ಆಧಾರ್ ಕಾರ್ಡ್ ಬಳಕೆ ಐಚ್ಛಿಕ, ಕೆವೈಸಿ ದಾಖಲೆ ಪತ್ರ, ಬ್ಯಾಂಕ್ ಖಾತೆ ತೆರೆಯಲು ಪೂರಕ
Team Udayavani, Jul 5, 2019, 11:42 AM IST
ಹೊಸದಿಲ್ಲಿ : ಲೋಕಸಭೆ ನಿನ್ನೆ ಗುರುವಾರ ಸರ್ವಾನುಮತದಿಂದ 2019ರ ಆಧಾರ್ ಮತ್ತು ಇತರ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ಪಾಸು ಮಾಡಿದೆ.
ಆಧಾರ್ ಕಾರ್ಡ್ ಬಳಕೆಯೂ ಸಂಪೂರ್ಣವಾಗಿ ಬಳಕೆದಾರರಿಗೆ ಐಚ್ಛಿಕವಾಗಿದ್ದು ಇದನ್ನು ಅವರು ಬ್ಯಾಂಕ್ ಖಾತೆ ತೆರೆಯಲು ಬಳಸಬಹುದಲ್ಲದೆ ಸ್ವೀಕೃತ ಕೆವೈಸಿ ದಾಖಲೆ ಪತ್ರವಾಗಿ ಅದನ್ನು ಉಪಯೋಗಿಸಬಹುದಾಗಿದೆ ಎಂದು ಸರಕಾರ ಹೇಳಿದೆ.
ಈ ಮಸೂದೆಯಲ್ಲಿ ಸರಕಾರ ಆಧಾರ್ ಬಳಕೆಯ ನಿಯಮಗಳ ಉಲ್ಲಂಘನೆಗೆ ಮತ್ತು ಖಾಸಗಿತನದ ಉಲ್ಲಂಘನೆಗೆ ಕಠಿನ ದಂಡನೆಯೇ ಕ್ರಮಗಳನ್ನು ಅಳವಡಿಸಿದೆ.
ಲೋಕಸಭೆಯಲ್ಲಿ ಆಧಾರ್ ಮಸೂದೆ ಮಂಡಿಸಿದ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ಮಸೂದೆಯು ಆಧಾರ್ ಬಳಕೆದಾರರ ಖಾಸಗಿತನವನ್ನು ರಕ್ಷಿಸಲಿದೆ ಎಂದು ಹೇಳಿದರು. ಇದೇ ವೇಳೆ ಅವರು ಇಂಡಿಯನ್ ಟೆಲಿಗ್ರಾಫ್ ಕಾಯಿದೆ 1885 ಮತ್ತು 2002ರ ಹಣ ಅಕ್ರಮ ತಡೆ ಕಾಯಿದೆಯನ್ನು ಕೂಡ ಮಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.