ಕೋವಿಡ್ 19 ತಲ್ಲಣ: ದೇಶದ 75 ಜಿಲ್ಲೆಗಳು ; ಕರ್ನಾಟಕದ 9 ಜಿಲ್ಲೆಗಳು ಲಾಕ್ ಡೌನ್
Team Udayavani, Mar 22, 2020, 3:27 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ನವದೆಹಲಿ: ಕೋವಿಡ್ 19 ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇಶದ 75 ಜಿಲ್ಲೆಗಳನ್ನು ಮಾ. 31ರವರೆಗೆ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.
ಸೋಮವಾರದಿಂದಲೇ ಇದು ಜಾರಿಗೆ ಬರಲಿದೆ. ಲಾಕ್‌ಡೌನ್ ಪಟ್ಟಿಗೆ ಹೆಚ್ಚಿನ ಜಿಲ್ಲೆಗಳನ್ನು ಸೇರಿಸುವ ಬಗ್ಗೆ ಮುಂದಿನ ಸ್ಥಿತಿಗಳನ್ನು ನೋಡಿಕೊಂಡು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳುವಂತೆ ಎಲ್ಲಾ ರಾಜ್ಯ ಸರ್ಕಾರಗಳಿಗೆ ಸೂಚಿಸಲಾಗಿದೆ.
ಕಾರ್ಯದರ್ಶಿಗಳ ಸಭೆಯಲ್ಲಿ ನಿರ್ಧಾರ
ನವದೆಹಲಿಯಲ್ಲಿ ಭಾನುವಾರ ನಡೆದ ಎಲ್ಲಾ ರಾಜ್ಯ ಸರ್ಕಾರಗಳ ಪ್ರಧಾನ ಕಾರ್ಯದರ್ಶಿಗಳ, ಕೇಂದ್ರ ಸಂಪುಟ ಕಾರ್ಯದರ್ಶಿಗಳ ಹಾಗೂ ಪ್ರಧಾನಿಯವರ ಪ್ರಧಾನ ಕಾರ್ಯದರ್ಶಿಯವರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜೊತೆಗೆ, ರಾಜ್ಯಗಳ ನಡುವಿನ ಎಲ್ಲಾ ರೀತಿಯ ಸಂಚಾರಗಳನ್ನು ಮಾ. 31ರವರೆಗೆ ರದ್ದುಗೊಳಿಸಲು ನಿರ್ಧರಿಸಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರಗಳು ಸುತ್ತೋಲೆ ಹೊರಡಿಸುವ ಬಗ್ಗೆ ಹಾಗೂ ಲಾಕ್‌ಡೌನ್ ಆದ ನಗರಗಳಲ್ಲಿ ಅಗತ್ಯ ಸೇವೆಗಳನ್ನು ಮಾತ್ರವೇ ಮುಂದುವರಿಸುವ ಬಗ್ಗೆಯೂ ಎಂದು ಸಭೆಯಲ್ಲಿ ನಿರ್ಧರಿಸಲಾಯಿತು ಎಂದು ಕೇಂದ್ರ ಗೃಹ ಇಲಾಖೆ ಪ್ರಕಟಿಸಿದೆ.
ಕರ್ನಾಟಕದಲ್ಲಿ 9 ಜಿಲ್ಲೆ ಬಂದ್
ಲಾಕ್‌ಡೌನ್ ಆಗುವ ಜಿಲ್ಲೆಗಳ ಪಟ್ಟಿಯಲ್ಲಿ ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ, ಪಂಜಾಬ್, ತಮಿಳುನಾಡು, ಕೇರಳದ ಆಯ್ದ ಜಿಲ್ಲೆಗಳು ಸೇರಿವೆ. ಕರ್ನಾಟಕದಲ್ಲಿ ಒಟ್ಟು 9 ಜಿಲ್ಲೆಗಳು ಬಂದ್ ಆಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು, ದ.ಕ, ಕಲಬುರಗಿ, ಬೆಳಗಾವಿ, ಕೊಡಗು ಹಾಗೂ ಧಾರವಾಡ ಈ ಪಟ್ಟಿಯಲ್ಲಿ ಸೇರಿವೆ. ಅತ್ತ, ಗುಜರಾತ್ ಸರ್ಕಾರ, ಅಹ್ಮದಾಬಾದ್, ಸೂರತ್, ರಾಜ್‌ಕೋಟ್, ವಡೋದರಾ ನಗರಗಳನ್ನು ಬಂದ್ ಮಾಡುವುದಾಗಿ ಪ್ರಕಟಿಸಿದೆ.
ರೈಲು, ಮೆಟ್ರೋ ಸಂಚಾರ ರದ್ದು
ಎಪ್ಪತ್ತೈದು ನಗರಗಳನ್ನು ಲಾಕ್‌ಡೌನ್ ಮಾಡುವ ನಿರ್ಧಾರ ಪ್ರಕಟವಾದ ಬೆನ್ನಲ್ಲೇ ರೈಲ್ವೆ ಇಲಾಖೆಯು, ಮಾ. 31ರವರೆಗೆ ರೈಲು ಸಂಚಾರ ರದ್ದುಗೊಳಿಸುವುದಾಗಿ ತಿಳಿಸಿದೆ. ರೈಲು ಸಂಚಾರ ಮಾತ್ರವಲ್ಲದೆ, ವಿವಿಧ ನಗರಗಳ ಮೆಟ್ರೋ ರೈಲು, ಇಂಟರ್ ಸಿಟಿ ಪ್ಯಾಸೆಂಜರ್ ರೈಲು ಸಂಚಾರವನ್ನೂ ಮಾ. 31ರವರೆಗೆ ನಿಲ್ಲಿಸಲಾಗುವುದು. ಆದರೆ, ಗೂಡ್ಸ್ ರೈಲು ಸಂಚಾರಕ್ಕೆ ಈ ನಿರ್ಬಂಧ ಇರುವುದಿಲ್ಲ ಎಂದು ಇಲಾಖೆ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?
Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.