ವಯನಾಡು ಭೂಕುಸಿತಕ್ಕೆ 40 ಸಾವು ಶಂಕೆ
Team Udayavani, Aug 8, 2019, 11:17 PM IST
ತಿರುವನಂತಪುರ/ನವದೆಹಲಿ: ದೇವರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಪುತುಮಾಲಾ ಎಂಬಲ್ಲಿ ಗುರುವಾರ ಸಂಜೆ ಉಂಟಾದ ಭೂಕುಸಿತದಲ್ಲಿ 40 ಜನರು ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ದೇಗುಲ, ಮಸೀದಿ, ಚರ್ಚ್, ಪ್ಲಾಂಟೇಷನ್ ಕಂಪನಿಯ ನೌಕರರು ವಾಸಿಸುತ್ತಿದ್ದ ಮನೆಗಳ ಮೇಲೆ ಗುಡ್ಡ ಕುಸಿದ ಕಾರಣ ಈ ದುರಂತ ಸಂಭವಿಸಿದೆ.
ಕರ್ನಾಟಕದ ಮಡಿಕೇರಿಯಲ್ಲಿ ಭೂಮಿ ಕುಸಿದ ಮಾದರಿಯಲ್ಲಿಯೇ ಭೂಮಿ ಕುಸಿದಿರುವುದರ ಬಗ್ಗೆ ಮಲಯಾಳಂ ಸುದ್ದಿ ವಾಹಿನಿಗಳು ಕುಸಿತದ ದೃಶ್ಯಾವಳಿಗಳನ್ನು ಪ್ರಸಾರ ಮಾಡಿವೆ.
ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ. ಕೇರಳದ ಇತರ ಭಾಗದಲ್ಲಿಯೂ ಉಂಟಾಗಿರುವ ಪ್ರವಾಹ ಸ್ಥಿತಿಯಿಂದಾಗಿ 9,500ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕೇರಳದಲ್ಲಿ ಮಳೆಯಿಂದಾಗಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ವಯನಾಡ್‌ನ ನಿಲಂಬೂರ್ ಪಟ್ಟಣ ನೀರಿನಲ್ಲಿ ಮಳುಗಡೆಯಾಗಿದೆ.
ಮಲಪ್ಪುರಂ, ಕಲ್ಲಿಕೋಟೆ, ವಯನಾಡ್ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್‌ಡಿಆರ್‌ಎಫ್), ಸೇನೆಯ ನೆರವನ್ನು ಕೇರಳ ಸರ್ಕಾರ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್ ಪಟ್ಟು
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.