ಸೆ.20ರ ವರೆಗೆ ತ.ನಾ.ವಿಶ್ವಾಸ ಮತ ಇಲ್ಲ : ಮದ್ರಾಸ್ ಹೈಕೋರ್ಟ್
Team Udayavani, Sep 14, 2017, 4:03 PM IST
ಚೆನ್ನೈ : ಸೆಪ್ಟಂಬರ್ 20ರ ವರೆಗೆ ತಮಿಳು ನಾಡು ವಿಧಾನಸಭೆಯಲ್ಲಿ ಸದನ ಬಲಾಬಲ ಪರೀಕ್ಷೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ಗುರುವಾರ ತೀರ್ಪು ನೀಡಿದೆ.
ತಮಿಳು ನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ಉಪ ಮುಖ್ಯಮಂತ್ರಿ ಓ ಪನ್ನೀರಸೆಲ್ವಂ ಅವರಿಗೆ ಮದ್ರಾಸ್ ಹೈಕೋರ್ಟಿನ ಈ ತೀರ್ಪಿನಿಂದಾಗಿ ಭಾರೀ ದೊಡ್ಡ ರಿಲೀಫ್ ಸಿಕ್ಕಿದಂತಾಗಿದೆ ಎಂದು ಸಿಎನ್‌ಎನ್ ನ್ಯೂಸ್ 18 ವರದಿ ಮಾಡಿದೆ.
ಪಳನಿಸ್ವಾಮಿ ಅವರ ಸರಕಾರವನ್ನು ಹೇಗಾದರೂ ಉರುಳಿಸಬೇಕು ಎಂಬ ಹಠಕ್ಕೆ ಬಿದ್ದಿರುವ ಟಿಟಿವಿ ದಿನಕರನ್ ಗೆ ಮದ್ರಾಸ್ ಹೈಕೋರ್ಟಿನ ಈ ತೀರ್ಪಿನಿಂದಾಗಿ ಭಾರೀ ಹಿನ್ನಡೆ ಉಂಟಾಗಿದೆ.
ದಿನಕರನ್ ನಿನ್ನೆ ಬುಧವಾರವಷ್ಟೇ ತಾನು ಡಿಎಂಕೆ ಜತೆಗೆ ಹೋಗುವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆ ಮೂಲಕ ಅವರು ಹಲವು ಊಹಾಪೋಹಗಳಿಗೆ ತೆರೆ ಎಳೆದಿದ್ದರು. ದಿನಕರನ್ ಅವರು ಪಳನಿಸ್ವಾಮಿ ಮತ್ತು ಓ ಪನ್ನೀರಸೆಲ್ವಂ ಅವರ ವಿಲಯನಗೊಂಡಿರುವ ಬಣದಿಂದ ಬೇರ್ಪಡುವರೆಂಬ ಊಹಾಪೋಹಗಳು ನಿನ್ನೆಯ ತನಕವೂ ದಟ್ಟವಾಗಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.