ಲೋಕಸಭೆ, ವಿಧಾನಸಭೆ ಏಕಕಾಲಕ್ಕೆ ಚುನಾವಣೆ?

Team Udayavani, Aug 15, 2017, 6:15 AM IST

election.jpg

ಹೊಸದಿಲ್ಲಿ: 2019ರಲ್ಲಿ  ಜರಗಬೇಕಿರುವ ಲೋಕಸಭೆ ಚುನಾವಣೆ 2018ರಲ್ಲೇ ನಡೆಯಲಿದೆಯೇ? ಹೌದು, ಇಂತಹುದೊಂದು ಗಂಭೀರ ಚರ್ಚೆ ಕೇಂದ್ರ ಸರಕಾರಿ ಆಡಳಿತ ಮಟ್ಟದಲ್ಲಿ ಶುರುವಾಗಿದೆ. ಏಕಕಾಲಕ್ಕೆ ವಿಧಾನಸಭೆ, ಲೋಕಸಭೆ ಚುನಾವಣೆ ನಡೆಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಿಟ್ಟಿರುವ ಸರಕಾರ, ಇದರ ಸಾಧ್ಯಾಸಾಧ್ಯತೆ ಬಗ್ಗೆ ಸಮಾಲೋಚನೆ ನಡೆಸುತ್ತಿದೆ. ಅದರ ಮೊದಲ ಹೆಜ್ಜೆಯಾಗಿ, 2019ರಲ್ಲಿ ನಡೆಯಬೇಕಿರುವ ಲೋಕಸಭೆ ಚುನಾವಣೆಯನ್ನು ಅವಧಿ ಪೂರ್ವವಾಗಿ ನಡೆಸಲು ಯೋಜಿ ಸಲಾಗುತ್ತಿದೆ.

2018ರ ನವೆಂಬರ್‌-ಡಿಸೆಂಬರ್‌ ಅವಧಿಯಲ್ಲಿ  ನಡೆಯ ಬೇಕಾಗಿರುವ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಯ ಜತೆಗೇ ಲೋಕಸಭೆ ಚುನಾವಣೆಯನ್ನೂ ನಡೆಸುವ ಚಿಂತನೆ ಒಂದಾದರೆ, ತದನಂತರ ಕ್ರಮೇಣ ವಿಧಾನಸಭೆ ಚುನಾವಣೆಗಳನ್ನು ಲೋಕಸಭೆ ಚುನಾವಣೆಯ ಜತೆಗೇ ಮಾಡಬಹುದಾದ ಸಾಧ್ಯತೆಗಳ ಬಗ್ಗೆಯೂ ಚರ್ಚಿಸಲಾಗುತ್ತಿದೆ.

ಸಂವಿಧಾನದಲ್ಲಿನ ನಿಯಮಾವಳಿಯಂತೆ, ಅವಧಿ ಪೂರ್ವ ಚುನಾವಣೆ ಸುಲಭ. ಆದರೆ, ಅವಧಿ ಮುಗಿದ ಬಳಿಕ ಅದೇ ಸರಕಾರವನ್ನು ಇನ್ನಷ್ಟು ದಿನಗಳ ಕಾಲ ಮುಂದೂಡುವ ಅಥವಾ ರಾಷ್ಟ್ರಪತಿ ಆಳ್ವಿಕೆ ಹೇರುವ ಕ್ರಮವಿಲ್ಲ. ಹೀಗಾಗಿ, ಇದಕ್ಕೆ ಸಾಂವಿಧಾನಿಕವಾದ ಒಂದಿಷ್ಟು ಪ್ರಕ್ರಿಯೆಗಳು ನಡೆಯಲೇಬೇಕಾಗುತ್ತವೆ. 

ಚುನಾವಣೆಗೆ ಸಾಕಷ್ಟು ಪ್ರಮಾಣದಲ್ಲಿ ಹಣ ವ್ಯಯವಾ ಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಬಗ್ಗೆ ಲೋಕಸಭಾ ಮಾಜಿ ಪ್ರಧಾನ ಕಾರ್ಯದರ್ಶಿ ಸುಭಾಷ್‌ ಸಿ. ಕಶ್ಯಪ್‌ ಹಾಗೂ ಉಳಿದ ಕಾರ್ಯ ದರ್ಶಿಗಳು ಈ ಹಿಂದೆ ಪ್ರಸ್ತಾವನೆ ಸಲ್ಲಿಸಿದ್ದರು. ಈಗ ಅಳವಡಿಕೆಗೆ ಚರ್ಚೆ ಆರಂಭ ಗೊಂಡಿದೆ.

ಸದ್ಯದ ಮಾಹಿತಿ ಪ್ರಕಾರ 2019, ಎಪ್ರಿಲ್‌ನಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ಹಾಗೂ ಮಿಜೋರಾಂ ಚುನಾವಣೆಗಳನ್ನು ನಡೆಸುವ ಅವಕಾಶವಿದೆ. ಈ ಎಲ್ಲ ರಾಜ್ಯಗಳಲ್ಲಿಯೂ ಬಿಜೆಪಿ ಸರಕಾರ ಆಡಳಿತ ನಡೆಸುತ್ತಿದೆೆ. ಒಂದೊಮ್ಮೆ ಉಳಿದ ಪಕ್ಷಗಳು ಒಪ್ಪಿಕೊಂಡಲ್ಲಿ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಒಡಿಶಾಗಳಲ್ಲಿಯೂ ಒಟ್ಟಿಗೇ ನಡೆಸುವ ಅವಕಾಶವೂ ಇದೆ.

ಕರ್ನಾಟಕದಲ್ಲಿ ?
ಕರ್ನಾಟಕ ಸಹಿತ ಇನ್ನು ಕೆಲ ರಾಜ್ಯ ಸರಕಾರಗಳ ಅವಧಿ 2018ರ ಮಾರ್ಚ್‌ ವೇಳೆಗೆ ಅಂತ್ಯಗೊಳ್ಳಲಿದ್ದು, ಲೋಕಸಭೆ ಚುನಾವಣೆಗೆ 6 ತಿಂಗಳಿಗಿಂತ ಹೆಚ್ಚು ಸಮಯ ಕಾಯಬೇಕಾಗುತ್ತದೆ. ಇದಕ್ಕೆ ಸಾಂವಿಧಾನಿಕವಾದ ಅವಕಾಶ ಇರುವುದಿಲ್ಲ. ಆಗ, ಸಂವಿಧಾನದಲ್ಲಿನ ನಿಯಮಾವಳಿಗೆ ತಿದ್ದುಪಡಿ ತರಬೇಕಾದ ಅನಿವಾರ್ಯ ನಿರ್ಮಾಣವಾಗಲಿದೆ.

ಟಾಪ್ ನ್ಯೂಸ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

liqer-wine

Huge Revenue: ಹೊಸ ವರ್ಷದ ಸಂಭ್ರಮ; ಅಬಕಾರಿ ಇಲಾಖೆಗೆ ಭರ್ಜರಿ ಆದಾಯ!

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

1-ewqewq

Team India; ಡ್ರೆಸ್ಸಿಂಗ್ ರೂಂ ರಹಸ್ಯ: ಕೋಚ್ ಗಂಭೀರ್ ವಿರುದ್ಧ ಮಾಜಿ ಕ್ರಿಕೆಟಿಗರ ಅಸಮಾಧಾನ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

52528

Delhi: ಪತ್ನಿಯಿಂದ ವಿಚ್ಛೇದನ ಪಡೆಯುವ ಹಂತದಲ್ಲಿದ್ದ ವ್ಯಕ್ತಿ ನೇಣಿಗೆ ಶರಣು

eart

Kutch; 3.2 ತೀವ್ರತೆಯ ಭೂ ಕಂಪನ

crime (2)

Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

9

Kota: ಬಡವರ ಪಾಲಿಗೆ ಬಾಂಧವ್ಯದ ನೆರಳು

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.