ಬುಲೆಟ್ಟ್ರೈನ್ ಬಿಡಲು ಇದು ಲಾಸ್ಟ್ ಚಾನ್ಸ್
Team Udayavani, Feb 28, 2017, 3:50 AM IST
ದೇವರಿಯ/ಮೌ (ಉ.ಪ್ರ): ಐದನೇ ಹಂತದ ಮತದಾನ ನಡೆಯುತ್ತಿದ್ದಂತೆ ಉತ್ತರ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿಎಂ ಅಖೀಲೇಶ್ ಯಾದವ್ ಚುನಾವಣಾ ರ್ಯಾಲಿಗಳಲ್ಲಿ ಭಾಗವಹಿಸಿದರು. ದೇವರಿಯದಲ್ಲಿ ಮಾತನಾಡಿದ ಅಖೀಲೇಶ್ ಬುಲೆಟ್ ಟ್ರೈನ್ ಭರವಸೆ ನೀಡುವ ಮೂಲಕ ಮೋದಿ ಅವರು ಕೇಂದ್ರದಲ್ಲಿ ಮತ್ತೂಂದು ಅವಕಾಶವನ್ನು ಗಿಟ್ಟಿಸಿಕೊಳ್ಳುವ ಕನಸು ಕಾಣುತ್ತಿದ್ದಾರೆ. ಇದು ಅಸಾಧ್ಯದ ಮಾತು ಎಂದು ಲೇವಡಿ ಮಾಡಿದ್ದಾರೆ.
ಮೂರು ಬಾರಿ ಗುಜರಾತ್ ಸಿಎಂ ಆಗಿ ಒಂದೇ ಒಂದು ಮೆಟ್ರೋ ಯೋಜನೆ ಕಾರ್ಯರೂಪಕ್ಕೆ ತರಲಿಕ್ಕಾಗಲಿಲ್ಲ. ನಾವು ಮೆಟ್ರೋ ಟ್ರೇನ್ ಸೇವೆಗೆ ಚಾಲನೆ ನೀಡುತ್ತಿದ್ದೇವೆ. ಆದರೆ ಎಲ್ಲಿ ನಿಮ್ಮ ಬುಲೆಟ್ ಟ್ರೈನ್ ಎಂದು ಪಶ್ನಿಸಿದರು ಅಖೀಲೇಶ್. ಈ ನಡುವೆ ಮೌನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೇರುವ ಸಲುವಾಗಿ ಬಿಎಸ್ಪಿ ಮತ್ತು ಎಸ್ಪಿ ಉ.ಪ್ರ.ದಲ್ಲಿ ಅತಂತ್ರ ವಿಧಾನಸಭೆ ರಚನೆಯಾಗುವ ಸಂಚು ರೂಪಿಸಿವೆ ಎಂದು ಆರೋಪಿಸಿದರು. ಮಾ. 11ರಂದು ಫಲಿತಾಂಶ ಪ್ರಕಟಗೊಂಡ ಬಳಿಕ, ಉತ್ತರ ಪ್ರದೇಶದಲ್ಲಿ ನಾವು ಹೋಳಿ ಸಂಭ್ರಮವನ್ನು ಆಚರಿಸುತ್ತೇವೆ ಎಂದು ಚುಚ್ಚು ಮಾತುಗಳನ್ನಾಡಿದರು.
ಐದನೇ ಹಂತದಲ್ಲಿ ಶೇ.57.36ರಷ್ಟು ಮತ: ಈ ನಡುವೆ ಅಮೇಠಿ, ಫೈಜಾಬಾದ್ ಸೇರಿದಂತೆ ಉ.ಪ್ರ.ದ 11 ಜಿಲ್ಲೆಗಳಲ್ಲಿರುವ 51 ಕ್ಷೇತ್ರಗಳಲ್ಲಿ ಶಾಂತಿಯುತ ಹಕ್ಕು ಚಲಾವಣೆಯಾಗಿದೆ. ಶೇ. 57.36ರಷ್ಟು ಮತದಾನವಾಗಿದ್ದು, ಹಿಂದಿನ ಚುನಾವಣೆಗೆ ಹೋಲಿಕೆ ಮಾಡಿದರೆ ಶೇ.0.3ರಷ್ಟು ಹೆಚ್ಚಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ. ಮತದಾನ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್
Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.