ಪತ್ರಕರ್ತ ಬುಖಾರಿ ಹಂತಕ ನವೀದ್‌ ಜಟ್‌ ಎನ್‌ಕೌಂಟರ್‌ನಲ್ಲಿ ಮಟಾಶ್‌


Team Udayavani, Nov 28, 2018, 12:04 PM IST

naveed-jatt-700.jpg

ಶ್ರೀನಗರ : ಕಾಶ್ಮೀರೀ ಪತ್ರಕರ್ತ ಶುಜಾತ್‌ ಬುಖಾರಿ ಹತ್ಯೆಗೆ ಸಂಬಂಧಿಸಿ ಪೊಲೀಸರಿಗೆ ಬೇಕಾಗಿದ್ದ ಉನ್ನತ ಲಷ್ಕರ್‌ ಎ ತಯ್ಯಬ ಉಗ್ರ ಮೊಹಮ್ಮದ್‌ ನವೀದ್‌ ಜಟ್‌ ಭದ್ರತಾ ಪಡೆಗಳು ಮತ್ತು ಸ್ಥಳೀಯ ಪೊಲೀಸರು ಇಂದು ಬುಧವಾರ ನಡೆಸಿರುವ ಜಂಟಿ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ. ಆದರೆ ಅಧಿಕಾರಿಗಳು ಈ ವಿಷಯವನ್ನು ಈಗಿನ್ನೂ ದೃಢೀಕರಿಸಬೇಕಾಗಿದೆ.

ಜಮ್ಮು ಕಾಶ್ಮೀರದ ಬಡಗಾಂವ್‌ ಜಿಲ್ಲೆಯ ಛಾತೇರ್‌ಗಾಂವ್‌ ನಲ್ಲಿ ಇಂದು ಬುಧವಾರ ನಸುಕಿನ ವೇಳೆ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಕಾಳಗ ನಡೆದಿತ್ತು. 

ತಾಜಾ ವರದಿಗಳ ಪ್ರಕಾರ ಉಗ್ರರು ಈಗಲೂ ಈ ಪ್ರದೇಶದ ಮನೆಯೊಂದರಲ್ಲಿ ಅಡಗಿಕೊಂಡಿದ್ದಾರೆ. ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. 

ಉಗ್ರ ನವೀದ್‌ ಜಟ್‌ ಈ ವರ್ಷದ ಆದಿಯಲ್ಲಿ ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಂಡಿದ್ದ. ಆ ಬಳಿಕ ಆತ ಭದ್ರತಾ ಪಡೆಗಳು ಮತ್ತು ಪೌರರ ಮೇಲಿನ ದಾಳಿಗಳಲ್ಲಿ ಶಾಮೀಲಾಗಿದ್ದ. ಈ ವರ್ಷ ಆಗಸ್ಟ್‌ ನಲ್ಲಿ ಆತ ಶೋಪಿಯಾನ್‌ ನಲ್ಲಿ ಉಗ್ರನೋರ್ವನ ಅಂತ್ಯ ಸಂಸ್ಕಾರದ ವೇಳೆ ಕಾಣಿಸಿಕೊಂಡಿದ್ದ. 

ಪಾಕಿಸ್ಥಾನದ ಮುಲ್ತಾನ್‌ನ ನಿವಾಸಿಯಾಗಿರುವ ನವೀದ್‌ ಜಟ್‌ ನನ್ನು 2014ರ ಜೂನ್‌ನಲ್ಲಿ ಕುಲಗಾಂವ್‌ ನ ಯಾರಿಪೋರಾದಲ್ಲಿ ಸೆರೆ ಹಿಡಿಯಲಾಗಿತ್ತು. ಈ ವರ್ಷ ಫೆ.6ರಂದು ಆತ ಶ್ರೀನಗರದಲ್ಲಿನ ಶ್ರೀ ಮಹಾರಾಜ ಹರಿ ಸಿಂಗ್‌ (ಎಸ್‌ಎಂಎಚ್‌ಎಸ್‌) ಆಸ್ಪತ್ರೆಯಿಂದ ನಾಟಕೀಯವಾಗಿ ಪರಾರಿಯಾಗಿದ್ದ. ಈತನನ್ನು ಬಿಡಿಸಿಕೊಳ್ಳಲು ಆಸ್ಪತ್ರೆಗೆ ಬಂದಿದ್ದ ಈತನ ಇಬ್ಬರು ಸಹಚರರು ಪೊಲೀಸ್‌ ಗುಂಡಿಗೆ ಬಲಿಯಾಗಿದ್ದರು. 

ಟಾಪ್ ನ್ಯೂಸ್

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

delhi air

Delhi pollution:ಪ್ರಾಣಿಗಳಲ್ಲಿ ಹೆಚ್ಚಿದ ಶ್ವಾಸ ಸಂಬಂಧಿ ಕಾಯಿಲೆ

1-modi

BJP; ಅಭಿವೃದ್ಧಿ, ಉತ್ತಮ ಆಡಳಿತ ಗೆದ್ದೇ ಗೆಲ್ಲುತ್ತದೆ: ಜಯಕ್ಕೆ ಪ್ರಧಾನಿ ಬಣ್ಣನೆ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

2–Chennamman-Kittur

Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.