ಅಗಲಿದ ಬಿಜೆಡಿ ಸಂಸದನಿಗೆ ಶ್ರದ್ಧಾಂಜಲಿ; ಕಲಾಪ ಮುಂದೂಡಿಕೆ
Team Udayavani, Feb 6, 2019, 6:21 AM IST
ಹೊಸದಿಲ್ಲಿ : ಹಿರಿಯ ಬಿಜು ಜನತಾ ದಳ ನಾಯಕ ಮತ್ತು ಲೋಕಸಭಾ ಸದಸ್ಯ, 71ರ ಹರೆಯದ ಲಾಡು ಕಿಶೋರ್ ಸ್ವೇನ್ ಅವರು ದೀರ್ಘ ಕಾಲದ ಅಸ್ವಾಸ್ಥ್ಯದ ಬಳಿಕ ಇಂದು ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಪ್ರಯುಕ್ತ ಸದನದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾದ ಬಳಿಕ ಲೋಕಸಭೆಯ ಕಲಾಪವನ್ನು ಇಂದಿನ ಮಟ್ಟಿಗೆ ಸ್ಪೀಕರ್ ಸುಮಿತ್ರಾ ಮಹಾಜನ್ ಮುಂದೂಡಿದರು
ಇಂದು ಲೋಕಸಭೆ ಸಮಾವೇಶವಾದೊಡನೆಯೇ ಸುಮಿತ್ರಾ ಮಹಾಜನ್ ಅವರು ಬಿಜೆಡಿ ಹಿರಿಯ ನಾಯಕ ನಿಧನ ಹೊಂದಿರುವ ವಿಷಯವನ್ನು ಸದನಕ್ಕೆ ತಿಳಿಸಿದರು. 71ರ ಹರೆಯದ ಬಿಜೆಡಿ ನಾಯಕ ಲಾಡು ಕಿಶೋರ್ ಅವರು ಅಕ್ಸಾ ಕ್ಷೇತ್ರದ ಸಂಸದರು. ಇವರು ಒಡಿಶಾ ವಿಧಾನಸಭೆಯಲ್ಲಿ 2004ರಿಂದ 2009ರ ವರೆಗಿನ ಅವಧಿಯಲ್ಲಿ ಶಾಸಕರಾಗಿದ್ದರು.
ಅಗಲಿದ ಬಿಜೆಡಿ ನಾಯಕನಿಗೆ ಶ್ರದ್ಧಾಂಜಲಿ ಅರ್ಪಿಸುವಾಗ ಪ್ರಧಾನಿ ನರೇಂದ್ರ ಮೋದಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಇತರ ಪ್ರಮುಖರು ಸದನದಲ್ಲಿ ಉಪಸ್ಥಿತರಿದ್ದರು.
ಸದನದಲ್ಲಿ ರಾಷ್ಟ್ರಪತಿ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತ ಚರ್ಚೆಯು ನಾಳೆ ಗುರುವಾರ ಮುಂದುವರಿಯಲಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಚರ್ಚೆಗೆ ಉತ್ತರ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Varanasi: ರೈಲು ನಿಲ್ದಾಣದ ಬಳಿ ಭಾರಿ ಅಗ್ನಿ ಅವಘಡ: 200ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Sabarimala: ಮಕ್ಕಳಿಗೆ ಪ್ರತ್ಯೇಕ ಗೇಟ್; ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
OTP ನಿಯಮದಿಂದ ಅಗತ್ಯ ಸೇವೆಗೆ ತೊಂದರೆ ಆಗದು: ಟ್ರಾಯ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Relationships: ಸಂಬಂಧಗಳಲ್ಲಿ ಮಾಯವಾದ ಸಹಿಷ್ಣುತೆ : ಸಹಿಷ್ಣು ಗುಣದಿಂದಲೇ ಬಾಂಧವ್ಯದ ಪ್ರಗತಿ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Fire Temple: ಅಜರ್ಬೈಜಾನ್‌ನಲ್ಲಿದೆ ಪುರಾತನ ಹಿಂದೂ ದೇವಾಲಯ-ಬೆಂಕಿಯುಗುಳುವ ಸಪ್ತರಂಧ್ರಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.