ಬೆಲೆ ಏರಿಕೆ ಬಿಸಿ..: 50 ರೂ. ಏರಿಕೆ ಕಂಡ ಎಲ್ ಪಿಜಿ ಸಿಲಿಂಡರ್ ಬೆಲೆ!
Team Udayavani, Mar 22, 2022, 9:53 AM IST
ಹೊಸದಿಲ್ಲಿ: ಕಳೆದ ವರ್ಷದ ಅಕ್ಟೋಬರ್ ಆರಂಭದ ನಂತರ ಮೊದಲ ಬಾರಿಗೆ ಗೃಹ ಅಡುಗೆ ಅನಿಲ (ಎಲ್‌ಪಿಜಿ) ಬೆಲೆಯನ್ನು ಮಂಗಳವಾರ ಪ್ರತಿ ಸಿಲಿಂಡರ್ ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ಕಳೆದ ಬಾರಿ ಅಕ್ಟೋಬರ್ 6 ರಂದು ಎಲ್‌ಪಿಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಸರ್ಕಾರಿ ತೈಲ ಕಂಪನಿಗಳು ಮಂಗಳವಾರ ಎಲ್‌ಪಿಜಿ ಸಿಲಿಂಡರ್‌ಗಳ ಹೊಸ ದರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ 50 ರೂಪಾಯಿ ಏರಿಕೆಯಾಗಿದೆ.
ಮಾರ್ಚ್ 22ರಂದು ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯು ಲಕ್ನೋದಲ್ಲಿ ರೂ 938 ರಿಂದ ರೂ 987.5 ಕ್ಕೆ ಏರಿಕೆಯಾಗಿದೆ. ದೆಹಲಿಯಲ್ಲಿ 14 ಕೆಜಿ ಗ್ಯಾಸ್ ಸಿಲಿಂಡರ್ 949.5 ರೂಪಾಯಿಗೆ ಏರಿಕೆ ಆಗಿದೆ. ಈ ಹಿಂದೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಒಂದು ಸಿಲಿಂಡರ್ ಬೆಲೆ 899.50 ರೂ ಆಗಿತ್ತು.
ದೆಹಲಿ ಹೊರತುಪಡಿಸಿ, ಇತರ ಮೆಟ್ರೋ ನಗರಗಳಲ್ಲಿ ಎಲ್‌ಪಿಜಿ ಬೆಲೆಗಳು ಬದಲಾಗಿವೆ. ಕೋಲ್ಕತ್ತಾದಲ್ಲಿ ಎಲ್‌ಪಿಜಿ ಸಿಲಿಂಡರ್ ಬೆಲೆ 926 ರಿಂದ 976 ರೂಪಾಯಿಗೆ ಏರಿಕೆಯಾಗಿದೆ. ಲಕ್ನೋದಲ್ಲಿ ಈಗ ಗೃಹೋಪಯೋಗಿ ಗ್ಯಾಸ್ ಸಿಲಿಂಡರ್ 987.5 ರೂ.ಗೆ ಏರಿಕೆ ಕಂಡಿದೆ.
ಇದನ್ನೂ ಓದಿ:ಬೆಂಗಳೂರಿನ 9 ಕಡೆ ಎಸಿಬಿ ದಾಳಿ; ಬಿಡಿಎ ಮಧ್ಯವರ್ತಿಗಳ ಮನೆ ಮೇಲೆ ಅಧಿಕಾರಿಗಳ ರೇಡ್!
ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಮಾತ್ರವಲ್ಲದೆ 5 ಕೆಜಿ ಮತ್ತು 10 ಕೆಜಿ ಸಿಲಿಂಡರ್ ಗಳ ಬೆಲೆಯನ್ನು ಹೆಚ್ಚಿಸಲಾಗಿದೆ. 5 ಕೆಜಿ ಎಲ್‌ಪಿಜಿ ಸಿಲಿಂಡರ್ 349 ರೂ.ಗೆ ಮತ್ತು 10 ಕೆಜಿ 669 ರೂ.ಗೆ ಏರಿಕೆಯಾಗಿದೆ. 19 ಕೆಜಿಯ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯೂ 2,003.50 ರೂ.ಗೆ ತಲುಪಿದೆ.
ಇದಲ್ಲದೆ ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲೂ ಏರಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸಲ್ ಬೆಲೆಯಲ್ಲಿ 80 ಪೈಸೆ ಏರಿಕೆಯಾಗಿದೆ. ಮಂಗಳವಾರ, ದೆಹಲಿಯಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 96.21 ಇದ್ದರೆ ಡೀಸೆಲ್ ದರವು ಲೀಟರ್‌ಗೆ 87.47 ರೂ. ಆಗಿದೆ. ಮುಂಬೈಯಲ್ಲಿ ಪೆಟ್ರೋಲ್ ಬೆಲೆ 110.82 ರೂ, ಚೆನ್ನೈನಲ್ಲಿ 102.16 ರೂ ಇದೆ.
ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದ ಬೆಲೆಗಳಿಂದ ಜನತೆಗೆ ಪರಿಹಾರ ನೀಡಲು ಕೇಂದ್ರವು ನವೆಂಬರ್ 4 ರಂದು ಅಬಕಾರಿ ಸುಂಕವನ್ನು ಕಡಿತಗೊಳಿಸಿತು. ಸರ್ಕಾರವು ಪ್ರತಿ ಲೀಟರ್ ಪೆಟ್ರೋಲ್ ಮೇಲಿನ ಸುಂಕವನ್ನು 5 ರೂ. ಮತ್ತು ಡೀಸೆಲ್‌ಗೆ 10 ರೂ. ರಷ್ಟು ಕಡಿತಗೊಳಿಸಿದ್ದು, ಇಂಧನ ಬೆಲೆಯಲ್ಲಿ ಗಣನೀಯ ಇಳಿಕೆಗೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.