Byju’s ಕಚೇರಿಗಳಿಗೆ ಬೀಗ… ಉದ್ಯೋಗಿಗಳಿಗೆ ವರ್ಕ್‌ಫ್ರಂ ಹೋಂ
Team Udayavani, Mar 13, 2024, 9:37 AM IST
ನವದೆಹಲಿ: ಆರ್ಥಿಕ ಬಿಕ್ಕಟ್ಟಿನಲ್ಲಿ ಸಿಲುಕಿರುವ ಎಜುಕೇಶನ್ ಟೆಕ್ ಸಂಸ್ಥೆ ಬೈಜೂಸ್ ಬೆಂಗಳೂರಿನಲ್ಲಿರುವ ತನ್ನ ಕೇಂದ್ರ ಕಚೇರಿಯನ್ನು ಹೊರತುಪಡಿಸಿ ಮಿಕ್ಕೆಲ್ಲಾ ಕಚೇರಿಗಳನ್ನು ಮುಚ್ಚಿದೆ. ಅಲ್ಲದೇ, ತನ್ನ 14,000 ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ.
ವೆಚ್ಚ ಕಡಿತಗೊಳಿಸುವ ನಿಟ್ಟಿನಲ್ಲಿ ಬೈಜೂಸ್ ಈಗಾಗಲೇ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ ತನ್ನ ಕಚೇರಿಗಳ ಒಪ್ಪಂದವನ್ನು ನವೀಕರಣಗೊಳಿಸಲಾಗದ್ದಕ್ಕೆ ಕೇಂದ್ರ ಕಚೇರಿಯನ್ನು ಬಿಟ್ಟು ಮಿಕ್ಕೆಲ್ಲ ಕಚೇರಿಗಳನ್ನು ಮುಚ್ಚಿದೆ.
ಆದಾಗ್ಯೂ 6 ರಿಂದ 10ನೇ ತರಗತಿಯ ವಿದ್ಯಾರ್ಥಿಗಳು ಕಲಿಯುತ್ತಿರುವ 300 ಟ್ಯೂಷನ್ ಕೇಂದ್ರಗಳ ಕಾರ್ಯನಿರ್ವಹಣೆ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಪ್ರಸಕ್ತ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ 1,000 ಉದ್ಯೋಗಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ: Huge Explosion: ಚೈನಾ ರೆಸ್ಟೊರೆಂಟ್ ನಲ್ಲಿ ಪ್ರಬಲ ಸ್ಫೋಟ: ಓರ್ವ ಮೃತ್ಯು, 22 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಯ ಬಂಧನ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್ ರಗಳೆ
German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್ ಶೆಫರ್ಡ್ ನಾಯಿ ಕೊಂದ!
Elephant: ಬೆಳಗಾವಿಯ ಖಾನಾಪುರದಲ್ಲಿ ಸೆರೆ ಹಿಡಿದ ಗಂಡಾನೆ ಸಕ್ರೆಬೈಲು ಆನೆ ಬಿಡಾರಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.