ಅಧಿಕಾರ ಕಮಲ್‌ಗೋ, ಕಮಲಕ್ಕೋ?; ಮಧ್ಯಪ್ರದೇಶ ವಿಧಾನಸಭೆಯಲ್ಲಿಇಂದು ‘ವಿಶ್ವಾಸಮತ’ ಅಗ್ನಿಪರೀಕ್ಷೆ

Team Udayavani, Mar 16, 2020, 7:32 AM IST

ಅಧಿಕಾರ ಕಮಲ್‌ಗೋ, ಕಮಲಕ್ಕೋ?; ಮಧ್ಯಪ್ರದೇಶ ವಿಧಾನಸಭೆಯಲ್ಲಿಇಂದು ‘ವಿಶ್ವಾಸಮತ’ ಅಗ್ನಿಪರೀಕ್ಷೆ

ಭೋಪಾಲ್‌/ಜೈಪುರ: ಮಧ್ಯಪ್ರದೇಶದಲ್ಲಿರುವ ಕಾಂಗ್ರೆಸ್‌ ನೇತೃತ್ವದ ಸರಕಾರ ಉಳಿ ಯುತ್ತದೋ, ಪತನವಾಗಲಿದೆಯೋ ಎಂಬ ಪ್ರಶ್ನೆಗೆ ಸೋಮವಾರ ಉತ್ತರ ಸಿಗಲಿದೆ. 22 ಶಾಸಕರು ರಾಜೀನಾಮೆ ನೀಡಿರುವ ಕಾರಣ ಸರಕಾರ ಅಲ್ಪಮತಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲ ಲಾಲ್‌ಜಿ ಟಂಡನ್‌ ಅವರು ವಿಶ್ವಾಸಮತ ಸಾಬೀತು ಮಾಡುವಂತೆ ಸೂಚನೆ ನೀಡಿದ್ದು, ಸೋಮವಾರ ಮಧ್ಯಪ್ರದೇಶ ವಿಧಾನ ಸಭೆಯಲ್ಲಿ ಈ ಪ್ರಕ್ರಿಯೆ ನಡೆಯಲಿದೆ.

ಅದಕ್ಕೆ ಪೂರಕವಾಗಿ ಭೋಪಾಲ್‌ನಲ್ಲಿ ರವಿವಾರ ಸಚಿವ ಸಂಪುಟ ಸಭೆಯನ್ನೂ ಸಿಎಂ ಕಮಲ್‌ನಾಥ್‌ ನಡೆಸಿದ್ದಾರೆ. ವಿಶ್ವಾಸಮತ ಪ್ರಕ್ರಿಯೆಯಲ್ಲಿ ಜಯ ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ವಿಧಾನ ಸಭೆಯ ಸುತ್ತಮುತ್ತಲ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಹಾಕಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಭೋಪಾಲಕ್ಕೆ ಆಗಮನ: ಬಿಜೆಪಿಯಿಂದ ಮತ್ತಷ್ಟು ಸಂಖ್ಯೆಯಲ್ಲಿ ಶಾಸಕರು ಆಮಿಷಕ್ಕೆ ಒಳಗಾಗದೇ ಇರುವುದನ್ನು ತಪ್ಪಿಸಲು ಜೈಪುರದ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದ ತನ್ನ ಶಾಸಕರನ್ನು ಭೋಪಾಲಕ್ಕೆ ಕಾಂಗ್ರೆಸ್‌ ಕರೆ ತಂದಿದೆ. ‘ಭೋಪಾಲ ವಿಮಾನ ನಿಲ್ದಾಣಕ್ಕೆ ಬಂದ ಬಳಿಕ ನಮ್ಮನ್ನು ಹೊಟೇಲ್‌ಗ‌ಳಿಗೆ ಕರೆದೊ ಯ್ಯಲಾಗಿದೆ. ರಾಜ್ಯದ ಬಜೆಟ್‌ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ’ ಎಂದು ಕಾಂಗ್ರೆಸ್‌ ಶಾಸಕರೊಬ್ಬರು ಹೇಳಿದ್ದಾರೆ. ಅವರಿಗೆ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.

ಇಂದು ಸ್ಪೀಕರ್‌ ರೂಲಿಂಗ್‌: ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ಆದೇಶ ಪ್ರಕಾರ ಕಮಲ್‌ನಾಥ್‌ ಸರಕಾರದ ವಿಶ್ವಾಸ ಮತ ಯಾಚನೆಗೆ ಸಂಬಂಧಿಸಿದಂತೆ ಆದೇಶ ನೀಡಲು ಸ್ಪೀಕರ್‌ ಎನ್‌.ಪಿ. ಪ್ರಜಾಪತಿ ನಿರಾ ಕರಿಸಿದ್ದಾರೆ. ಸೋಮವಾರವೇ ರೂಲಿಂಗ್‌ ನೀಡುವುದಾಗಿ ಹೇಳಿದ್ದಾರೆ.

ಸಿಂಧಿಯಾ ಇಂದು ಆಗಮನ: ಕಾಂಗ್ರೆಸ್‌ನ 22 ಶಾಸಕರ ರಾಜೀನಾಮೆಗೆ ಕಾರಣರಾಗಿರುವ ಜ್ಯೋತಿರಾದಿತ್ಯ ಸಿಂಧಿಯಾ ಸೋಮವಾರ ಹೊಸದಿಲ್ಲಿಯಿಂದ ಭೋಪಾಲಕ್ಕೆ ಆಗಮಿ ಸಲಿದ್ದಾರೆ. ಬೆಂಗಳೂರಿನಲ್ಲಿರುವ ಕೆಲವು ಶಾಸಕರು ಸೋಮವಾರ ತೆರಳಲಿದ್ದಾರೆ.

ಬಿಜೆಪಿಯಿಂದ ವಿಪ್‌ ಜಾರಿ: ಅಲ್ಪಮತಕ್ಕೆ ಕುಸಿದಿರುವ ಕಮಲ್‌ನಾಥ್‌ ನೇತೃತ್ವದ ಕಾಂಗ್ರೆಸ್‌ ಸರಕಾರ ಸೋಮವಾರ ವಿಶ್ವಾಸಮತ ಯಾಚಿಸಲಿರುವ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಎಲ್ಲ ಶಾಸಕರಿಗೆ ;ಕಲಾಪದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ವಿಶ್ವಾಸ ಮತ ಯಾಚನೆ ವೇಳೆ ಸರಕಾರದ ವಿರುದ್ಧವಾಗಿ ಮತ ಚಲಾಯಿಸಬೇಕು’ ಎಂದು ಬಿಜೆಪಿ ವಿಪ್‌ ಜಾರಿಗೊಳಿಸಿದೆ.

ಕಾಂಗ್ರೆಸ್‌ ಸರಕಾರಕ್ಕೆ ಬಹುಮತವೇ ಇಲ್ಲ. ರಾಜ್ಯಪಾಲರು ಹೇಳಿರುವ ಪ್ರಕಾರ ಕಮಲ್‌ನಾಥ್‌ ನೇತೃತ್ವದ ಸರಕಾರ ಅಲ್ಪಮತಕ್ಕೆ ಕುಸಿದಿದೆ. ಈ ಅಂಶವನ್ನು ರಾಜ್ಯಪಾಲರು ಸಿಎಂಗೆ ಬರೆದಿರುವ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.
– ನರೋತ್ತಮ್‌ ಮಿಶ್ರಾ, ಬಿಜೆಪಿ ಮುಖ್ಯ ಸಚೇತಕ

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು

Shabarimala

Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್‌ ಬುಕ್ಕಿಂಗ್‌ ತಾತ್ಕಾಲಿಕ ರದ್ದು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.