಪಾಟ್ನಾ ಪೈರೆಟ್ಸ್ ಪರಾಕ್ರಮ
Ranji match: ಉತ್ತರಪ್ರದೇಶ ಬೃಹತ್ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.