ಉನ್ನಾವೋ ಸಂತ್ರಸ್ಥೆಯ ತಂದೆ ಹತ್ಯೆ ಪ್ರಕರಣದಲ್ಲೂ ಕುಲದೀಪ್ ಸೆಂಗಾರ್ ದೋಷಿ
Team Udayavani, Mar 4, 2020, 3:22 PM IST
ಹೊಸದಿಲ್ಲಿ: ಉನ್ನಾವೋ ಅತ್ಯಾಚಾರ ಸಂತ್ರಸ್ಥೆಯ ತಂದೆಯ ಹತ್ಯೆ ಪ್ರಕರಣದಲ್ಲೂ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸೆಂಗಾರ್ ದೋಷಿ ಎಂದು ತೀಸ್ ಹಜಾರಿ ನ್ಯಾಯಾಲಯ ತೀರ್ಪು ನೀಡಿದೆ. ಅತ್ಯಾಚಾರ ಪ್ರಕರಣದಲ್ಲಿ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾರೆ.
2018ರ ಎಪ್ರಿಲ್ ನಲ್ಲಿ ಸಂತ್ರಸ್ಥೆಯ ತಂದೆಗೆ ಸೆಂಗಾರ್ ಸಹೋದರ ಅಟುಲ್ ಸೆಂಗಾರ್ ಮತ್ತು ಸಹಚರರು ಮನಸೋ ಇಚ್ಛೆ ಥಳಿಸಲಾಗಿತ್ತು. ನಂತರ ಪೊಲೀಸರು ಅವರನ್ನು ಆಸ್ಪತ್ರೆಗೆ ಸಾಗಿಸುವ ಬದಲು ಠಾಣೆಗೆ ಕರೆದೊಯ್ದಿದ್ದರು. ಇದಾದ ಎರಡು ದಿನಗಳ ಬಳಿಕ ಅವರು ಠಾಣೆಯಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಲದೀಪ್ ಸೆಂಗಾರ್, ಆತನ ಸಹೋದರ ಅಟುಲ್ ಸೆಂಗಾರ್, ಪೊಲೀಸ್ ಠಾಣಾ ಇನ್ ಚಾರ್ಜ್ ಅಶೋಕ್ ಸಿಂಗ್ ಭಡೌರಿಯಾ, ಸಬ್ ಇನ್ಸ್ ಪೆಕ್ಟರ್ ಕಮ್ಟಾ ಪ್ರಸಾದ್, ಪೇದೆ ಅಮೀರ್ ಖಾನ್ ಸೇರಿದಂತೆ ಇತರೆ 6 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿತ್ತು. ಸದ್ಯ ಕೋರ್ಟ್ ನಾಲ್ಕು ಜನರನ್ನು ಪ್ರಕರಣದಿಂದ ಖುಲಾಸೆ ಮಾಡಿದ್ದು, ಕುಲದೀಪ್ ಸೆಂಗಾರ್ ಸೇರಿ ಏಳು ಜನರನ್ನು ಅಪರಾಧಿ ಎಂದು ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
MUST WATCH
ಹೊಸ ಸೇರ್ಪಡೆ
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Shimoga; ವಿಜಯೇಂದ್ರರನ್ನು ಕಟ್ಟಿ ಹಾಕಲು ಕಾಂಗ್ರೆಸ್ ನಿಂದ ಸುಳ್ಳು ಆರೋಪ: ರಾಘವೇಂದ್ರ
Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.