Loksabha Election: ಸೋತು ಗೆದ್ದ ಇಂಡಿಯಾ ಒಕ್ಕೂಟ

Team Udayavani, Jun 5, 2024, 5:35 AM IST

Loksabha Election: ಸೋತು ಗೆದ್ದ ಇಂಡಿಯಾ ಒಕ್ಕೂಟ

ನವದೆಹಲಿ: ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯುವ ಉದ್ದೇಶದಿಂದ ರಚನೆಯಾದ ಮೈತ್ರಿಕೂಟ ಅಧಿಕಾರಕ್ಕೇರಲು ವಿಫ‌ಲವಾಗಿದೆ. ಆದರೂ ತನ್ನ ಉದ್ದೇಶದಲ್ಲಿ ಭಾಗಶಃ ಸಫ‌ಲವಾಗಿದೆ ಎನಿಸಿಕೊಂಡಿದೆ.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್‌ ನೇತೃತ್ವದ ಮೈತ್ರಿಕೂಟಕ್ಕೆ ಕೇವಲ 91 ಸ್ಥಾನ ಲಭ್ಯವಾಗಿತ್ತು. ಈ ಬಾರಿ ಸರ್ಕಾರ ರಚನೆ ಮಾಡದಿದ್ದರೂ 141 ಸ್ಥಾನಗಳ ಏರಿಕೆಯನ್ನು ಕಂಡಿದೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಮೈತ್ರಿಕೂಟ ರಚನೆ ಮಾಡಿಕೊಂಡರೂ ಸಹ ಸಣ್ಣಪುಟ್ಟ ಪಕ್ಷಗಳು ಸೇರಿ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವಲ್ಲಿ ವಿಫ‌ಲವಾಗಿದ್ದು, ಮೈತ್ರಿಕೂಟದ ಸೋಲಿಗೆ ಪ್ರಮುಖ ಕಾರಣ ಎನಿಸಿಕೊಂಡಿದೆ. ಅಲ್ಲದೆ, ಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆ ಕಾರ್ಯಕ್ರಮವನ್ನು ಬಹಿಷ್ಕರಿಸಿದ್ದು, ಚುನಾವಣೆಯ ಸಮಯದಲ್ಲಿ “ಹಿರಿಯ ನಾಯಕ ಸ್ಯಾಮ್‌ ಪಿತ್ರೋಡಾ ಸಂಪತ್ತು ಮರುಹಂಚಿಕೆ ಹೇಳಿಕೆ’ ಕೂಡ ಇಂಡಿಯಾ ಒಕ್ಕೂಟಕ್ಕೆ ಹಿನ್ನಡೆ ಉಂಟುಮಾಡಿತು.

ಪ್ರಧಾನಿ ಅಭ್ಯರ್ಥಿ ಇಲ್ಲದ್ದು: ಎನ್‌ಡಿಎ ಮೈತ್ರಿಕೂಟದ ಬಳಿ ಇರುವ ಮೋದಿಯಂತಹ ಅಭ್ಯರ್ಥಿ ಇಂಡಿಯಾ ಮೈತ್ರಿಕೂಟದ ಬಳಿ ಇಲ್ಲದೇ ಇದ್ದುದ್ದು ಸಹ ಸೋಲಿಗೆ ಪ್ರಮುಖ ಕಾರಣವಾಗಿದೆ. ರಾಹುಲ್‌ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್‌ರಂತಹ ಎಲ್ಲಾ ನಾಯಕರು ಪ್ರಧಾನಿ ಹುದ್ದೆಯತ್ತ ಕಣ್ಣು ಹಾಕಿದ್ದು, ಜನರಲ್ಲಿ ಮೈತ್ರಿಕೂಟದ ಮೇಲಿನ ವಿಶ್ವಾಸವನ್ನು ಕುಂದಿಸಲು ಕಾರಣವಾಯಿತು.

ಅಧಿಕಾರಕ್ಕೇರಲು ವಿಫ‌ಲವಾದರೂ ಇಂಡಿಯಾ ಮೈತ್ರಿಕೂಟದ ಸಾಧನೆಯನ್ನು ಅಲ್ಲಗಳೆಯುವಂತಿಲ್ಲ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಮಾಡಿಕೊಂಡ ಒಪ್ಪಂದಗಳು, ಚುನಾವಣೆಗೂ ಮುನ್ನ ಜನರನ್ನು ತಲುಪಿದ್ದು, ಕೇಂದ್ರ ಸರ್ಕಾರದ ವೈಫ‌ಲ್ಯಗಳನ್ನು ಜನರಿಗೆ ಅರ್ಥ ಮಾಡಿಸಿದ್ದು ಮೈತ್ರಿಕೂಟದ ಕೈ ಹಿಡಿದಿದೆ.

ಕಾಂಗ್ರೆಸ್‌ ಪಕ್ಷ ದೇಶದ ಪ್ರಾಚೀನ ಪಕ್ಷ ಎಂಬ ಹಣೆಪಟ್ಟಿಯನ್ನು ಹೊಂದಿದ್ದರೂ ಸಹ ಚುನಾವಣೆಗೂ ಮುನ್ನ ಪ್ರತಿಷ್ಠೆಯನ್ನು ಪಕ್ಕಕ್ಕಿಟ್ಟು, ಇತರ ಪಕ್ಷಗಳೊಂದಿಗೆ ಸೀಟು ಹಂಚಿಕೆ ಮಾಡಿಕೊಂಡಿತು. ಉತ್ತರ ಪ್ರದೇಶ ದಲ್ಲಿ ಯೋಗಿ ಆದಿತ್ಯನಾಥರನ್ನು ಬಿಜೆಪಿ ಪಕ್ಕಕ್ಕೆ ಸರಿಸಿದ್ದರ ಪರಿಣಾಮವನ್ನು ಯಶಸ್ವಿಯಾಗಿ ಬಳಸಿಕೊಂಡಿತು. ಮಾಯಾವತಿ ಅವರ ಪಕ್ಷಕ್ಕೆ ಸಿಗುತ್ತಿದ್ದ ಮತಗಳು ಒಟ್ಟಾಗಿ ಇಂಡಿಯಾ ಪಾಲಾಯಿತು.

ಇದಿಷ್ಟೇ ಅಲ್ಲದೇ ಚುನಾವಣೆ ಘೋಷಣೆ ಯಾಗುವ ಮೊದಲೇ ಸಾಮಾಜಿಕ ಜಾಲ ತಾಣಗಳಲ್ಲಿ ನಿರಂತರವಾಗಿ ಪ್ರಚಾರ ಮಾಡುತ್ತಾ ಇಂಡಿಯಾ ಮೈತ್ರಿಕೂಟ ತನ್ನತ್ತ ಜನರನ್ನು ಸೆಳೆದಿದ್ದು, ಈ ಚುನಾವಣೆಯಲ್ಲಿ ಲಾಭ ತಂದುಕೊಟ್ಟಿತು. ಬಿಜೆಪಿ ನೀಡಿದ ಸಂವಿಧಾನ ಬದಲು ಹೇಳಿಕೆಯನ್ನು ಪ್ರಖರವಾಗಿ ಇಂಡಿಯಾ ಒಕ್ಕೂಟ ಬಳಸಿ ಕೊಂಡಿತು. ಹೀಗಾಗಿ ಇಂಡಿಯಾ ಒಕ್ಕೂಟ ಎಲ್ಲರ ನಿರೀಕ್ಷೆಯನ್ನು ಮೀರಿ ಅತಿಹೆಚ್ಚು ಸ್ಥಾನಗಳನ್ನು ತನ್ನದಾಗಿಸಿಕೊಂಡಿತು.

ಸೋಲಿಗೆ ಕಾರಣಗಳೇನು?

ಹೆಚ್ಚು ಪಕ್ಷಗಳನ್ನು ವಿಶ್ವಾಸಕ್ಕೆ ತರುವಲ್ಲಿನ ವಿಫ‌ಲತೆ

ಮೋದಿ ರೀತಿಯ ಪ್ರಧಾನಿ ಅಭ್ಯರ್ಥಿ ಇಲ್ಲದೇ ಇದ್ದದ್ದು

ರಾಹುಲ್‌, ಪ್ರಿಯಾಂಕರ ಮೇಲೆ ಹೆಚ್ಚು ಅವಲಂಬನೆ

ಕರ್ನಾಟಕ ಸೇರಿ ಭರವಸೆ ರಾಜ್ಯದಲ್ಲಿ ಭಾರಿ ಕುಸಿತ

ಕೊನೇ ಕ್ಷಣದಲ್ಲಿ ನಿತೀಶ್‌ ಕುಮಾರ್‌ ಮೈತ್ರಿಕೂಟ ತೊರೆದು ಹೋಗಿದ್ದು

ಟಾಪ್ ನ್ಯೂಸ್

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

PM ಮೋದಿ ಮನೆ ಮುಂದೆ ಧರಣಿ ನಡೆಸುವಿರಾ? ಎಂ.ಬಿ. ಪಾಟೀಲ್‌

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Belagavi: ಮರಕ್ಕೆ ಕ್ರೂಸರ್‌ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.