Road Mishap: KSRTC ಬಸ್‌ಗಳ ನಡುವೆ ಅಪಘಾತ, 30 ಮಂದಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರ
Team Udayavani, Nov 26, 2023, 10:19 AM IST
ತಿರುವನಂತಪುರಂ: ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 30 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಿರುವನಂತಪುರಂ-ನಾಗರ್‌ಕೋಯಿಲ್ ಹೆದ್ದಾರಿಯ ನೆಯ್ಯಟ್ಟಿಂಕರಾದ ಮೂನ್ನುಕಲ್ಲಿಮೂಡು ಎಂಬಲ್ಲಿ ಶನಿವಾರ ರಾತ್ರಿ 10.30 ರ ಸುಮಾರಿಗೆ ಸಂಭವಿಸಿದೆ.
ಅಪಘಾತದಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡು ಬಸ್ಸಿನ ಚಾಲಕರಾದ ಅನಿಲ್ ಕುಮಾರ್ ಮತ್ತು ಎಂ ಎಸ್ ಸುನಿ ಅವರು ಬಸ್ಸಿನೊಳಗೆ ಸಿಲುಕಿಕೊಂಡಿದ್ದು ಅಗ್ನಿಶಾಮಕ ತಂಡ ಹಾಗೂ ರಕ್ಷಣಾ ತಂಡದ ಕಾರ್ಯಾಚರಣೆಯ ಬಳಿಕ ಇಬ್ಬರನ್ನು ಹೊರತೆಗೆಯಲಾಯಿತು. ಡಿಕ್ಕಿಯ ರಭಸಕ್ಕೆ ಎರಡು ಬಸ್‌ಗಳ ಮುಂಭಾಗ ತೀವ್ರ ಜಖಂಗೊಂಡಿದೆ.
ತಿರುವನಂತಪುರದಿಂದ ನೆಯ್ಯಟ್ಟಿಂಕರಕ್ಕೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೇರೊಂದು ವಾಹನವನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಎದುರುಗಡೆಯಿಂದ ಬರುತ್ತಿದ್ದ ಮತ್ತೊಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಎರಡೂ ಬಸ್ಸುಗಳು ಅತಿವೇಗದಲ್ಲಿ ಚಲಿಸುತ್ತಿದ್ದವು ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಿಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
#WATCH | Kerala | Over 30 people injured in a collision between two buses of Kerala State Road Transport Corporation (KSRTC) in Neyyattinkara on the Thiruvananthapuram-Kanyakumari highway last night. The injured people were admitted to Thiruvananthapuram Medical College Hospital,… pic.twitter.com/A3Ft9NvK05
— ANI (@ANI) November 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.