KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Team Udayavani, Jan 1, 2025, 5:32 AM IST
ಹೈದ್ರಾಬಾದ್: ಫಾರ್ಮುಲಾ ಇ ರೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿರುವ ಎಫ್ಐಆರ್ ರದ್ದು ಕೋರಿದ್ದ ಬಿಆರ್ಎಸ್ ಕಾರ್ಯಾಧ್ಯಕ್ಷ ಕೆ.ಟಿ.ರಾಮರಾವ್ (ಕೆಟಿಆರ್) ಅರ್ಜಿ ವಿಚಾರಣೆ ನಡೆಸಿರುವ ತೆಲಂಗಾಣ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಜತೆಗೆ, ಕೆಟಿಆರ್ ಅವರನ್ನು ಬಂಧಿಸದಂತೆ ನೀಡಿದ್ದ ಮಧ್ಯಂತರ ಆದೇಶವನ್ನೂ ಮುಂದುವರಿಸಿದೆ.
ಬಿಆರ್ಎಸ್ ಆಡಳಿತದಲ್ಲಿದ್ದಾಗ, ಜಾಗತಿಕ ಗಮನ ಸೆಳೆಯಲು ಹೈದ್ರಾಬಾದ್ನಲ್ಲಿ ಫಾರ್ಮುಲಾ ಇ ರೇಸ್ ಆಯೋಜಿಸಲಾಗಿತ್ತು. ಈ ವೇಳೆ, ಸೂಕ್ತ ಒಪ್ಪಿಗೆಗಳಿಲ್ಲದೆ 55 ಕೋಟಿ ರೂ. ಹಣವನ್ನು ಸಂಘಟಕರಿಗೆ ನೀಡಿದ ಆರೋಪವಿದೆ. ಇದರಲ್ಲಿ ಒಂದಿಷ್ಟು ಹಣವನ್ನು ವಿದೇಶಿ ಕರೆನ್ಸಿಗಳಲ್ಲೂ ನೀಡಲಾಗಿದೆ ಎಂಬ ಆರೋಪವಿದೆ. ಈ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಕೇಸ್ ದಾಖಲಿಸಿ, ತನಿಖೆ ನಡೆಸುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.