ಎಲ್ಪಿಜಿ ಸಿಲಿಂಡರ್ ದರ 7 ರೂ. ಹೆಚ್ಚಳ
Team Udayavani, Sep 2, 2017, 7:00 AM IST
ನವದೆಹಲಿ: ಎಲ್ಪಿಜಿ ಸಬ್ಸಿಡಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಕೇಂದ್ರ ಸರ್ಕಾರ ಮುಂದಾದ ಬೆನ್ನಲ್ಲೇ, ಅಡುಗೆ ಅನಿಲ ಸಿಲಿಂಡರ್ ದರ ಶುಕ್ರವಾರ 7 ರೂ. ಹೆಚ್ಚಳ ಮಾಡಲಾಗಿದೆ.
ಸಬ್ಸಿಡಿ ಸಹಿತ ಸಿಲಿಂಡರ್ ದರ 7 ರೂ. ಏರಿಕೆ ಮಾಡಲಾಗಿದ್ದು, ದೆಹಲಿಯಲ್ಲಿ 14.2 ಕೆ.ಜಿ.ಯ ಪ್ರತಿ ಸಿಲಿಂಡರ್ನ ದರ ಈಗಿರುವ 479.77ರಿಂದ 487.18ಕ್ಕೇರಿದೆ. ಪ್ರತಿ ತಿಂಗಳು 4 ರೂ.ಗಳಂತೆ ಬೆಲೆ ಏರಿಸುತ್ತಾ ಹೋಗಿ, ಮುಂದಿನ ಮಾರ್ಚ್ ಅಂತ್ಯದ ವೇಳೆಗೆ ಎಲ್ಪಿಜಿ ಸಿಲಿಂಡರ್ ಮೇಲಿನ ಸಬ್ಸಿಡಿಯನ್ನು ಸಂಪೂರ್ಣವಾಗಿ ತೆಗೆದುಹಾಕಲಾಗುತ್ತದೆ ಎಂದು ತೈಲ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇತ್ತೀಚೆಗೆ ಲೋಕಸಭೆಗೆ ಮಾಹಿತಿ ನೀಡಿದ್ದರು. ತದನಂತರ ಆ.1ರಂದು ಅಡುಗೆ ಅನಿಲ ಸಿಲಿಂಡರ್ ದರ 4 ರೂ.ಗಳ ಬದಲಿಗೆ 2.31 ರೂ. ಏರಿಕೆ ಮಾಡಲಾಗಿತ್ತು. ಈಗ ಅದನ್ನು ಸರಿದೂಗಿಸುವ ನಿಟ್ಟಿನಲ್ಲಿ ಒಮ್ಮೆಗೇ 7 ರೂ. ಹೆಚ್ಚಳ ಮಾಡಲಾಗಿದೆ.
ಅಷ್ಟೇ ಅಲ್ಲ, ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ವಿತರಿಸಲಾಗುವ ಸೀಮೆಎಣ್ಣೆ ದರವನ್ನು ಲೀಟರ್ಗೆ 25 ಪೈಸೆ ಹೆಚ್ಚಿಸಲಾಗಿದೆ. ಎಲ್ಪಿಜಿ ಮಾದರಿಯಲ್ಲೇ ಸೀಮೆಎಣ್ಣೆ ಸಬ್ಸಿಡಿಯನ್ನೂ ತೆಗೆದುಹಾಕಲು ಸರ್ಕಾರ ಕ್ರಮ ಕೈಗೊಂಡಿದೆ. ಇದೇ ವೇಳೆ, ಸಬ್ಸಿಡಿರಹಿತ ಎಲ್ಪಿಜಿ ಸಿಲಿಂಡರ್ ದರವನ್ನೂ 73.5 ರೂ ಹೆಚ್ಚಳ ಮಾಡಲಾಗಿದ್ದು, ಇದರ ದರ ಇದೀಗ 597.50 ಆಗಿದೆ. ಜತೆಗೆ, ವೈಮಾನಿಕ ಇಂಧನ ದರವನ್ನೂ ಶೇ.4ರಷ್ಟು ಹೆಚ್ಚಳ ಮಾಡಲಾಗಿದೆ. ಅದರಂತೆ, ಈ ಇಂಧನದ ದರ ಕಿಲೋ ಲೀಟರ್ಗೆ 50,020 ರೂ. ಆಗಿದೆ.
ದೇಶದಲ್ಲಿ ಒಟ್ಟಾರೆ 18.11 ಕೋಟಿ ಗ್ರಾಹಕರು ಸಬ್ಸಿಡಿಸಹಿತ ಎಲ್ಪಿಜಿ ಸಿಲಿಂಡರ್ ಬಳಸುತ್ತಿದ್ದಾರೆ. ಈ ಪೈಕಿ, ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಳೆದ ಒಂದು ವರ್ಷದಿಂದೀಚೆಗೆ ಉಚಿತ ಎಲ್ಪಿಜಿ ಸಂಪರ್ಕ ಪಡೆದ 2.6 ಕೋಟಿ ಮಹಿಳೆಯರೂ ಸೇರಿದ್ದಾರೆ. ಇದಲ್ಲದೆ, 2.66 ಕೋಟಿ ಮಂದಿ ಸಬ್ಸಿಡಿರಹಿತ ಅಡುಗೆ ಅನಿಲವನ್ನು ಬಳಕೆ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ
Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ
ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.