‘ಪ್ರೇಮ ನಿಘಾತ’ ಶೇ.28ರಷ್ಟು ಹೆಚ್ಚಳ
ಪ್ರೇಮಿಗಳಿಗೆ ಶಾಕಿಂಗ್ ಸುದ್ದಿ ನೀಡಿದ ಎನ್‌ಸಿಆರ್‌ಬಿ ದಾಖಲೆ!
Team Udayavani, Nov 20, 2019, 7:28 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ‘ಪ್ರೀತಿ ಮಾಯೆ ಹುಷಾರು… ಕಣ್ಣೀರ್ ಮಾರೋ ಬಜಾರು… ಒಮ್ಮೆ ಶರಣಾದ್ರೆ ಪ್ರೀತಿಗೆ ಕತ್ತು ಕೊಟ್ಟಂಗೆ ಕತ್ತಿಗೆ’ ಎಂಬ ದುನಿಯಾ ಚಿತ್ರದ ಹಾಡು ರಾಷ್ಟ್ರೀಯ ಅಪರಾಧ ದಾಖಲೆಗಳ ಸಂಸ್ಥೆಯು (ಎನ್‌ಸಿಆರ್‌ಬಿ) ಹೊರ ಹಾಕಿರುವ ಕುತೂಹಲಕಾರಿ ದತ್ತಾಂಶವೊಂದಕ್ಕೆ ಹೇಳಿ ಮಾಡಿಸಿದಂತಿದೆ! 2001ರಿಂದ 2007ರ ಅವಧಿಯಲ್ಲಿ ಭಾರತದಲ್ಲಿ ಪ್ರೇಮ ವಿಚಾರಕ್ಕಾಗಿ (ಅಕ್ರಮ ಸಂಬಂಧ ಪ್ರಕರಣಗಳೂ ಸೇರಿ) ಕೊಲೆಗೀಡಾದವರ ಪ್ರಮಾಣ ಶೇ.28ರಷ್ಟು ಹೆಚ್ಚಾಗಿರುವ ವಿಚಾರ ಎನ್‌ಸಿಆರ್‌ಬಿ ದಾಖಲೆಗಳ ಮೂಲಕ ಬೆಳಕಿಗೆ ಬಂದಿದೆ.
2001ರಲ್ಲಿ ಎನ್‌ಸಿಆರ್‌ಬಿ ಒಟ್ಟು 36,202 ಕೊಲೆ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು. 2017ರಲ್ಲಿ ಒಟ್ಟು ಕೊಲೆಗಳ ಪ್ರಮಾಣ ಶೇ. 21ರಷ್ಟು ಇಳಿಕೆಯಾಗಿ 28,653ಕ್ಕೆ ಬಂದು ನಿಂತಿತ್ತು. ಇದರಲ್ಲಿ ವೈಯಕ್ತಿಕ ಸೇಡಿಗಾಗಿ ನಡೆದ ಹತ್ಯೆಗಳು ಶೇ.4.3ರಷ್ಟು ಇಳಿಕೆಯಾಗಿದ್ದರೆ, ಆಸ್ತಿ ವಿಚಾರವಾಗಿ ನಡೆದ ಹತ್ಯೆಗಳ ಪ್ರಮಾಣ ಶೇ.12ರಷ್ಟು ಹೆಚ್ಚಾಗಿದ್ದವು. ಆದರೆ, ಪ್ರೇಮ ಪ್ರಕರಣಗಳಲ್ಲಿ ಹತ್ಯೆಗೀಡಾದವರ ಪ್ರಮಾಣ 2001ಕ್ಕೆ ಹೋಲಿಸಿದರೆ, ಶೇ.28 ಹೆಚ್ಚಾಗಿವೆ. ಇಂಥ ಪ್ರಕರಣಗಳು ಹೆಚ್ಚಾಗಿ ಆಂಧ್ರಪ್ರದೇಶ, ಮಹಾರಾಷ್ಟ್ರ, ಪಂಜಾಬ್, ಗುಜರಾತ್‌ಗಳಲ್ಲಿ ಆಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಲವ್ ರಕ್ತಪಾತಕ್ಕೆ 2ನೇ ಸ್ಥಾನ
2001ರಿಂದ 2017ರವರೆಗಿನ ಅವಧಿಯಲ್ಲಿ ಕರ್ನಾಟಕದಲ್ಲಿ ಪ್ರೇಮ ಪ್ರಕರಣಗಳಲ್ಲಿ ಹತ್ಯೆಗೀಡಾದವರ ಸಂಖ್ಯೆ 2ನೇ ಸ್ಥಾನದಲ್ಲಿದೆ. ಈ ಅವಧಿಯಲ್ಲಿ ವೈಯಕ್ತಿಕ ದ್ವೇಷಕ್ಕೆ 156 ಜನರು ಬಲಿಯಾಗಿದ್ದರೆ, ಪ್ರೇಮ ಪ್ರಕರಣಗಳಲ್ಲಿ 113, ಆಸ್ತಿ ವ್ಯಾಜ್ಯಗಳಲ್ಲಿ 87, ವೈಯಕ್ತಿಕ ಲಾಭದ ಉದ್ದೇಶಕ್ಕಾಗಿ 61 ಹಾಗೂ ವರದಕ್ಷಿಣೆ ವಿಚಾರವಾಗಿ 49 ಜನರು ಹತ್ಯೆಗೀಡಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.