Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
Team Udayavani, May 17, 2024, 5:08 PM IST
ಪಣಜಿ: ಇಲ್ಲಿನ ಮಿರಮಾರ್ ಕಡಲತೀರದಲ್ಲಿ ಮಂಗಳವಾರ ರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದ್ದು ಕೇರಳದ ಎರ್ನಾಕುಲಂನ ಪ್ರವಾಸಿಗರೊಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಮೃತ ದುರ್ದೈವಿ ಅಖಿಲ್ ವಿಜಯನ್ (35) ಎಂದು ಗುರುತಿಸಲಾಗಿದ್ದು, ಕುಟುಂಬ ಮತ್ತು ಸ್ನೇಹಿತರೊಂದಿಗೆ ಬೀಚ್ಗೆ ಬಂದಿದ್ದ ವೇಳೆ ಅವಘಡ ನಡೆದಿದೆ. ಅಖಿಲ್ ವಿಜಯನ್ ಮಂಗಳವಾರ ರಾತ್ರಿ 8:30 ರ ವೇಳೆ ಗುಡುಗು ಸಹಿತ ಮಳೆಯಲ್ಲಿ ತಮ್ಮ ಕಾರಿನ ಬಳಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಿಡಿಲಿನ ಆಘಾತಕ್ಕೆ ಅಖಿಲ್ ಪತ್ನಿ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ವಿಜಯನ್ ಮತ್ತು ಅವರೊಂದಿಗಿದ್ದ 7-8 ಜನರ ಗುಂಪು ಸುರಿಯುತ್ತಿರುವ ಮಳೆಯಿಂದ ರಕ್ಷಿಸಿಕೊಳ್ಳಲು ಮೀರಾಮಾರ್ ಬೀಚ್ನಿಂದ ತಮ್ಮ ಕಾರಿನ ಬಳಿ ಹೋಗುತ್ತಿದ್ದಾಗ ಅವರು ಇದ್ದಕ್ಕಿದ್ದಂತೆ ಸಿಡಿಲು ಬಡಿದ ಪರಿಣಾಮ ನೆಲದ ಮೇಲೆ ಕುಸಿದಿದ್ದಾರೆ. ವಿಜಯನ್ ರವರನ್ನು ಕೂಡಲೇ 108 ಆಂಬ್ಯುಲೆನ್ಸ್ಗೆ ಕರೆ ಮಾಡಿ ಗೋವಾ ವೈದ್ಯಕೀಯ ಆಸ್ಪತ್ರೆ ಬಾಂಬೋಲಿಂಗೆ ಕರೆದೊಯ್ಯಲಾಯಿತು.ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.
ಕಳೆದ ಒಂದು ವಾರದಿಂದ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮೋಡ ಕವಿದ ವಾತಾವರಣ ಮುಂದುವರೆದಿದೆ. ಸಂಜೆ ವೇಳೆ ಆಗಾಗ ಮಳೆ ಸುರಿಯುತ್ತಿರುವುದರಿಂದ ಬಿಸಿಲಿನ ತಾಪದಿಂದ ಬಳಲುತ್ತಿರುವ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.