ಹುತಾತ್ಮ ಯೋಧ ವಾನಿಗೆ ಅಶೋಕ ಚಕ್ರ

Team Udayavani, Jan 25, 2019, 12:30 AM IST

w-41.jpg

ಹೊಸದಿಲ್ಲಿ: ಹಿಂದೊಮ್ಮೆ ಉಗ್ರವಾದಿಯಾಗಿ, ಅನಂತರ ಮುಖ್ಯವಾಹಿನಿಗೆ ಬಂದು ಭಾರತೀಯ ಸೇನೆಯ ಯೋಧನಾಗಿ ಹುತಾತ್ಮರಾದ ಲ್ಯಾನ್ಸ್‌ ನಾಯಕ್‌ ನಜೀರ್‌ ವಾನಿ ಅವರಿಗೆ ಸೇವೆಯಲ್ಲಿ ಮಡಿದ ಯೋಧರಿಗೆ ನೀಡಲಾಗುವ ಪ್ರತಿಷ್ಠಿತ ಗೌರವ “ಅಶೋಕ ಚಕ್ರ’ ಘೋಷಿಸಲಾಗಿದೆ. ಈ ಬಾರಿಯ ಗಣರಾಜ್ಯೋತ್ಸವ ಸಂದರ್ಭದಲ್ಲಿ ವಾನಿ ಕುಟುಂಬಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಈ ಗೌರವ ಪ್ರದಾನ ಮಾಡಲಿದ್ದಾರೆ. ಈ ವಿಶೇಷ ಗೌರವ ಪಡೆದ ಜಮ್ಮು-ಕಾಶ್ಮೀರದ ಮೊದಲ ನಾಗರಿಕ ಎಂಬ ಹೆಗ್ಗಳಿಕೆಗೆ ವಾನಿ ಪಾತ್ರರಾಗಿದ್ದಾರೆ. 

ಕುಲ್ಗಾಮ್‌ ಜಿಲ್ಲೆಯ ಅಶಿಮುಜಿ ಪ್ರಾಂತ್ಯದವರಾದ ವಾನಿ, 90ರ ದಶಕದಲ್ಲಿ ಕಾಶ್ಮೀರದ ಇಖ್ವಾನಿಸ್‌ ಎಂಬ ನುಸುಳುಕೋರ ಉಗ್ರರ ಪಡೆಯಲ್ಲಿ ಸಕ್ರಿಯ ವಾಗಿದ್ದರು. ಆದರೆ ಅನಂತರ ಮನಃಪರಿವರ್ತನೆ ಯಾಗಿ 2004ರಲ್ಲಿ ಭಾರತೀಯ ಸೇನೆ ಸೇರಿದ್ದರು. 2018ರ ನ. 25ರಂದು ಶೋಪಿಯಾನ್‌ ಜಿಲ್ಲೆಯ ಬಟಗುಂಡ್‌ ಹಳ್ಳಿಯ ಮನೆಯಲ್ಲಿ ಅಡಗಿದ್ದ ಉಗ್ರರ ತಂಡದೊಂದಿಗೆ ಹೋರಾಡುವಾಗ ಹುತಾತ್ಮರಾಗಿದ್ದರು. ಗುಂಡಿನ ದಾಳಿಯಲ್ಲಿ ಜರ್ಝರಿತರಾಗಿದ್ದರೂ ಇಬ್ಬರು ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಅವರು ಯಶಸ್ವಿಯಾಗಿದ್ದರು. 

17 ಎನ್‌ಕೌಂಟರ್‌ಗಳಲ್ಲಿ  ಭಾಗಿ
ವಾನಿ ಕಣಿವೆ ರಾಜ್ಯದಲ್ಲಿ ನಡೆದ 17 ಪ್ರಮುಖ ಎನ್‌ಕೌಂಟರ್‌ಗಳಲ್ಲಿ ಭಾಗಿಯಾಗಿದ್ದರು. ದೇಶಕ್ಕೆ ಅವರು ನೀಡಿದ ಸೇವೆಯನ್ನು ಪರಿಗಣಿಸಿ ಎರಡು ಬಾರಿ ಸೇನಾ ಪದಕವನ್ನೂ ನೀಡಿ ಗೌರವಿಸಲಾಗಿತ್ತು. ಕಾಶ್ಮೀರಿ ಯೋಧರು, ಪೊಲೀಸರು ಹಾಗೂ ಅವರ ಕುಟುಂಬ ಸದಸ್ಯರನ್ನು ಉಗ್ರರು ಟಾರ್ಗೆಟ್‌ ಮಾಡಿ ಕೊಲ್ಲುತ್ತಿದ್ದಂಥ ಘಟನೆಗಳ ಹೊರತಾಗಿಯೂ ವಾನಿ ಅವರು ಧೃತಿಗೆಡದೆ ಸೇನಾ ಕಾರ್ಯಾಚರಣೆಯಲ್ಲಿ ಭಾಗಿಯಾಗುತ್ತಿದ್ದರು. ಪ್ರತಿಕೂಲ ಪರಿಸ್ಥಿತಿಗಳಲ್ಲೂ ಧೈರ್ಯಗೆಡದೆ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದರು ಎಂದು ರಾಷ್ಟ್ರಪತಿ ಭವನದ ಪ್ರಕಟನೆಯಲ್ಲಿ ಉಲ್ಲೇಖೀಸಲಾಗಿದೆ. 

ಕೊನೆಯ ದಿನ…
ಅಂದು ಶೋಪಿಯಾನ್‌ನ ಬಂಟಗುಂಡ್‌ ಗ್ರಾಮದಲ್ಲಿ 6 ಉಗ್ರರು ಅವಿತಿದ್ದ ಮಾಹಿತಿಯ ಆಧಾರದಲ್ಲಿ ಸೇನೆ ಕಾರ್ಯಾಚರಣೆಗಿಳಿದಿತ್ತು. ಈ ವೇಳೆ ಲಷ್ಕರ್‌ ಉಗ್ರರಿಗೆ ಎಸ್ಕೇಪ್‌ ಆಗಲು ಯಾವುದೇ ದಾರಿ ಸಿಗಬಾರದೆಂದು ಎಲ್ಲ ಮಾರ್ಗಗಳನ್ನೂ ಬ್ಲಾಕ್‌ ಮಾಡುವಲ್ಲಿ ವಾನಿ ಮತ್ತು ಅವರ ತಂಡ ಮಹತ್ವದ ಪಾತ್ರ ವಹಿಸಿತ್ತು. ಈ ಸಮಯದಲ್ಲಿ ಉಗ್ರರು ಒಂದೇ ಸಮನೆ ಗ್ರೆನೇಡ್‌ ಎಸೆಯುತ್ತಾ, ಗುಂಡಿನ ಮಳೆಗೆರೆಯತೊಡಗಿದರು. ಆದರೂ ಅವರಿಗೆ ತಕ್ಕ ಪ್ರತ್ಯುತ್ತರ ನೀಡಿದ ಯೋಧರು, ಒಬ್ಬ ಉಗ್ರನನ್ನು ಸದೆಬಡಿಯುವಲ್ಲಿ ಯಶಸ್ವಿಯಾದರು. ತದನಂತರ ಮತ್ತೂಬ್ಬ ಉಗ್ರ ಅವಿತಿದ್ದ ಮನೆಯೊಳಗೆ ವಾನಿ ಪ್ರವೇಶಿಸಿ, ಉಗ್ರನೊಂದಿಗೆ ಹೋರಾಡಿದರು. ಅಷ್ಟರಲ್ಲಾಗಲೇ ಅವರ ದೇಹದೊಳಕ್ಕೆ ಸಾಕಷ್ಟು ಗುಂಡುಗಳು ಹೊಕ್ಕಿದ್ದವು. ಆದರೆ ಆ ಮನೆಯೊಳಗಿದ್ದ ಉಗ್ರನನ್ನು ಕೊಂದ ಬಳಿಕ ಕುಸಿದು ಬಿದ್ದ ವಾನಿ ಅನಂತರ ಮೇಲೇಳಲೇ ಇಲ್ಲ. ಈ ಕಾರ್ಯಾಚರಣೆಯಲ್ಲಿ ಎಲ್ಲ 6 ಲಷ್ಕರ್‌ ಉಗ್ರರನ್ನು ಹತ್ಯೆಗೈಯ್ಯುವಲ್ಲಿ ಸೇನೆ ಯಶಸ್ವಿಯಾಗಿತ್ತು.

ಟಾಪ್ ನ್ಯೂಸ್

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

AB-Vajapaee

A.B.Vajpayee Birth Century: ಅಜಾತಶತ್ರು, ಬಹುಮುಖಿ ವ್ಯಕ್ತಿತ್ವದ ಅಟಲ್‌ ಬಿಹಾರಿ ವಾಜಪೇಯಿ

ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ: ಚುನಾವಣಾ ಆಯೋಗ

Election Commission: ದಾಖಲಾದ ಮತದಲ್ಲಿಏರಿಕೆ ಆಗುವುದು ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.