ಇಂದು ಏಳನೇ ಹಂತದ ಲೋಕ ಮತದಾನ
Team Udayavani, May 19, 2019, 8:00 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಸತತ ಒಂದೂವರೆ ತಿಂಗಳಿನ ಬಳಿಕ ದೇಶದಲ್ಲಿ ಚುನಾವಣೆ ಮುಕ್ತಾಯ ಹಂತ ತಲುಪಿದೆ.
ರವಿವಾರ 7 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ 59 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಇದರಲ್ಲಿ ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಾಣಸಿಯೂ ಸೇರಿದೆ. ಉತ್ತರ ಪ್ರದೇಶ ಮತ್ತು ಪಂಜಾಬ್‌ಗಳ ತಲಾ 13, ಪಶ್ಚಿಮ ಬಂಗಾಲದ 9, ಮಧ್ಯಪ್ರದೇಶ ಮತ್ತು ಬಿಹಾರಗಳ ತಲಾ 8, ಹಿಮಾಚಲ ಪ್ರದೇಶದ 4, ಝಾರ್ಖಂಡ್‌ನ 3, ಚಂಡೀಗಢದ 1 ಕ್ಷೇತ್ರವೂ ಸೇರಿವೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.
ರಾಜ್ಯದಲ್ಲೂ ಉಪಚುನಾವಣೆ
ಕರ್ನಾಟಕದಲ್ಲಿ ಡಾ| ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ಮತ್ತು ಸಿ.ಎಸ್. ಶಿವಳ್ಳಿ ಅವರ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನಸಭೆ ಕ್ಷೇತ್ರಗಳಿಗೂ ಉಪ ಚುನಾವಣೆ ನಡೆಯುತ್ತಿದೆ.
ಮತಗಟ್ಟೆ ಸಮೀಕ್ಷೆಗಳತ್ತ ದೃಷ್ಟಿ
ಬೆಂಗಳೂರು: ರವಿವಾರ ಸಂಜೆ ಕೊನೆ ಹಂತದ ಮತದಾನ ಮುಗಿಯುತ್ತಿದ್ದಂತೆ ಮತದಾನೋತ್ತರ ಸಮೀಕ್ಷೆಗಳ ಮಹಾಪೂರ ಹರಿಯಲಿದೆ.
ರಾಜ್ಯದಲ್ಲೂ ವಿಧಾನಸಭೆಯಲ್ಲಿ ಸಂಖ್ಯಾಬಲ ದೃಷ್ಟಿಯಿಂದ ಮಹತ್ವದ್ದೆನಿಸಿರುವ ಕುಂದಗೋಳ, ಚಿಂಚೋಳಿ ವಿಧಾನಸಭೆ ಉಪಚುನಾವಣೆಗಳ ಸಮೀಕ್ಷೆ ಬಗ್ಗೆಯೂ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ನಾಯಕರು ಕಾತರರಾಗಿದ್ದಾರೆ. ಎ. 18 ಮತ್ತು 24ರಂದು 2 ಹಂತಗಳಲ್ಲಿ ಮತದಾನ ನಡೆದಿತ್ತು.
ದೇಶಾದ್ಯಂತ 7 ಹಂತಗಳಲ್ಲಿ ಮತದಾನವಿದ್ದ ಕಾರಣ ಮತದಾನೋತ್ತರ ಸಮೀಕ್ಷೆಗಳು ಬಹಿರಂಗವಾಗಲಿಲ್ಲ. ಹಾಗಿದ್ದರೂ ಮತದಾನ ಪ್ರಮಾಣ, ವಿಧಾನಸಭಾ ಕ್ಷೇತ್ರವಾರು ಮತದಾನದ ಅಂಕಿಸಂಖ್ಯೆ, ಹಿಂದಿನ ಫಲಿತಾಂಶ ಮತ್ತಿತರ ಅಂಶಗಳು ಮತ್ತು ಬೂತ್ ಮಟ್ಟದ ಕಾರ್ಯಕರ್ತರ ಮಾಹಿತಿ ಆಧರಿಸಿ ಪಕ್ಷಗಳ ನಾಯಕರು ತಮ್ಮದೇ ಲೆಕ್ಕಾಚಾರದಲ್ಲಿದ್ದಾರೆ.
ರಾಜ್ಯದಲ್ಲಿ ಬಿಜೆಪಿಯ 15 ಸಂಸದರಿದ್ದರೆ (ಕೇಂದ್ರ ಸಚಿವರಾಗಿದ್ದ ಅನಂತ ಕುಮಾರ್ ನಿಧನದಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ತೆರವಾಗಿತ್ತು) ಕಾಂಗ್ರೆಸ್ 10 ಮತ್ತು ಜೆಡಿಎಸ್‌ನ ಇಬ್ಬರು ಸಂಸದರಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಮತದಾನ ಪೂರ್ವ ಮೈತ್ರಿ ಮಾಡಿಕೊಂಡಿವೆ. ಬಿಜೆಪಿಯು ಈ ಬಾರಿ 22 ಸ್ಥಾನ ಗೆಲ್ಲುವ ಗುರಿ ಹೊಂದಿದೆ.
ಈ ಮಧ್ಯೆ ಬಿಜೆಪಿಯು ಕುಂದಗೋಳ, ಚಿಂಚೋಳಿ ವಿಧಾನಸಭೆ ಉಪಚುನಾವಣೆ ಫಲಿತಾಂಶದ ಬಗೆಗೂ ಕಾತರದಿಂದಿದೆ. ವಿಧಾನಸಭೆಯಲ್ಲಿ ಶಾಸಕರ ಬಲ ವೃದ್ಧಿ ದೃಷ್ಟಿಯಿಂದ ಈ ಎರಡೂ ಸ್ಥಾನಗಳ ಗೆಲುವು ಮಹತ್ವದ್ದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.