ಕುಂಭ ಮೇಳ ಕೋವಿಡ್ ಸೂಪರ್ ಸ್ಪ್ರೆಡರ್..? : ಅಧಿಕಾರಿಗಳ ಆತಂಕ
Team Udayavani, Apr 6, 2021, 5:47 PM IST
ನವ ದೆಹಲಿ : ದೇಶದಲ್ಲಿ ಕೋವಿಡ್ ನ ರೂಪಾಂತರಿ ಅಲೆ ದಿನೇ ದಿನೇ ಆತಂಕವನ್ನು ಹೆಚ್ಚಿಸುತ್ತಿದೆ. ಸರ್ಕಾರ ಎಷ್ಟೇ ಪ್ರಯತ್ನ ಪಟ್ಟರೂ ಕೋವಿಡ್ ನಿಯಂತ್ರಿಸಲು ಆಗುತ್ತಿಲ್ಲ. ಈಗಾಗಲೇ ಮಹಾರಾಷ್ಟ್ರ, ದೆಹಲಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಮೂಲಕ ಸರ್ಕಾರ ಕಟ್ಟುನಿಟ್ಟಿನ ಕ್ರಮ ಜಾರಿಗೊಳಿಸಿದೆ.
ಸ್ವಲ್ಪ ಮಟ್ಟಿಗೆ ಚೇತರಿಕೆಗೊಂಡಿದ್ದ ಕೋವಿಡ್ ಸ್ಥಿತಿ ಈಗ ಮತ್ತೆ ದೇಶವನ್ನು ಸಮಸ್ಯೆಗೆ ಸಿಲುಕಿಸಿದೆ. ಈ ನಡುವೆ ಸೋಂಕಿನ ಹರಡುವಿಕೆಗೆ ಕುಂಭ ಮೇಳವು ಕಾರಣವಾಗಿರುವ ಸಾಧ್ಯತೆ ಇದೆ ಎಂದು ಸರ್ಕಾರ ಉನ್ನತ ಮಟ್ಟದ ಅಧಿಕಾರಿಗಳ ತಂಡ ತಿಳಿಸಿದೆ.
ಉತ್ತರಾಖಂಡದ ಹರಿದ್ವಾರದಲ್ಲಿ ಏಪ್ರಿಲ್ 1ರಿಂದ ಕುಂಭ ಮೇಳ ನಡೆಯುತ್ತಿದ್ದು, ಇದು ಕೋವಿಡ್ ಸೋಂಕು ಮತ್ತಷ್ಟು ಹರಡುವಿಕೆಯ ವೇಗವನ್ನು ಪಡೆಯಲು ಕಾರಣವಾಗಬಹುದು ಎಂದು ಅಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ.
ಓದಿ : ಭ್ರಷ್ಟಾಚಾರ ಪ್ರಕರಣ : ಬಾಂಬೆ ಹೈಕೋರ್ಟ್ ಆದೇಶ ಪ್ರಶ್ನಿಸಿ ‘ಮಹಾ’ ಸರ್ಕಾರ ಸುಪ್ರೀಂ ಮೊರೆ
ಕೋವಿಡ್ ಪರಿಸ್ಥಿತಿ ಕುರಿತು ಕಾರ್ಯದರ್ಶಿ ಮಟ್ಟದಲ್ಲಿ ಉನ್ನತ ಸಭೆ ನಡೆದಿದ್ದು, ಈ ವೇಳೆ ಕುಂಭ ಮೇಳ ನಡೆಯುತ್ತಿರುವ ಬಗ್ಗೆ ಕೆಲವು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.
ಕುಂಭ ಮೇಳವು ಕೋವಿಡ್ ನ ಸೂಪರ್ ಸ್ಪ್ರೆಡರ್ ಆಗುವ ಸಾಧ್ಯತೆ ಇದೆ ಎಂದು ಕೆಲವು ಅಧಿಕಾರಿಗಳು ಆತಂಕ ಪಟ್ಟಿದ್ದಾರೆ. ಈ ಹಿನ್ನಲೆ ನಿಗದಿಗೂ ಮೊದಲೇ ಕಾರ್ಯಕ್ರಮವನ್ನು ಮುಗಿಸುವುದು ಒಳಿತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಸುದ್ದಿ ಸಂಸ್ಥೆ ಎ ಎನ್ ಐ ವರದಿ ಮಾಡಿದೆ.
ಕುಂಭ ಮೇಳಕ್ಕೆ ಭೇಟಿ ನೀಡುವ ಸಾಧುಗಳು, ಭಕ್ತರು ಮಾಸ್ಕ್ ಧರಿಸುವ ಬಗ್ಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳುವುದು ಅವಶ್ಯವಾಗಿದೆ, ಇದಕ್ಕಾಗಿ ಕೇಂದ್ರದಿಂದ ರಚನೆಯಾಗಿರುವ ತಂಡ ಧಾರ್ಮಿಕ ಮುಖಂಡರ ಸಹಾಯವನ್ನು ಪಡೆಯಬೇಕಿದೆ. ಸರ್ಕಾರವು ಕೂಡ ಸೋಂಕಿನ ಕುರಿತು ಜನರಿಗೆ ಟಿವಿ, ರೇಡಿಯೋ, ಸಾರ್ವಜನಿಕ ಪೋಸ್ಟರ್ ಮೂಲಕ ಅರಿವು ಮೂಡಿಸಬೇಕಿದೆ ಎಂದು ಸರ್ಕಾರ ಸೂಚಿಸಿದೆ ಎಂದು ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ಮಾಡಿವೆ.
ಓದಿ : ಸಾರಿಗೆ ನೌಕರರ ಮುಷ್ಕರ : ನಾಳೆ 5 ನಿಮಿಷಕ್ಕೊಂದು ಮೆಟ್ರೋ ರೈಲು!
ಇನ್ನು ಈ ಕುಂಭಮೇಳವನ್ನು ಸಮಯಕ್ಕೂ ಮೊದಲೇ ಮುಕ್ತಾಯಗೊಳಿಸುವ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಯಾವುದೇ ರೀತಿಯ ಯೋಜನೆ ರೂಪಿಸಿಲ್ಲ. ಉತ್ತರಾಖಂಡ ಸರ್ಕಾರಕ್ಕೆ ಎಚ್ಚರಿಕೆಯ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದೆ ಎಂಸು ಸುದ್ದಿ ಮೂಲಗಳು ತಿಳಿಸಿವೆ.
ಈ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಉತ್ತರಾಖಂಡ ಸರ್ಕಾರ ಕಟ್ಟುನಿಟ್ಟಿನ ಕೋವಿಡ್ ಮಾರ್ಗಸೂಚಿ ಪ್ರಕಟ ಮಾಡಿದ್ದು, ನಿಯಮಗಳ ಉಲ್ಲಂಘನೆ ಮಾಡಿದ್ದಲ್ಲಿ ದಂಡ ವಿಧಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. ಮಾತ್ರವಲ್ಲದೇ, ಕುಂಭ ಮೇಳಕ್ಕೆ ಆಗಮಿಸುವವರು 72ಗಂಟೆಗಳ ಮುನ್ನ ಆರ್ ಟಿ ಪಿ ಸಿ ಆರ್ ಪರೀಕ್ಷೆಗೆ ಒಳಗಾಗಬೇಕಿದ್ದು, ನೆಗಟಿವ್ ವರದಿ ಕಡ್ಡಾಯವಾಗಿದೆ.
ಇನ್ನು, ನಿಗದಿಯಾದಂತೆಯೇ ಕುಂಭ ಮೇಳ ನಡೆದರೆ, ಏಪ್ರಿಲ್ 1 ರಿಂದ ಆರಂಭವಾಗಿರುವ ಈ ಕುಂಭಮೇಳ ಏಪ್ರಿಲ್ 30ರವರೆಗೆ ನಡೆಯಲಿದೆ.
ಓದಿ : ನಾಳೆ ಸಾರಿಗೆ ನೌಕಕರ ಮುಷ್ಕರ : ಪ್ರಯಾಣಿಕರಿಗೆ ಇಂದೇ ತಟ್ಟಿದ ಬಿಸಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.