ಎಷ್ಟು ಜನರನ್ನು ಬಂಧಿಸಿದ್ದೀರಿ?: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
Team Udayavani, Oct 8, 2021, 6:40 AM IST
ಲಕ್ನೋ/ಹೊಸದಿಲ್ಲಿ: “ಲಖೀಂಪುರ ಖೇರಿಯಲ್ಲಿ 8 ಮಂದಿ ಸಾವಿಗೀಡಾಗಿ 4 ದಿನಗಳು ಕಳೆದವು. ನೀವು ಎಷ್ಟು ಮಂದಿಯನ್ನು ಬಂಧಿಸಿದ್ದೀರಿ? ಯಾರ ವಿರುದ್ಧ ಎಫ್ಐಆರ್ ದಾಖಲಿಸಿದ್ದೀರಿ?’
ಇದು ಉತ್ತರಪ್ರದೇಶ ಸರಕಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಕೇಳಿರುವ ಪ್ರಶ್ನೆ. ಲಖೀಂಪುರ ಘರ್ಷಣೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸಿಜೆಐ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ, “ಲಖೀಂಪುರ ಘಟನೆಯು ಅತ್ಯಂತ ದುರದೃಷ್ಟಕರ. ನಾಳೆಯೇ (ಶುಕ್ರವಾರ) ನಮಗೆ ಈ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸಬೇಕು. ಹತ್ಯೆಗೀಡಾದ 8 ಮಂದಿ ಯಾರು? ಯಾರ ವಿರುದ್ಧ
ಎಫ್ಐಆರ್ ದಾಖಲಾಗಿದೆ? ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಎಂಬೆಲ್ಲ ವಿವರವನ್ನೂ ನಮಗೆ ನೀಡಬೇಕು’ ಎಂದು ಸೂಚಿಸಿತು.
“ವಿಚಾರಣೆ ವೇಳೆ ನಮಗೆ ಬಂದಿರುವ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯೊಬ್ಬರ ತಾಯಿಯು ತನ್ನ ಮಗನನ್ನು ಕಳೆದುಕೊಂಡು ಆಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಉ.ಪ್ರದೇಶ ಸರಕಾರ ಕೂಡಲೇ ವೈದ್ಯಕೀಯ ಚಿಕಿತ್ಸೆಗೆ ನೆರವಾಗಬೇಕು’ ಎಂದು ನ್ಯಾಯಪೀಠ ಹೇಳಿದೆ.
ಇಬ್ಬರು ವಶಕ್ಕೆ: ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಉತ್ತರಪ್ರದೇಶ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ತಲೆಮರೆಸಿಕೊಂಡಿದ್ದಾರೆ. ತನಿಖೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಸಮನ್ಸ್‌ಗೆ ಪ್ರತಿಕ್ರಿಯಿಸದಿದ್ದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿಪಿ ಲಕ್ಷ್ಮೀ ಸಿಂಗ್ ಹೇಳಿದ್ದಾರೆ. ಜತೆಗೆ ಆಶಿಷ್ ಮಿಶ್ರಾಗೆ ಕಳುಹಿಸಲಾಗಿರುವ ಸಮನ್ಸ್‌ಗೆ ಯಾವುದೇ ಕಾಲಮಿತಿ ಹೇರಲಾಗಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ವಶಕ್ಕೆ ಪಡೆಯಲಾದ ಇಬ್ಬರು ಆರೋಪಿಗಳ ಕುರಿತು ಮಾಹಿತಿಯನ್ನೂ ಅವರು ನೀಡಿಲ್ಲ.
ಹರಿಯಾಣದಲ್ಲಿ ರೈತನಿಗೆ ಗಾಯ: ಹರಿಯಾಣದ ಅಂಬಾಲಾದಲ್ಲಿ ಗುರುವಾರ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವಾಗ ಬಿಜೆಪಿ ನಾಯಕರೊಬ್ಬರ ಬೆಂಗಾವಲು ಪಡೆಯ ವಾಹನ ಢಿಕ್ಕಿ ಹೊಡೆದು ರೈತರೊಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖಾ ಆಯೋಗ ರಚನೆ: ಲಖೀಂಪುರ ಘಟನೆಯ ತನಿಖೆಗಾಗಿ ಉ.ಪ್ರದೇಶ ಸರಕಾರ ಗುರುವಾರ ಏಕಸದಸ್ಯ ನ್ಯಾಯಾಂಗ ಆಯೋಗವನ್ನು ರಚಿಸಿದೆ. ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಈ ಆಯೋಗದ ನೇತೃತ್ವ ವಹಿಸಿದ್ದಾರೆ. ಇದೇ ವೇಳೆ, “ಪ್ರಕರಣದ ತನಿಖೆಯನ್ನು ನಿವೃತ್ತ ನ್ಯಾಯಮೂರ್ತಿಯ ಬದಲಿಗೆ ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನಡೆಸಬೇಕು’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಆಗ್ರಹಿಸಿದ್ದಾರೆ.
ವಿಪಕ್ಷಗಳ ಕೆಲವು ನಾಯಕರು ದೇಶದಲ್ಲಿ ಹಿಂಸೆ ಮತ್ತು ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಲಖೀಂಪುರದಲ್ಲಿ ನಡೆದ ಘಟನೆ ಖಂಡನೀಯ. ಈ ಕುರಿತು ತನಿಖೆಗೆ ಆಯೋಗ ರಚಿಸಿರುವ ಉತ್ತರ ಪ್ರದೇಶ ಸರಕಾರದ ಕ್ರಮವನ್ನು ಶ್ಲಾಘಿಸುತ್ತೇನೆ.-ಇಂದ್ರೇಶ್ ಕುಮಾರ್, ಆರೆಸ್ಸೆಸ್ ಹಿರಿಯ ನಾಯಕ
ಲಖೀಂಪುರದ ವೀಡಿಯೋ ಸ್ಫಟಿಕದಷ್ಟೇ ಸ್ಪಷ್ಟವಾಗಿದೆ. ಪ್ರತಿಭಟನಕಾರರನ್ನು ಹತ್ಯೆಯ ಮೂಲಕ ಮೌನವಾಗಿಸಲಾಗದು. ಪ್ರತಿಯೊಬ್ಬ ರೈತನ ಮನಸ್ಸಿಗೆ ಕ್ರೌರ್ಯ ಹಾಗೂ ಆಕ್ರೋಶದ ಸಂದೇಶ ರವಾನೆಯಾಗುವ ಮನ್ನ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.– ವರುಣ್ ಗಾಂಧಿ, ಬಿಜೆಪಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Gujarat: ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಪತನ; ಮೂವರು ಮೃ*ತ್ಯು
Oyo Rooms: ಮದುವೆಯಾಗದ ಜೋಡಿಗೆ ಇನ್ಮುಂದೆ ʼಓಯೋʼ ರೂಮ್ ಸಿಗೋದು ಕಷ್ಟ – ವರದಿ
Jammu and Kashmir: ಕಮರಿಗೆ ಬಿದ್ದ ವಾಹನ; ಕನಿಷ್ಠ ನಾಲ್ವರು ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.