ಮನಬಂದಂತೆ ಪ್ರಧಾನಿಯ ಅವಹೇಳನಗೈದ ನಾಯಕರು


Team Udayavani, Nov 24, 2018, 6:00 AM IST

z-24.jpg

ಇಂದೋರ್‌/ಹೊಸದಿಲ್ಲಿ: ಪ್ರಧಾನಿ ಮೋದಿ ಮತ್ತು ಅವರ ತಾಯಿ ಹೀರಾ ಬಾ ವಿರುದ್ಧ ಕಾಂಗ್ರೆಸ್‌ನ ಇಬ್ಬರು ನಾಯಕರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅದಕ್ಕೆ ಪೂರಕವಾಗಿ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ, “ಚೌಕಿದಾರರಿಗೆ ಕಳ್ಳ ಎಂಬ ಹೆಸರು ಬರಲು ಪ್ರಧಾನಿ ಮೋದಿ ಕಾರಣ’ ಎಂದು ಹೇಳಿದ್ದಾರೆ. ತೆಲಂಗಾಣ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌, ಮೋದಿಗೆ ಹಿಂದೂ-ಮುಸ್ಲಿಂ ರೋಗ ಇದೆ ಎಂದು ಟೀಕಿಸಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್‌ ನಾಯಕ ರಾಜ್‌ಬಬ್ಬರ್‌, ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ಪ್ರಧಾನಿ ಮೋದಿಯ ತಾಯಿಯವರ ವಯಸ್ಸಿನಷ್ಟು ಕುಸಿದಿದೆ ಎಂದು ಟೀಕಿಸಿದ್ದಾರೆ. ಇದೇ ವೇಳೆ ಕೇಂದ್ರದ ಮಾಜಿ ಸಚಿವ ಡಾ.ಸಿ.ಪಿ.ಜೋಶಿ, ಬ್ರಾಹ್ಮಣರಲ್ಲದ ನರೇಂದ್ರ ಮೋದಿಯವರಿಗೆ ಹಿಂದುತ್ವದ ಬಗ್ಗೆ ಮಾತನಾಡಲು ಅರ್ಹತೆಯೇ ಇಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿಯವರು ತರಾಟೆಗೆ ತೆಗೆದು ಕೊಂಡ ಬಳಿಕ ಜೋಶಿ ಕ್ಷಮೆ ಕೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ್ದ ಉತ್ತರ ಪ್ರದೇಶ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ರಾಜ್‌ಬಬ್ಬರ್‌, “ನರೇಂದ್ರ ಮೋದಿ ಪ್ರಧಾನಿಯಾಗುವುದಕ್ಕೆ ಮೊದಲು, ಡಾಲರ್‌ ಎದುರು ರೂಪಾಯಿ ಮೌಲ್ಯ ಡಾ.ಮನಮೋಹನ್‌ ಸಿಂಗ್‌ ವಯಸ್ಸಿನಷ್ಟಕ್ಕೆ ಕುಸಿದಿದೆ ಎಂದು ಹೇಳಿದ್ದರು. ಅವರು ಆಗ ಪ್ರಧಾನಿಯಾಗಿದ್ದ ಮನ ಮೋಹನ್‌ ಸಿಂಗ್‌ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ನಮ್ಮ ಸಂಸ್ಕೃತಿ ಅದಕ್ಕೆ ಅವಕಾಶ ನೀಡು ವುದಿಲ್ಲ. ಈಗ ಅದೇ ರೂಪಾಯಿ ಮೌಲ್ಯ ಅಮೆರಿಕದ ಡಾಲರ್‌ ಎದುರು ನಿಮ್ಮ ತಾಯಿಯವರ ವಯಸ್ಸಿನ ಷ್ಟಕ್ಕೆ ಕುಸಿದಿದೆ’ ಎಂದು ಹೇಳಿದ್ದಾರೆ. 

ಈ ಹೇಳಿಕೆ ಬಗ್ಗೆ ಬಿಜೆಪಿ ಪ್ರಬಲ ಆಕ್ರೋಶ ವ್ಯಕ್ತಪಡಿಸಿದೆ. ರಾಜ್‌ಬಬ್ಬರ್‌ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿರುವ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ, ಅಸಂಸದೀಯ ಪದ ಬಳಕೆ ಮಾಡಬಾರದು ಮತ್ತು ಪ್ರಧಾನಿ ತಾಯಿ ಹೆಸರನ್ನು ಎಳೆದು ತರುವುದು ಸರಿಯಲ್ಲ. ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡಲೇ ಕ್ಷಮೆಯಾಚಿಸ ಬೇಕು ಎಂದು ಒತ್ತಾಯಿಸಿದ್ದಾರೆ. ಗುಜರಾತ್‌ ಮುಖ್ಯ ಮಂತ್ರಿ ವಿಜಯ ರೂಪಾಣಿ ಕೂಡ ಬಬ್ಬರ್‌ ಹೇಳಿಕೆ  ಖಂಡಿಸಿದ್ದಾರೆ.

ಮೋದಿಗೆ ಅರ್ಹತೆ ಇಲ್ಲ: ರಾಜ ಸ್ಥಾನದ ಕಾಂಗ್ರೆಸ್‌ ನಾಯಕ ಡಾ.ಸಿ.ಪಿ. ಜೋಶಿ, ಪ್ರಧಾನಿ ಮೋದಿ ಬ್ರಾಹ್ಮಣರಲ್ಲ. ಹೀಗಾಗಿ ಅವರಿಗೆ ಹಿಂದೂ ಧರ್ಮದ ಬಗ್ಗೆ ಮಾತನಾಡಲು ಅರ್ಹತೆ ಇಲ್ಲ ಎಂದು ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣರಿಗೆ ಹಿಂದೂ ಧರ್ಮದ ಬಗ್ಗೆ ಅಧ್ಯಯನ ಮಾಡಿರುವುದರಿಂದ ಈ ಅಧಿಕಾರ ಇದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವೆ ಉಮಾ ಭಾರತಿ, ಸಾಧ್ವಿ ಋತಂಭರಾ ಕೆಳ ವರ್ಗಕ್ಕೆ ಸೇರಿರುವುದರಿಂದ ಅವರಿಬ್ಬರಿಗೂ ಹಿಂದುತ್ವದ ಬಗ್ಗೆ ಮಾತನಾಡಲು ಅಧಿಕಾರ ಇಲ್ಲ ಎಂದಿದ್ದಾರೆ. ಈ ಹೇಳಿಕೆಗೂ ಆಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಸ್ವತಃ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ತರಾಟೆಗೆ ತೆಗೆದು ಕೊಂಡ ಬಳಿಕ ಜೋಶಿ “ಕಾಂಗ್ರೆಸ್‌ ತತ್ವಗಳನ್ನು ಮತ್ತು ಕಾರ್ಯಕರ್ತರ ಭಾವನೆಗಳನ್ನು ಗೌರವಿಸಿ ನನ್ನ ಹೇಳಿಕೆಗಳಿಗೆ ವಿಷಾದ ವ್ಯಕ್ತಪಡಿಸುತ್ತೇನೆ’ ಎಂದು ಹಿಂದಿಯಲ್ಲಿ ಟ್ವೀಟ್‌ ಮಾಡಿದ್ದಾರೆ.

ಆದರೆ ಬಿಜೆಪಿ ಈ ಕ್ಷಮಾಪಣೆಯಿಂದ ತೃಪ್ತಿಗೊಂಡಿಲ್ಲ. ಖುದ್ದು ರಾಹುಲ್‌ ಅವರೇ ವಿಷಾದ ವ್ಯಕ್ತಪಡಿಸಬೇಕು ಎಂದು ಒತ್ತಾಯಿಸಿದೆ. ಜೋಶಿಯವರು ಭಾರತೀಯ ಸಂಸ್ಕೃತಿ, ಹಿಂದೂ ಧರ್ಮವನ್ನು ಅವಹೇಳನ ಮಾಡಿದ್ದಾರೆ. ಇದರಿಂದ, ಕಾಂಗ್ರೆಸ್‌ ನಾಯಕರಿಗೆ ಭಾರತದ ಸಂಸ್ಕೃತಿ, ಹಿಂದೂ ಧರ್ಮದ ಇತಿಹಾಸ ಗೊತ್ತಿಲ್ಲ ಎನ್ನುವುದು ಸಾಬೀತಾಗುತ್ತದೆ ಎಂದು ಪಕ್ಷದ ವಕ್ತಾರ ಸುಧಾಂಶು ತ್ರಿವೇದಿ ಟೀಕಿಸಿದ್ದಾರೆ. 

ಚೌಕೀದಾರರಿಗೆ ಪ್ರಧಾನಿ ಅವಮಾನ: ರಾಹುಲ್‌
ಕಾಂಗ್ರೆಸ್‌ ನಾಯಕರಿಬ್ಬರ ಹೇಳಿಕೆ ವಿವಾದ ನಡುವೆಯೇ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಮಧ್ಯಪ್ರದೇಶದ ವಿಧಿಶಾ ಮತ್ತು ಮಂಡಿದೀಪ್‌ನಲ್ಲಿ ಮಾತನಾಡಿ “ಪ್ರಧಾನಿ ಮೋದಿ ಕಾವಲುಗಾರರಿಗೆ (ಚೌಕಿದಾರ) ಅವಮಾನ ಮಾಡಿದ್ದಾರೆ. ಎಲ್ಲಿಯೇ ಹೋಗಲಿ ಈಗ ಚೌಕಿದಾರ ಎಂಬ ಶಬ್ದ ಕೇಳಿದ ಕೂಡಲೇ ಜನರು ಚೋರ್‌ ಹೈ (ಕಳ್ಳ) ಎನ್ನುವಂತಾಗಿದೆ. ಹೀಗಾಗಿ ನಾನು ದೇಶದಲ್ಲಿರುವ ಕಾವಲುಗಾರರ ಜತೆ ಕ್ಷಮೆ ಕೋರುತ್ತೇನೆ. ನೀವೆಲ್ಲರೂ ಕಳ್ಳರಲ್ಲ. ಒಳ್ಳೆಯವರೇ. ಆದರೆ ದೇಶದ ಪ್ರಧಾನಿ ತಾನು ಚೌಕಿದಾರ ಎನ್ನುವ ಮೂಲಕ ನಿಮಗೆಲ್ಲ ಅಪಕೀರ್ತಿ ತಂದಿದ್ದಾರೆ’ ಎಂದು ಹೇಳಿದ್ದಾರೆ. ರಫೇಲ್‌ ಡೀಲ್‌ ಬಗ್ಗೆ ಪ್ರಸ್ತಾಪಿಸಿದ ಅವರು, ಸರ್ಜಿಕಲ್‌ ದಾಳಿಗೆ ಬೆಂಗಳೂರಿನ ಎಚ್‌ಎಎಲ್‌ ತಯಾರಿಸಿದ ಯುದ್ಧ ವಿಮಾನ ಬಳಸಿರುವಾಗ, ರಫೇಲ್‌ ಒಪ್ಪಂದದ ವೇಳೆ ಗುತ್ತಿಗೆಯನ್ನು ಅನಿಲ್‌ ಅಂಬಾನಿ ಸಂಸ್ಥೆಗೆ ಕೊಟ್ಟಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.

ಮೋದಿಗೆ ಹಿಂದೂ-ಮುಸ್ಲಿಂ ರೋಗ
ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿಗೆ ಹಿಂದೂ-ಮುಸ್ಲಿಮರನ್ನು ಒಡೆಯುವ ರೋಗವಿದೆ. ತೆಲಂಗಾಣದಲ್ಲಿ ಎಸ್‌ಟಿಗೆ ಶೇ.4 ರಿಂದ ಶೇ.12ರ ವರೆಗೆ, ಮುಸ್ಲಿಮರಿಗೆ ಶೇ.6 ರಿಂದ ಶೇ.10 ಪ್ರಮಾಣದಲ್ಲಿ ಮೀಸಲು ನೀಡುವ ಪ್ರಸ್ತಾಪವನ್ನು ಕೇಂದ್ರ ಸರ್ಕಾರ ತಡೆಹಿಡಿದಿದೆ ಎಂದು ತೆಲಂಗಾಣದ ಹಂಗಾಮಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಆರೋಪಿಸಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಜೆಪಿ ಪ್ರತಿಯೊಂದರಲ್ಲಿಯೂ ಕೋಮು ಭಾವನೆ ಕಂಡು ಹಿಡಿಯುತ್ತಾರೆ. ಅದಕ್ಕಿಂತ ಹೊರತಾಗಿ ಅವರು ಬೇರೆ ಏನನ್ನೂ ಕಾಣುವುದಿಲ್ಲ ಎಂದು ನರಸ್‌ಪೇಟೆಯಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ಮಾತನಾಡುವಾಗ ರಾವ್‌ ಹೇಳಿದ್ದಾರೆ. ಮಬಹುದಾಬಾದ್‌ನಲ್ಲಿ ನಡೆದ ಮತ್ತೂಂದು ರ್ಯಾಲಿಯಲ್ಲಿ ಮಾತನಾಡಿದ ಕೆಸಿಆರ್‌ ಕೇಂದ್ರ ಸರ್ಕಾರಕ್ಕೆ ಧಾರ್ಮಿಕ ಹುಚ್ಚು ಹಿಡಿದಿದೆ ಎಂದು ಟೀಕಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ ಕೋಮು ಹುಚ್ಚು ಇದೆ ಎಂದು ದೂರಿದರು. ಅದಕ್ಕೆ ರಾಜ್ಯದ ಪ್ರಸ್ತಾಪ ತಡೆಹಿಡಿದದ್ದೇ ಸಾಕ್ಷಿ ಎಂದು ಟೀಕಿಸಿದರು.

ಟಿಆರ್‌ಎಸ್‌ ಆಡಳಿತ ಕೊನೆಗೊಳ್ಳಲಿ
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ತೆಲಂಗಾಣದ ಮೆಡcಲ್‌ನಲ್ಲಿ ಪ್ರಚಾರ ಭಾಷಣ ಮಾಡಿದ್ದಾರೆ. ಚಂದ್ರಶೇಖರ ರಾವ್‌ ನೇತೃತ್ವದ ಸರ್ಕಾರ ಕೇವಲ ಅವರ ಮತ್ತು ಆಪ್ತರ ಹಿತಕ್ಕಾಗಿ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ. ದಲಿತರು, ಅಲ್ಪಸಂಖ್ಯಾತರು, ಬುಡಕಟ್ಟು ಜನಾಂಗದವರು, ಮಹಿಳೆಯರು ಮತ್ತು ವಿದ್ಯಾರ್ಥಿಗಳ ಹಿತಕ್ಕಾಗಿ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು. ತೆಲಂಗಾಣದಲ್ಲಿ ಟಿಆರ್‌ಎಸ್‌ ಆಡಳಿತ ಕೊನೆಗೊಳ್ಳಬೇಕು ಎಂದು ಸಾರಿದ್ದಾರೆ ಸೋನಿಯಾ. 2014ರ ಜೂನ್‌ನಲ್ಲಿ ಪ್ರತ್ಯೇಕ ತೆಲಂಗಾಣ ರಚನೆಯಾದ ಬಳಿಕ ಇದೇ ಮೊದಲ ಬಾರಿಗೆ ಸೋನಿಯಾ ಗಾಂಧಿ ಅಲ್ಲಿಗೆ ಭೇಟಿ ನೀಡಿದ್ದಾರೆ. 

ಕಾಂಗ್ರೆಸ್‌ಗೆ ಕಂಪ್ಯೂಟರ್‌ ಬಾಬಾ ಬೆಂಬಲ
ಮಧ್ಯಪ್ರದೇಶದಲ್ಲಿ ನ.28ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಕಂಪ್ಯೂಟರ್‌ ಬಾಬಾ ನೇತೃತ್ವದ ಕೆಲವು ಸಂತರು ನಿರ್ಧಾರ ಪ್ರಕಟಿಸಿದ್ದಾರೆ. ಜಬಲ್ಪುರದಲ್ಲಿ ಆಯೋಜಿಸಲಾಗಿದ್ದ “ನರ್ಮದೆ ಸಂಸದ್‌’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಚೌಹಾಣ್‌ ಆಡಳಿತದಲ್ಲಿ ಗೋಶಾಲೆಗಳ ನಿರ್ಮಾಣದಲ್ಲಿ ಗಣನೀಯ ಪ್ರಗತಿ ಕಂಡಿಲ್ಲ. ಎಸ್‌ಸಿ, ಎಸ್‌ಟಿ ಕಾಯ್ದೆ ಬಳಸಿ ಸಮಾಜದಲ್ಲಿ ಬಿರುಕು ಸೃಷ್ಟಿಸಲು ಯತ್ನಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ಗೆ ಐದು ವರ್ಷಗಳ ಸರ್ಕಾರ ರಚಿಸಲು ಬೆಂಬಲ ನೀಡಬೇಕು. 15 ವರ್ಷಗಳಿಂದ ಬಿಜೆಪಿಗೆ ಬೆಂಬಲ ನೀಡುತ್ತಾ ಬಂದಿದ್ದೇವೆ. ಈ ಬಾರಿ ಕಾಂಗ್ರೆಸ್‌ ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ. ಕಂಪ್ಯೂಟರ್‌ ಬಾಬಾ ನೇತೃತ್ವದ ಈ ಸಭೆಗೆ ಭಾರಿ ಮಹತ್ವ ಇದೆ.

ಟಾಪ್ ನ್ಯೂಸ್

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ravi-kumar

BJP ಸೋಲಿಗೆ ರಾಜ್ಯಾಧ್ಯಕ್ಷ ಒಬ್ಬರೇ ಹೊಣೆಯಲ್ಲ: ಎನ್‌. ರವಿಕುಮಾರ್‌

1-nikkki

JDS ಕಳೆದುಕೊಂಡಲ್ಲೇ ಹುಡುಕುತ್ತೇನೆ: ನಿಖಿಲ್‌ ಕುಮಾರಸ್ವಾಮಿ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

voter

RSS ಕಚೇರಿ ಟೆಕ್ಕಿಗಳ ಬಳಸಿ ಇವಿಎಂ ಹ್ಯಾಕ್‌: ವಸಂತ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.