ಸಂಸದನಿಗೆ ಹತ್ತು ವರ್ಷ ಜೈಲು ಶಿಕ್ಷೆ: ಲೋಕಸಭಾ ಸ್ಥಾನದಿಂದ ಅನರ್ಹ
Team Udayavani, Jan 14, 2023, 11:09 AM IST
ಹೊಸದಿಲ್ಲಿ: ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. 2009 ರಲ್ಲಿ ದಾಖಲಾದ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮತ್ತು ಇತರ ಮೂವರಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಲೋಕಸಭೆಯ ಸೆಕ್ರೆಟರಿಯೇಟ್ ಶುಕ್ರವಾರ ಈ ವಿಚಾರ ತಿಳಿಸಿದೆ.
ಕವರಟ್ಟಿ ಸೆಷನ್ಸ್ ನ್ಯಾಯಾಲಯದ ಶಿಕ್ಷೆಯ ಪರಿಣಾಮವಾಗಿ, ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪ ಸಂಸದೀಯ ಕ್ಷೇತ್ರವನ್ನು ಪ್ರತಿನಿಧಿಸುವ ಲೋಕಸಭಾ ಸದಸ್ಯ ಮೊಹಮ್ಮದ್ ಫೈಝಲ್ ಅವರು ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ ಎಂದು ಲೋಕಸಭೆಯ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕವರಟ್ಟಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 2009 ರಲ್ಲಿ ಅವರ ವಿರುದ್ಧ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಅಪರಾಧಿಗಳಿಗೆ ತಲಾ 1 ಲಕ್ಷ ರೂಪಾಯಿ ದಂಡ ವಿಧಿಸಿದೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ತಿಳಿಸಿದ್ದಾರೆ.
ವಕೀಲರ ಪ್ರಕಾರ, 2009 ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಸಂಸದ ಫೈಝಲ್ ಮತ್ತು ಇತರರು ಮಾಜಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಪಡನಾಥ್ ಸಾಲಿಹ್ ಮೇಲೆ ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malayalam ಕಥೆಗಾರ, ಸಾಹಿತಿ ವಾಸುದೇವನ್ ನಾಯರ್ ವಿಧಿವಶ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.