ಏ.1ರಿಂದ ಹಗಲಲ್ಲೂ ಬೈಕ್ ಗೆ ಹೆಡ್ ಲೈಟ್ ಕಡ್ಡಾಯ! ಏನಿದು AHO
Team Udayavani, Mar 21, 2017, 6:09 PM IST
ನವದೆಹಲಿ:ಅಪಘಾತದಿಂದಾಗುವ ಸಾವಿನ ಪ್ರಮಾಣ ತಗ್ಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈಗಾಗಲೇ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮಟ್ ಕಡ್ಡಾಯಗೊಳಿತ್ತು. ಇದೀಗ ಮತ್ತೊಂದು ಹೆಜ್ಜೆ ಮುಂದಿಟ್ಟಿರುವ ಕೇಂದ್ರ ಸರ್ಕಾರ, ಏಪ್ರಿಲ್ 1ರಿಂದ ಮಾರಾಟವಾಗುವ ಎಲ್ಲಾ ದ್ವಿಚಕ್ರ ವಾಹನಗಳಲ್ಲಿ ಹಗಲೂ, ರಾತ್ರಿ ಉರಿಯಬಲ್ಲ ಹೆಡ್ ಲೈಟ್(ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಆನ್) ವ್ಯವಸ್ಥೆ ಜಾರಿಗೆ ಬರಲಿದೆ.
ಏನಿದು ಎಎಚ್ ಒ?
ಏಪ್ರಿಲ್ ತಿಂಗಳಿನಿಂದ ರಸ್ತೆಗಿಳಿಯಲಿರುವ ಹೊಸ ಬೈಕ್ ಗಳಲ್ಲಿ ಆಟೋಮ್ಯಾಟಿಕ್ ಹೆಡ್ ಲ್ಯಾಂಪ್ ಆನ್(ಎಎಚ್ಒ) ವ್ಯವಸ್ಥೆ ಕಡ್ಡಾಯವಾಗಿ ಇರಬೇಕೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ತಿಳಿಸಿದೆ. ಅಷ್ಟೇ ಅಲ್ಲ ಎಎಚ್ ಒ ಮಾದರಿಯಲ್ಲೇ ಕಾರಿಗೂ ಹಗಲೂ ಉರಿಯುವ ಹೆಡ್ ಲೈಟ್ ವ್ಯವಸ್ಥೆ ಬರಲಿದೆ.
ಹಗಲಲ್ಲೂ ಹೆಡ್ ಲೈಟ್ ಯಾಕೆ?
ರಸ್ತೆಯಲ್ಲಿ ನಡೆದು ಹೋಗುವವರಿಗೆ ಹಾಗೂ ಇತರ ಸವಾರರಿಗೆ ವಾಹನಗಳು ಸ್ಪಷ್ಟವಾಗಿ ಕಾಣಿಸಲಿ ಎಂದು ಹಾಗೂ ಸವಾರರ ಹೊಣೆಗಾರಿಕೆಯನ್ನು ಹೆಚ್ಚಿಸುವ ಉದ್ದೇಶ ಇದಾಗಿದೆ. ಯಾಕೆಂದರೆ ಸರ್ಕಾರಿ ದಾಖಲೆಗಳ ಪ್ರಕಾರ 2015ರಲ್ಲಿ ಕರ್ನಾಟಕದಲ್ಲಿ ಸುಮಾರು ಶೇ.30ರಷ್ಟು ದ್ವಿಚಕ್ರ ವಾಹನ ಸವಾರರ ಅಪಘಾತ ಸಂಭವಿಸಿದೆ. 44, 011 ದ್ವಿಚಕ್ರ ವಾಹನ ಅಪಘಾತ ನಡೆದಿತ್ತು.
ದ್ವಿಚಕ್ರ ವಾಹನ ಅಪಘಾತದಲ್ಲಿ 1.4 ಲಕ್ಷ ಸವಾರರು ಸಾವನ್ನಪ್ಪಿರುವುದಾಗಿ ನ್ಯಾಷನಲ್ ಕ್ರೈಮ್ ರೆಕಾರ್ಡ್ಸ್ ಬ್ಯೂರೋ ಅಂಕಿಅಂಶ ತಿಳಿಸಿದೆ.
ರಸ್ತೆ ಸುರಕ್ಷತೆಯ ನಿಟ್ಟಿನಲ್ಲಿ ತಜ್ಞರ ತಂಡ ದ್ವಿಚಕ್ರ ವಾಹನ ಸವಾರರಿಗೆ ಈ ಎಎಚ್ ಒ ನಿಯಮ ಜಾರಿ ಬಗ್ಗೆ ವರದಿ ನೀಡಿತ್ತು ಎಂದು ಸಾರಿಗೆ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಜಸ್ಟೀಸ್ ರಾಧಾಕೃಷ್ಣನ್ ಸಮಿತಿ ನೀಡಿರುವ ನಿರ್ದೇಶನದ ಆಧಾರದ ಮೇಲೆ ಸಚಿವಾಲಯ 2016ರ ಮಾರ್ಚ್ ನಲ್ಲಿ ಪ್ರಕಟಣೆ ಹೊರಡಿಸಿತ್ತು. ಬಳಿಕ 2017ರ ಏಪ್ರಿಲ್ ನಿಂದ ದ್ವಿಚಕ್ರ ವಾಹನ ಸವಾರರಿಗೆ ಎಎಚ್ ಒ ಕಡ್ಡಾಯ ಎಂದು ಹೇಳಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.