ಜಾತಿ ಸಂತುಲನೆಗಾಗಿ ಕೋವಿಂದ್ ರಾಷ್ಟ್ರಪತಿಯಾದರು: ರಾಜಸ್ಥಾನ CM ಗೆಹಲೋಟ್ ವಿವಾದ
Team Udayavani, Apr 17, 2019, 5:39 PM IST
ಜೈಪುರ : 2017ರ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಜಾತಿ ಸಂತುಲನೆಗಾಗಿ ರಾಮನಾಥ್ ಕೋವಿಂದ್ ಅವರನ್ನು ಭಾರತದ ರಾಷ್ಟ್ರಪತಿಯನ್ನಾಗಿ ಮಾಡಲಾಯಿತು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಇಂದು ಬುಧವಾರ ಹೇಳಿರುವುದು ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
“2017ರ ಗುಜರಾತ್ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಮ ನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿನ್ನಾಗಿ ಮಾಡಲಾಯಿತು ಎಂದು ಜನರು ಕೂಡ ಹೇಳುತ್ತಾರೆ. ನಾನೊಂದು ಲೇಖನವನ್ನು ಓದುತ್ತಿದ್ದೆ. ಅದರಲ್ಲಿ ಗುಜರಾತ್‌ನಲ್ಲಿ ತನಗೆ ಸರಕಾರ ರಚಿಸಲಾಗದು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಭಯ ಇರುವಂತಿದೆ ಎಂದು ಹೇಳಲಾಗಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೊಟ್ಟ ಸಲಹೆಯನ್ನು ಅನುಸರಿಸಿ ರಾಮ ನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಲು ತೀರ್ಮಾನಿಸಲಾಯಿತು’ ಎಂದು ಗೆಹಲೋಟ್ ಅವರು ಸುದ್ದಿ ಗೋಷ್ಠಿಯಲ್ಲಿ ಪತ್ರಕರ್ತರಿಗೆ ಹೇಳಿದರು.
ಕೋವಿಂದ್ ಅವರನ್ನು 2017ರ ಜುಲೈಯಲ್ಲಿ ದೇಶದ ರಾಷ್ಟ್ರಪತಿಯನ್ನಾಗಿ ಚುನಾಯಿಸಲಾಯಿತು ಮತ್ತು ಆ ವರ್ಷ ಡಿಸೆಂಬರ್ ನಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆದವು.
‘ದೇಶದ ಜನರು ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಆಡ್ವಾಣಿ ಅವರು ದೇಶದ ರಾಷ್ಟ್ರಪತಿಯಾಗುವರೆಂದು ಭಾವಿಸಿದ್ದರು. ಆದರೆ ಬಿಜೆಪಿ ಅವರ ಹೆಸರನ್ನು ಕೈಬಿಟ್ಟಿತು. ರಾಮ ನಾಥ್ ಕೋವಿಂದ್ ಅವರನ್ನು ಅವರ ಜಾತಿಗಾಗಿ ದೇಶದ ರಾಷ್ಟ್ರಪತಿನ್ನಾಗಿ ಮಾಡಿತು. ಇದು ಬಿಜೆಪಿಯ ಆಂತರಿಕ ವಿಷಯವೇ ಆದರೂ ಆ ಬಗ್ಗೆ ನಾನು ಲೇಖನ ಓದಿರುವುದರಿಂದ ಪ್ರತಿಕ್ರಿಯಿಸುತ್ತಿದ್ದೇನೆ’ ಎಂದು ಗೆಹಲೋಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.