ಬಿಜೆಪಿ ಸೋಲಿಸುವುದೇ ಪರಮ ಗುರಿಯಾಗಿರಲಿ
Team Udayavani, Oct 22, 2018, 12:02 PM IST
ಕೋಲ್ಕತಾ: ಮುಂದಿನ ಲೋಕಸಭಾ ಚುನಾವಣೆಗಾಗಿ ಸಿದ್ಧವಾಗುತ್ತಿರುವ ಮೈತ್ರಿ ಕೂಟದಲ್ಲಿರುವ ವಿಪಕ್ಷಗಳಿಗೆ, ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವುದೇ ಗುರಿಯಾಗಿರಬೇಕೇ ಹೊರತು, ಮೈತ್ರಿಕೂಟದಲ್ಲಿ ಕಾಂಗ್ರೆಸ್ ಇರುವ ಬಗ್ಗೆ ಅಸಮಾಧಾನ ಹೊರ ಹಾಕುವುದೇ ಗುರಿಯಾಗಿರಬಾರದು ಎಂದು ಕಾಂಗ್ರೆಸ್ ಹಿರಿಯ ನಾಯಕ ಸಲ್ಮಾನ್ ಖುರ್ಷೀದ್ ಕಿವಿಮಾತು ಹೇಳಿದ್ದಾರೆ.
ಬುಧವಾರ ಪಿಟಿಐಗೆ ನೀಡಿದ ಸಂದರ್ಶನದ ವೇಳೆ ಮಾತನಾಡಿದ ಅವರು, “”ಮೈತ್ರಿಕೂಟ ರಚನೆಯ ಆವಶ್ಯಕತೆಯನ್ನು ಈಗಾಗಲೇ ಕಾಂಗ್ರೆಸ್ ನಾಯಕರು ಸ್ಪಷ್ಟಪಡಿಸಿದ್ದಾರೆ. ಹಾಗಾಗಿ, ಇದು ಬಿಜೆಪಿಯನ್ನು ಕೆಳಗಿಳಿಸಲು ರಚನೆಯಾಗುತ್ತಿರುವ ಮೈತ್ರಿಕೂಟವೇ ಹೊರತು, ಕಾಂಗ್ರೆಸ್‌ಗಾಗಿ ಅಲ್ಲ ಎಂಬುದನ್ನು ಎಲ್ಲರೂ ಮನಗಾಣಬೇಕು” ಎಂದಿದ್ದಾರೆ.
ಬಿಜೆಪಿಗೆ ಮತ ಹಾಕಿ: ತೆಲಂಗಾಣ ರಾಜ್ಯವು ಅಭಿವೃದ್ಧಿ ಸಾಧಿಸಲು ಮುಂದಿನ ತಿಂಗಳು ನಡೆಯಲಿರುವ ತೆಲಂಗಾಣ ಚುನಾವಣೆಯಲ್ಲಿ ಜನರು ಬಿಜೆಪಿಗೆ ಮತ ಹಾಕಬೇಕೆಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ರಾಮ ಮಾಧವ್ ಆಗ್ರಹಿಸಿದ್ದಾರೆ. ತೆಲಂಗಾಣದ ಮಲ್ಕಾಜಗಿರಿಯಲ್ಲಿ ರವಿವಾರ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.
ಸೋತವರತ್ತ ಬಿಜೆಪಿ ಒಲವು: ಛತ್ತೀಸ್‌ಗಢ ವಿಧಾನಸಭೆಗೆ ಸಜ್ಜಾಗುತ್ತಿರುವ ಬಿಜೆಪಿ, 2013ರ ಚುನಾವಣೆಯಲ್ಲಿ ಸೋತಿದ್ದ 14 ಅಭ್ಯರ್ಥಿಗಳಿಗೆ ಈ ಬಾರಿ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಿದೆ. ಚುನಾವಣೆ ನಡೆಯಲಿರುವ 90 ಕ್ಷೇತ್ರಗಳಲ್ಲಿ 77 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರುಗಳ ಪಟ್ಟಿಯನ್ನು ಬಿಜೆಪಿ ಶನಿವಾರ ಬಿಡುಗಡೆ ಮಾಡಿದ್ದು, ಇವುಗಳಲ್ಲಿ 32 ಹಾಲಿ ಶಾಸಕರಿಗೆ 14 ಮಾಜಿ ಶಾಸಕರಿಗೆ ಹಾಗೂ 11 ಸಚಿವರಿಗೆ ಟಿಕೆಟ್ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.