ಕಾಂಗ್ರೆಸ್ ವಿರೋಧ ಭೀತಿ: ಚಿತ್ರದ ಪ್ರಚಾರವೇ ರದ್ದು!
Team Udayavani, Jul 17, 2017, 4:40 AM IST
ಹೊಸದಿಲ್ಲಿ : ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಗೆ ಹೆದರಿ ‘ಇಂದು ಸರ್ಕಾರ್’ ಸಿನಿಮಾ ಪ್ರಚಾರ ಕಾರ್ಯಕ್ರಮವನ್ನೇ ನಿರ್ಮಾಪಕ ಮಧುರ್ ಭಂಡಾರ್ಕರ್ ರದ್ದುಗೊಳಿಸಿದ್ದಾರೆ. ಆಕ್ರೋಶಗೊಂಡಿರುವ ಭಂಡಾರ್ಕರ್ ಅವರು ರಾಹುಲ್ರನ್ನು ಉದ್ದೇಶಿಸಿ ಟ್ವೀಟ್ ಮಾಡಿದ್ದು, ‘ಎರಡು ಕಡೆಗಳಲ್ಲಿ ಚಿತ್ರದ ಪ್ರಚಾರಕ್ಕೆ ಅಡ್ಡಿಯಾಗಿದೆ. ನೀವು ಈ ಗೂಂಡಾಗಿರಿ ಒಪ್ಪುತ್ತೀರಾ? ನನಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೇ?’ ಎಂದು ಪ್ರಶ್ನಿಸಿದ್ದಾರೆ. ಚಿತ್ರದಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅವರ ಪುತ್ರ ಸಂಜಯ್ ಗಾಂಧಿ ಅವರನ್ನು ಕೆಟ್ಟದಾಗಿ ಚಿತ್ರಿಸಲಾಗಿದೆ ಎಂಬ ಆರೋಪವಿದೆ. ನಾಗ್ಪುರದಲ್ಲಿ ನಡೆಯಬೇಕಿದ್ದ ಚಿತ್ರದ ಪ್ರಚಾರ ಕುರಿತ ಮಾಧ್ಯಮ ಗೋಷ್ಠಿ ಹೊರಗೆ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿ, ಘೋಷಣೆ ಕೂಗಿದ್ದಾರೆ. ಪುಣೆಯಲ್ಲೂ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಕಾಂಗ್ರೆಸ್ ವಕ್ತಾರ ಅತುಲ್ ಲೋಂಧೆ, ‘ಇಂದಿರಾರನ್ನು ಅವಹೇಳನ ಮಾಡುವುದನ್ನು ಭಾರತೀಯರು ಒಪ್ಪುವುದಿಲ್ಲ. ಈ ಚಿತ್ರದಲ್ಲಿ ಅಂಥದ್ದೇನೂ ಇಲ್ಲ ಎಂದಾದರೆ ನಿರ್ಮಾಪಕರು ಗಾಂಧಿ ಕುಟುಂಬಕ್ಕೆ ಚಿತ್ರ ತೋರಿಸಿ ಒಪ್ಪಿಗೆ ಪಡೆಯಲಿ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
Atul Subhash Case: ಮೊಮ್ಮಗನನ್ನು ನೀಡದಿದ್ದರೆ ಆತ್ಮಹತ್ಯೆ; ಅತುಲ್ ತಂದೆ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.