JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
ಪ್ರತಿಪಕ್ಷಗಳ ಗದ್ದಲದ ನಂತರ ಎರಡೂ ಸದನಗಳನ್ನು ದಿನಕ್ಕೆ ಮುಂದೂಡಲಾಯಿತು...
Team Udayavani, Nov 25, 2024, 7:07 PM IST
ಹೊಸದಿಲ್ಲಿ: ಸಂಸತ್ತಿನ ಉಭಯ ಸದನಗಳಲ್ಲಿ ಅದಾನಿ ಗ್ರೂಪ್ ವಿರುದ್ಧದ ಭ್ರಷ್ಟಾಚಾರ ಆರೋಪಗಳನ್ನು ನಿಯಮ 267 ರ ಅಡಿಯಲ್ಲಿ ಪ್ರಸ್ತಾಪಿಸಲು ಪ್ರತಿಪಕ್ಷಗಳಿಗೆ ಅವಕಾಶ ನೀಡದಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ(ನ25) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ವಿಷಯವು ದೇಶದ ಪ್ರತಿಷ್ಠೆಯ ಮೇಲೆ ಪರಿಣಾಮ ಬೀರುವುದರಿಂದ ಸರಕಾರವು ಸತ್ಯ ಹೊರಬರುವಂತೆ ಮಾಡಬೇಕು ಎಂದು ಖರ್ಗೆ ಒತ್ತಾಯಿಸಿದ್ದಾರೆ.
ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಸೋಮವಾರ ನಿಯಮ 267 ರ ಅಡಿಯಲ್ಲಿ ಸಲ್ಲಿಸಲಾದ 13 ನೋಟಿಸ್ಗಳನ್ನು ನಿರಾಕರಿಸಿದ್ದಾರೆ, ಇದರಲ್ಲಿ 7 USD 265 ಮಿಲಿಯನ್ ಲಂಚವನ್ನು ಪಾವತಿಸಿದ ಆರೋಪದ ಮೇಲಿನ ಯುಎಸ್ ದೋಷಾರೋಪಣೆಯ ಕುರಿತು ಚರ್ಚೆಯನ್ನು ಕೋರಲಾಗಿತ್ತು. ಲೋಕಸಭೆಯಲ್ಲೂ ಇದೇ ರೀತಿಯ ಸೂಚನೆಗಳನ್ನು ತಿರಸ್ಕರಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಕೆಲವು ಪ್ರಮುಖ ಉದ್ಯಮಿಗಳಿಗೆ ವಿದೇಶದಲ್ಲಿ ಗುತ್ತಿಗೆ ಪಡೆಯಲು ಸಹಾಯ ಮಾಡುವ ಮೂಲಕ ದೇಶದ ಪ್ರತಿಷ್ಠೆಯನ್ನು ಹಾಳು ಮಾಡಿದ್ದಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಅದಾನಿ ಗ್ರೂಪ್ ವಿರುದ್ಧದ ಆರೋಪಗಳ ಬಗ್ಗೆ ಜಂಟಿ ಸಂಸದೀಯ ಸಮಿತಿ ತನಿಖೆಗೆ ಒತ್ತಾಯಿಸಿ, 267 ನೇ ನಿಯಮವನ್ನು ಇಂತಹ ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಲು ಮಾತ್ರ ಮಾಡಲಾಗಿದೆ. ಇಲ್ಲದಿದ್ದರೆ ಆ ನಿಯಮ ಇರಬಾರದಿತ್ತು. ಈ ನಿಯಮದ ಅಡಿಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಲು ನಮಗೆ ಅವಕಾಶ ನೀಡಬೇಕು ಎಂದು ನಾವು ಬಯಸುತ್ತೇವೆ ಎಂದು ಕಿಡಿ ಕಾರಿದ್ದಾರೆ.
ಜೆಪಿಸಿಯಲ್ಲಿ ಬಿಜೆಪಿಯಿಂದ ಹೆಚ್ಚು ಜನರು ಇರುತ್ತಾರೆ ಮತ್ತು ಎಲ್ಲರಿಗೂ ಪ್ರತಿನಿಧಿಸಲು ಅವಕಾಶ ಸಿಗುತ್ತದೆ. ಜೆಪಿಸಿ ರಚನೆ ಮಾಡಿ, ಸತ್ಯ ಹೊರಬರಲಿ ಎಂದು ಖರ್ಗೆ ಎಕ್ಸ್ನಲ್ಲಿ ವಿಡಿಯೋ ಸಂದೇಶ ಹಂಚಿಕೊಂಡಿದ್ದಾರೆ.
ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನ ಈ ವಿಷಯವನ್ನು ಪ್ರಸ್ತಾಪಿಸಲು ಅವಕಾಶ ನೀಡದೆ ಪ್ರತಿಪಕ್ಷಗಳ ಗದ್ದಲದ ನಂತರ ಎರಡೂ ಸದನಗಳನ್ನು ದಿನಕ್ಕೆ ಮುಂದೂಡಲಾಯಿತು. ಸದನ ಮುಂದೂಡಿಕೆಗೆ ಕಾರಣ ಗೊತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.