Lok Sabha result:ಜುಕರ್‌ಬರ್ಗ್ ಸುಳ್ಳು ಬಯಲು ಮಾಡಿದ ಅಶ್ವಿನಿ ವೈಷ್ಣವ್
ಚುನಾವಣೆಯಲ್ಲಿ ಎನ್‌ಡಿಎ ಸೋತಿದೆ ಎಂದಿದ್ದ ಮಾರ್ಕ್ ಜುಕರ್‌ಬರ್ಗ್
Team Udayavani, Jan 14, 2025, 6:52 AM IST
ಹೊಸದಿಲ್ಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಕೂಟ ಸೋಲನುಭವಿಸಿದೆ ಎಂದು ಹೇಳುವ ಮೂಲಕ ಫೇಸ್‌ಬುಕ್ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ವಿವಾದ ಮೈಮೇಲೆಳೆದುಕೊಂಡಿದ್ದಾರೆ. ಆದರೆ ಅವರ ಹೇಳಿಕೆ ಸುಳ್ಳು ಎಂದು ಟ್ವೀಟ್ ಮಾಡುವ ಮೂಲಕ ಸಚಿವ ಅಶ್ವಿನಿ ವೈಷ್ಣವ್ ತಿರುಗೇಟು ನೀಡಿದ್ದಾರೆ.
ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿದ ಜುಕರ್‌ಬರ್ಗ್, ಸಾರ್ವಜನಿಕವಾಗಿ ಮೂಡಿರುವ ಅಸಮಾಧಾನವು ವಿಶ್ವಾದ್ಯಂತ ಚುನಾವಣೆ ಮೇಲೆ ಪ್ರಭಾವ ಬೀರಿದೆ. ಭಾರತವೂ ಸೇರಿದಂತೆ 2024ರಲ್ಲಿ ನಡೆದ ಚುನಾವಣೆಗಳಲ್ಲಿ ಈವರೆಗೆ ಅಧಿಕಾರದಲ್ಲಿದ್ದವರು ಅಧಿಕಾರ ಕಳೆದುಕೊಂಡಿದ್ದಾರೆ. ಕೋವಿಡ್ ಎದುರಿಸಲು ಸರಕಾರಗಳು ವಿಫಲವಾದ ಹಿನ್ನೆಲೆಯಲ್ಲಿ ಅಧಿಕಾರ ಹೋಗಿದೆ’ ಎಂದು ಹೇಳಿದ್ದಾರೆ.
ಸುಳ್ಳು ಹೇಳಿಕೆ: ಜುಕರ್‌ಬರ್ಗ್ ಅವರ ಹೇಳಿಕೆ ಖಂಡಿಸಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ಫೇಸ್‌ಬುಕ್‌ನ ಮುಖ್ಯಸ್ಥ ಸುಳ್ಳು ಮಾಹಿತಿಯನ್ನು ಹಂಚುತ್ತಿದ್ದಾರೆ. ಅಲ್ಲದೇ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿ ಭಾರತ ಸಮರ್ಥವಾಗಿ ಪರಿಸ್ಥಿತಿಯನ್ನು ನಿಭಾಯಿಸಿದ ಕಾರಣ 2024ರಲ್ಲಿ ಎನ್‌ಡಿಎ ಜಯಗಳಿಸಿದೆ. ಪ್ರಧಾನಿ ಮೋದಿ ಅವರು ಸತತ 3ನೇ ಬಾರಿಗೆ ಭಾರತದ ಪ್ರಧಾನಿಯಾಗಿದ್ದಾರೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pathanamthitta: ದಲಿತ ಬಾಲಕಿಯ ಮೇಲೆ ದೌರ್ಜನ್ಯ ಪ್ರಕರಣದಲ್ಲಿ 44 ಜನರ ಬಂಧನ
MVA: ಏಕಾಂಗಿ ಸ್ಪರ್ಧೆ ಮಾತು: ಅಘಾಡಿ ಬಿರುಕು ವದಂತಿಗೆ ಪುಷ್ಟಿ ನೀಡಿದ ಪವಾರ್
ಸಂಸತ್ತಿನಲ್ಲಿ ಕ್ಷಮೆ ಕೇಳಿ..: ತಪ್ಪು ಮಾಹಿತಿಗಾಗಿ ಮೆಟಾಗೆ ಸಂಸದೀಯ ಸ್ಥಾಯಿ ಸಮಿತಿ ಸಮನ್ಸ್
Mahakumbh Mela: ಮಕರ ಸಂಕ್ರಾಂತಿಯಂದು ಮಹಾಕುಂಭದಲ್ಲಿ ಸಾಧು ಸಂತರ ಶಾಹಿ ಸ್ನಾನ
V Narayanan: ಇಸ್ರೋ ನೂತನ ಅಧ್ಯಕ್ಷರಾಗಿ ಹಿರಿಯ ವಿಜ್ಞಾನಿ ನಾರಾಯಣನ್ ಅಧಿಕಾರ ಸ್ವೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.