ಎಸ್‌ಟಿಗೆ ತಳವಾರ, ಸಿದ್ದಿ , ಪರಿವಾರ ಸೇರ್ಪಡೆ
ಮಸೂದೆಗೆ ಸಂಸತ್ ಅನುಮೋದನೆ
Team Udayavani, Feb 12, 2020, 6:55 AM IST
ಹೊಸದಿಲ್ಲಿ: ಧಾರವಾಡ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿಯ ಸಿದ್ಧಿ, ಪರಿವಾರ ಮತ್ತು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡಗಳಿಗೆ ಸೇರಿಸುವ ಮಸೂದೆಗೆ ಮಂಗಳವಾರ ಸಂಸತ್‌ನ ಅನುಮೋದನೆ ಸಿಕ್ಕಿದೆ.
ಇದಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ (ಪರಿಶಿಷ್ಟ ಪಂಗಡ) ಮಸೂದೆ 2019 ಅನ್ನು ಲೋಕಸಭೆಯಲ್ಲಿ ಧ್ವನಿ ಮತದಿಂದ ಅಂಗೀಕರಿಸಲಾಗಿದೆ. ರಾಜ್ಯ ಸಭೆಯಲ್ಲಿ ಈ ಮಸೂದೆಗೆ ಈ ಹಿಂದೆಯೇ ಅನುಮೋದನೆ ನೀಡ ಲಾಗಿತ್ತು. ಈ ಬಗ್ಗೆ ಮಾತನಾಡಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ, ಇದು ಒಂದು ರಾಜ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಡಿದ ತಿದ್ದುಪಡಿಯಲ್ಲ. ಇತರ ರಾಜ್ಯಗಳಿಂದ ಪರಿಶಿಷ್ಟ ಪಂಗಡ ವ್ಯಾಪ್ತಿಗೆ ಸೇರ್ಪಡೆ ಗೊಳಿಸಬೇಕಾಗಿರುವ ಜಾತಿ ಗಳನ್ನು ಸೇರಿಸಲೂ ಅವಕಾಶ ಇದೆ ಎಂದಿದ್ದಾರೆ.
ಶಿವಸೇನೆಯ ಅರವಿಂದ ಸಾವಂತ್ ಮತ್ತು ಎನ್‌ಸಿಪಿಯ ಸುಪ್ರಿಯಾ ಸುಳೆ ಮಹಾರಾಷ್ಟ್ರದಲ್ಲಿನ ಧಂಗಾರ್ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸ ಬೇಕೆಂದು ಒತ್ತಾಯಿಸಿದ್ದಾರೆ. ತಮಿಳುನಾಡಿನ ಸಂಸದರೂ ಕೂಡ ಇದೇ ಮಾದರಿಯ ಬೇಡಿಕೆ ಮುಂದಿಟ್ಟರು. ಇದೇ ವೇಳೆ ಮರಾಠಿ ಭಾಷಿಕರಿಗೆ ಬೆಳಗಾವಿಯಲ್ಲಿ ಅನ್ಯಾಯ ಮಾಡಲಾಗುತ್ತಿದೆ ಎಂದು ಶಿವಸೇನೆಯ ಅರವಿಂದ ಸಾವಂತ್ ದೂರಿದರು. ರಾಸಾಯನಿಕ ಮತ್ತು ರಸಗೊಬ್ಬರಗಳ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಆಕ್ಷೇಪ ವ್ಯಕ್ತಪಡಿಸಿ, ಬೆಳಗಾವಿ ಗಡಿ ವಿಚಾರ ಇನ್ನೂ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯ ಹಂತದಲ್ಲಿದೆ. ಹೀಗಾಗಿ ಅದರ ಪ್ರಸ್ತಾವ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ
PM Modi ಅವರು ಜೋ ಬೈಡೆನ್ ಅವರಂತೆ ನೆನಪಿನ ಶಕ್ತಿ ಕಳೆದುಕೊಳ್ಳುತ್ತಿದ್ದಾರೆ: ರಾಹುಲ್ ಗಾಂಧಿ
Resign: ಶಿರೋಮಣಿ ಅಕಾಲಿದಳದ ಅಧ್ಯಕ್ಷ ಸ್ಥಾನಕ್ಕೆ ಸುಖಬೀರ್ ಸಿಂಗ್ ಬಾದಲ್ ರಾಜೀನಾಮೆ
Maharashtra; ನಮ್ಮ ಮೈತ್ರಿ ಕೂಟ ಗೆದ್ದು ಮಹಾರಾಷ್ಟ್ರ ಉಳಿಸಲಿದೆ: ಡಿ.ಕೆ. ಶಿವಕುಮಾರ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.