ಕೃಷ್ಣಗಿರಿ: ವಿಕೆ ಶಶಿಕಲಾ ಇಬ್ಬರು ಬೆಂಬಲಿಗರ ಕಾರು ಬೆಂಕಿಗಾಹುತಿ: ಏನಿದು ಘಟನೆ
ವಿಕೆ ಶಶಿಕಲಾ ಹೊಸೂರಿನಲ್ಲಿರುವ ಮಾರಿಯಮ್ಮ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
Team Udayavani, Feb 8, 2021, 12:33 PM IST
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಿದ್ದ ಎಐಎಡಿಎಂಕೆ ಉಚ್ಛಾಟಿತ ನಾಯಕಿ ವಿ.ಕೆ.ಶಶಿಕಲಾ ಸೋಮವಾರ (ಫೆ.08) ತಮಿಳುನಾಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬೆಂಬಲಿಗರ ಎರಡು ಕಾರುಗಳು ಆಕಸ್ಮಿಕವಾಗಿ ಬೆಂಕಿ ಹಿಡಿದು ಸುಟ್ಟು ಹೋದ ಘಟನೆ ಕೃಷ್ಣಗಿರಿ ಟೋಲ್ ಗೇಟ್ ಸಮೀಪ ನಡೆದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಇದನ್ನೂ ಓದಿ:ಏನಿದು FDI ಸಂಚು, ಆಂದೋಲನ್ ಜೀವಿ ಬಗ್ಗೆ ಎಚ್ಚರಿಕೆ ಇರಲಿ; ಪ್ರಧಾನಿ ಮೋದಿ ವ್ಯಾಖ್ಯಾನ
ಕರ್ನಾಟಕದ ಗಡಿ ದಾಳಿ ಶಶಿಕಲಾ ತಮಿಳುನಾಡಿನತ್ತ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಇಬ್ಬರು ಬೆಂಬಲಿಗರ ಕಾರಿನಲ್ಲಿ ತುಂಬಿದ್ದ ಪಟಾಕಿ ಸಿಡಿದು ಬೆಂಕಿಹೊತ್ತಿಕೊಂಡ ಪರಿಣಾಮ ಕಾರು ಬೆಂಕಿಗಾಹುತಿಯಾಗಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದೆ.
ಘಟನೆ ವಿಷಯ ತಿಳಿದು ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ ಎಂದು ವರದಿ ಹೇಳಿದೆ. ಏತನ್ಮಧ್ಯೆ ವಿಕೆ ಶಶಿಕಲಾ ಹೊಸೂರಿನಲ್ಲಿರುವ ಮಾರಿಯಮ್ಮ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಎಐಎಡಿಎಂಕೆಯ ಉಚ್ಛಾಟಿತ ನಾಯಕಿ ವಿ.ಕೆ. ಶಶಿಕಲಾ ತಮಿಳುನಾಡಿ ನಾದ್ಯಂತ ಹಿಂಸೆ ನಡೆಸಲು ಸಂಚು ರೂಪಿಸುತ್ತಿದ್ದು, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಡಳಿತ ಪಕ್ಷ ಭಾನುವಾರ ಪೊಲೀಸರಿಗೆ ದೂರು ನೀಡಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಿಂದ ಬಿಡುಗಡೆಯಾಗಿ ರುವ ಶಶಿಕಲಾ ಸೋಮ ವಾರ ತಮಿಳುನಾಡು ಪ್ರವೇಶಿಸಲಿರುವಂತೆಯೇ ಈ ಬೆಳವಣಿಗೆ ನಡೆದಿದೆ.
ಏಪ್ರಿಲ್- ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ದಿ.ಜಯಲಲಿತಾ ಆಪ್ತೆ ರಾಜಕೀಯವಾಗಿ ಯಾವ ನಿರ್ಧಾರ ಕೈಗೊಳ್ಳಲಿದ್ದಾರೆ ಎಂಬ ಅಂಶ ಇನ್ನೂ ಸ್ಪಷ್ಟವಾಗಿಲ್ಲ. ಎಐಎಡಿಎಂಕೆ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಅಮ್ಮಾ ಮಕ್ಕಳ್ ಮುನ್ನೇತ್ರ ಕಳಗಂ ಪಕ್ಷದ ಸಂಸ್ಥಾಪಕ, ಶಾಸಕ ಟಿ.ಟಿ.ವಿ.ದಿನಕರನ್, ಇದು ತೇಜೋವಧೆಯ ತಂತ್ರ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Maharastra: ಚುನಾವಣಾ ರ್ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.