ಅನಾರೋಗ್ಯದಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ವಿಧಿವಶ
Team Udayavani, Jul 21, 2020, 7:52 AM IST
ಲಕ್ನೋ: ಮಧ್ಯಪ್ರದೇಶ ರಾಜ್ಯಪಾಲ ಲಾಲ್ ಜಿ ಟಂಡನ್ ಇಂದು ತೀವ್ರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರಿಗೆ 85 ವರ್ಷ ವಯಸ್ಸಾಗಿತ್ತು. ಇವರ ವಿಧಿವಶದ ಸುದ್ದಿಯನ್ನು ಮಗ ಅಶುತೋಷ್ ಟ್ವಿಟ್ಟರ್ ಮೂಲಕ ಖಚಿತಪಡಿಸಿದ್ದಾರೆ.
ಕಳೆದ ಜೂನ್ 11 ರಂದು ಉಸಿರಾಟದ ಸಮಸ್ಯೆ, ಮೂತ್ರಕೋಶದ ತೊಂದರೆ, ತೀವ್ರ ಜ್ವರದಿಂದ ಬಳಲುತ್ತಿದ್ದರಿಂದ ಲಕ್ನೋದಲ್ಲಿನ ಮೆದಂತಾ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್) ಅಳವಡಿಸಲಾಗಿತ್ತು. ಮಾತ್ರವಲ್ಲದೆ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದ್ದರೂ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
बाबूजी नहीं रहे
— Ashutosh Tandon (@GopalJi_Tandon) July 21, 2020
ಆದರೇ ಇಂದು ಮುಂಜಾನೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಂಡನ್ ಅವರು ಉತ್ತರ ಪ್ರದೇಶದ ಕಲ್ಯಾಣ್ ಸಿಂಗ್ ಸರ್ಕಾರದಲ್ಲಿ ಸಚಿವರಾಗಿದ್ದರು. ಬಿಜೆಪಿ-ಬಿಎಸ್ ಪಿ ಮೈತ್ರಿಕೂಟದ ಮಾಯಾವತಿ ಆಡಳಿತದಲ್ಲಿ ನಗರಾಭಿವೃದ್ಧಿ ಸಚಿವರಾಗಿ ಕೂಡ ಕಾರ್ಯನಿರ್ವಹಿಸಿದ್ದರು.
2009 ರಲ್ಲಿ ಲಕ್ನೋದಿಂದ ಬಿಜೆಪಿ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಆಗಸ್ಟ್ 2018 ರಿಂದ ಜುಲೈ 2019ರವರೆಗೂ ಬಿಹಾರದ ರಾಜ್ಯಪಾಲರಾಗಿದ್ದರು. ನಂತರದಲ್ಲಿ ಮಧ್ಯಪ್ರದೇಶ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಆದರೇ ಜೂನ್ ನಲ್ಲಿ ಲಾಲ್ ಜಿ ಟಂಡನ್ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಉತ್ತರಪ್ರದೇಶ ರಾಜ್ಯಪಾಲೆಯಾಗಿರುವ ಆನಂದಿಬೆನ್ ಪಟೇಲ್ ಹೆಚ್ಚುವರಿಯಾಗಿ ಮಧ್ಯಪ್ರದೇಶದ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.