ಗುಂಪು ಥಳಿತ ಕೃತ್ಯ ತಡೆಗೆ ಕಾನೂನು?
Team Udayavani, Aug 21, 2018, 6:00 AM IST
ನವದೆಹಲಿ: ವದಂತಿಗಳನ್ನು ನಂಬಿ ನಡೆಸಲಾಗುವ ಗುಂಪು ಥಳಿತ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ಬದಲಾವಣೆಗೆ ಕೇಂದ್ರ ಮುಂದಾಗಿದೆ. ಅದಕ್ಕಾಗಿ ಭಾರತೀಯ ದಂಡ ಸಂಹಿತೆ (ಐಪಿಸಿ), ಅಪರಾಧ ದಂಡ ಸಂಹಿತೆ (ಸಿಆರ್‌ಪಿಸಿ)ಗೆ ಬದಲಾವಣೆ ತರಲು ಯೋಚಿಸುತ್ತಿದೆ. ಅಂಥ ಪ್ರಕರಣಗಳನ್ನು ತ್ವರಿತಗತಿ ವಿಚಾರಣೆ ನಡೆಸಲು ವಿಶೇಷ ಕೋರ್ಟ್‌ಗಳ ಸ್ಥಾಪನೆ, ಕೃತ್ಯ ಎಸಗಿದವರಿಗೆ ಜಾಮೀನು ನೀಡದೇ ಇರುವುದು, ಸಾವನ್ನಪ್ಪಿದವರಿಗೆ ಕೇಂದ್ರದ ವತಿಯಿಂದ ಪರಿಹಾರ ನೀಡುವ ಕ್ರಮಗಳನ್ನೂ ಪರಿಶೀಲಿಸಲಾಗುತ್ತಿದೆ. ಈ ಬಗ್ಗೆ ಕೇಂದ್ರ ಗೃಹ ಕಾರ್ಯದರ್ಶಿ ರಾಜೀವ್ ಗೌಬಾ ರಚಿಸಿರುವ ಸಮಿತಿಯ ಕರಡು ಶಿಫಾರಸುಗಳಲ್ಲಿ ಉಲ್ಲೇಖೀಸಲಾಗಿದೆ. ಆ.23ರಂದು ಈ ವರದಿಯನ್ನು ರಾಜೀವ್ ಗೌಬಾ ಅವರಿಗೆ ಸಲ್ಲಿಸಲಾಗುತ್ತದೆ ಎಂದು ಹೇಳಲಾಗಿದೆ. ಐಪಿಸಿ, ಸಿಆರ್‌ಪಿಸಿಗೆ ತಿದ್ದುಪಡಿ ತಂದಲ್ಲಿ, ಪೊಲೀಸರಿಗೆ ಥಳಿತ ಪ್ರಕರಣಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲು ಅವಕಾಶ ಸಿಕ್ಕಿದಂತಾಗುತ್ತದೆ.
ಮೂವರು ಸದಸ್ಯರಿರುವ ಸಮಿತಿ ಅನೌಪಚಾರಿಕ ಚರ್ಚೆ ನಡೆಸಿ ಈ ಅಂಶಗಳ ಬಗ್ಗೆ ಕರಡು ವರದಿ ಸಿದ್ಧಪಡಿಸಿದೆ. ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿಗಳಾದ ಎಸ್.ಸಿ.ಎಲ್. ದಾಸ್ ಮತ್ತು ಪ್ರವೀಣ್ ವಸಿಷ್ಟ, ರಾಷ್ಟ್ರೀಯ ಮಾದಕ ದ್ರವ್ಯ ತಡೆ ವಿಭಾಗ (ಎನ್‌ಸಿಬಿ)ದ ಮಹಾ ನಿರ್ದೇಶಕ ಅಭಯ್ ಸದಸ್ಯರಾಗಿದ್ದಾರೆ.
ಕಾನೂನು ಮತ್ತು ನ್ಯಾಯ ಖಾತೆ ಕಾರ್ಯದರ್ಶಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಕಾರ್ಯದರ್ಶಿಗಳ ಜತೆ ಚರ್ಚಿಸಿ ಕೆಲವೇ ದಿನಗಳಲ್ಲಿ ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.