ಮಧ್ಯಪ್ರದೇಶ: ಇಂದು ಸೋಮವಾರವೂ ಮುಂದುವರಿದ ಐಟಿ ದಾಳಿ, ಬಿಗಿ ಭದ್ರತೆ
Team Udayavani, Apr 8, 2019, 11:05 AM IST
ಭೋಪಾಲ್ : ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಅವರ OSD ಆಗಿರುವ ಪ್ರವೀಣ್ ಕಕ್ಕಡ್ ಮತ್ತು ಈತನ ಸಹವರ್ತಿ ಅಶ್ವಿನ್ ಶರ್ಮಾ ಅವರ ನಿವಾಸ ಸೇರಿದಂತೆ ಸೇರಿದಂತೆ ಮಧ್ಯಪ್ರದೇಶದ ಹಲವಾರು ಸ್ಥಳಗಳಲ್ಲಿ ಇಂದು ಸೋಮವಾರ ಬೆಳಗ್ಗೆ ಕೂಡ ಐಟಿ ದಾಳಿಗಳು ಮುಂದುವರಿದಿವೆ.
ಐಟಿ ಅಧಿಕಾರಿಗಳು ಅಶ್ವಿನ್ ಶರ್ಮಾ ಮತ್ತು ಪ್ರವೀಣ್ ಕಕ್ಕಡ್ ನಿವಾಸಗಳಲ್ಲಿ ಶೋಧ ಕಾರ್ಯಾಚರಣೆಯನ್ನು ಇಂದು ಸೋಮವಾರ ಬೆಳಗ್ಗೆ ಕೂಡ ಮುಂದುವರಿಸಿರುವಂತೆಯೇ ಶೋಧ, ದಾಳಿ ಕಾರ್ಯಾಚರಣೆ ನಡೆಯುತ್ತಿರುವ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ನಿನ್ನೆ ಭಾನುವಾರ ದಿಲ್ಲಿಯ ಐಟಿ ಅಧಿಕಾರಿಗಳು ಇಂದೋರ್ ನಲ್ಲಿನ ಪ್ರವೀಣ್ ಕಕ್ಕಡ್ ಅವರ ನಿವಾಸದಲ್ಲಿ ಮತ್ತು ಸಿಎಂ ಕಮಲ್ ನಾಥ್ ಮಾಜಿ ಸಲಹೆಗಾರ ಆರ್ ಕೆ ಮಿಗಲಾನಿ ಅವರ ದಿಲ್ಲಿ ನಿವಾಸದಲ್ಲಿ ಶೋಧ ಕಾರ್ಯಾಚರಣ ನಡೆಸಿದ್ದರು. ಇವರಿಬ್ಬರ ವಿರುದ್ಧ ಅಪಾರ ಪ್ರಮಾಣದ ತೆರಿಗೆ ವಂಚನೆ ಆರೋಪ ಇದೆ.
ಮೂಲಗಳ ಪ್ರಕಾರ ಐಟಿ ಅಧಿಕಾರಿಗಳು ಕನಿಷ್ಠ ಇಂದೋರ್, ಭೋಪಾಲ್, ಗೋವಾ ಮತ್ತು ದಿಲ್ಲಿ ಸೇರಿದಂತೆ ವಿವಿಧೆಡೆಯ ಸುಮಾರು 50 ತಾಣಗಳಲ್ಲಿ ಶೋಧ – ದಾಳಿ ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.