ಲಾಕ್ ಡೌನ್ ನಡುವೆ ಒಗ್ಗಟ್ಟು ಪ್ರದರ್ಶಿಸಿ – ಏ.5ರಂದು ರಾತ್ರಿ 9ಗಂಟೆಗೆ ದೀಪ ಬೆಳಗಿಸಿ: ಮೋದಿ
ಪ್ರತಿಯೊಬ್ಬರು ತಾವು ಒಬ್ಬಂಟಿಯಲ್ಲ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
Team Udayavani, Apr 3, 2020, 9:46 AM IST
ನವದೆಹಲಿ:ಕೋವಿಡ್ 19 ಮಹಾಮಾರಿ ವಿರುದ್ಧ ಎಲ್ಲರೂ ಹೋರಾಡಬೇಕಾಗಿದೆ. ಈ ನಿಟ್ಟಿನಲ್ಲಿ ಏಪ್ರಿಲ್ 5ರಂದು ರಾತ್ರಿ 9ಗಂಟೆಗೆ 9 ನಿಮಿಷಗಳ ಕಾಲ ಮನೆಯ ಲೈಟ್ ಅನ್ನು ಆರಿಸಿ ಮೊಂಬತ್ತಿ, ದೀಪ ಅಥವಾ ಮೊಬೈಲ್ ಫ್ಲ್ಯಾಶ್ ಲೈಟ್ ಗಳನ್ನು ಬೆಳಗುವ ಮೂಲಕ ದೇಶದ 130 ಕೋಟಿ ಭಾರತೀಯರು ತಮ್ಮ ಒಗ್ಗಟ್ಟು ಪ್ರದರ್ಶಿಸಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ಶುಕ್ರವಾರ ದೇಶದ ಜನತೆಯನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಡುಗಡೆ ಮಾಡಿರುವ ವಿಡಿಯೋ ಸಂದೇಶದಲ್ಲಿ ಈ ರೀತಿ ಮನವಿ ಮಾಡಿಕೊಂಡಿದ್ದಾರೆ. ದೇಶದಲ್ಲಿ ಲಾಕ್ ಡೌನ್ ಅನಿವಾರ್ಯ ಆಗಿದೆ. ಆದರೆ ಪ್ರತಿಯೊಬ್ಬರು ತಾವು ಒಬ್ಬಂಟಿಯಲ್ಲ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ.
“ದಯವಿಟ್ಟಿ ಈ ಭಾನುವಾರ ನಿಮ್ಮ ಮನೆಯ ಲೈಟ್ ಗಳನ್ನು ಆರಿಸಿ, ಮೊಂಬತ್ತಿ, ದೀಪ ಅಥವಾ ಮೊಬೈಲ್ ಲೈಟ್ ಗಳನ್ನು ನಿಮ್ಮ ಮನೆಯ ಬಾಲ್ಕನಿ, ಮನೆಯ ಹೊರಗೆ 9 ನಿಮಿಷಗಳ ಕಾಲ ಬೆಳಗಿಸಿ” ಎಂದು ಪ್ರಧಾನಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.