MES ಪರ ಬೆಳಗಾವಿಯಲ್ಲಿ ಶಿಂಧೆ, ಫಡ್ನವೀಸ್ ಪ್ರಚಾರ ಮಾಡಲಿ: ರಾವುತ್ ಸವಾಲು
Team Udayavani, Apr 30, 2023, 3:14 PM IST
ಮುಂಬಯಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪಮುಖ್ಯಮಂತ್ರಿ ಫಡ್ನವೀಸ್ ಅವರು ಬೆಳಗಾವಿಗೆ ತೆರಳಿ ಎಂಇಎಸ್ ಪರ ಪ್ರಚಾರ ಮಾಡಬೇಕು ಎಂದು ಮಾಜಿ ಸಚಿವ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾವುತ್ “ನಾನು ಮಹಾರಾಷ್ಟ್ರ ಏಕೀಕರಣ ಸಮಿತಿ ಪರ ಮತ ಕೇಳಲು ಕರ್ನಾಟಕದ ಮರಾಠಿ ಮಾತನಾಡುವ ಪ್ರದೇಶಗಳಿಗೆ ಹೋಗುತ್ತಿದ್ದೇನೆ. ಉಪಮುಖ್ಯಮಂತ್ರಿ ಫಡ್ನವೀಸ್ ಬೆಳಗಾವಿಗೆ ತೆರಳಿ ಎಂಇಎಸ್ ಪರ ಪ್ರಚಾರ ಮಾಡಬೇಕು. ಆದರೆ, ಪರಿಸ್ಥಿತಿ ವಿಭಿನ್ನವಾಗಿದೆ, ಎಂಇಎಸ್ ಸೋಲಿಸಲು ಅವರು ಬೆಳಗಾವಿಗೆ ಹೋಗಿದ್ದಾರೆ. ಬಿಜೆಪಿ ಮರಾಠಿ ಜನರನ್ನು ಸೋಲಿಸಲು ಹೋಗಿದ್ದಕ್ಕಾಗಿ ನಾಚಿಕೆಪಡಬೇಕು ” ಎಂದು ರಾವುತ್ ಹೇಳಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ಆಂದೋಲನದಲ್ಲಿ ತಾನು ಭಾಗವಹಿಸಿದ್ದೇನೆ ಎಂದು ಸಿಎಂ ಶಿಂಧೆ ಹೇಳಿಕೊಳ್ಳುತ್ತಾರೆ, ಅವರು ನಿಜವಾಗಿಯೂ ಹಾಗೆ ಮಾಡಿದ್ದರೆ ಅವರು ಎಂಇಎಸ್ ಮತ್ತು ಬಿಜೆಪಿ ವಿರುದ್ಧ ಪ್ರಚಾರ ಮಾಡಲು ಬೆಳಗಾವಿಯಲ್ಲಿರಬೇಕು ಎಂದರು.
ಕಳೆದ ವರ್ಷ ಜೂನ್‌ನಿಂದ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತು ಶಿಂಧೆ ಅವರ ಶಿವಸೇನೆ ಆಡಳಿತ ಮಿತ್ರಪಕ್ಷಗಳಾಗಿವೆ. ಬೆಳಗಾವಿ-ಕಾರವಾರದ ಮರಾಠಿ ಮಾತನಾಡುವ ಜನರಿಗೆ ಶಿವಸೇನೆ (ಯುಬಿಟಿ) ಬದ್ಧವಾಗಿದೆ. ಶಿವಸೇನೆಯ 69 ಕಾರ್ಯಕರ್ತರು ಹುತಾತ್ಮರಾಗಿದ್ದಾರೆ. ಪಕ್ಷದ ಸಂಸ್ಥಾಪಕ ಬಾಳ್ ಠಾಕ್ರೆ ಅವರನ್ನು ಗಡಿ ವಿವಾದದಲ್ಲಿ ಮೂರು ತಿಂಗಳ ಕಾಲ ಜೈಲಿನಲ್ಲಿರಿಸಲಾಗಿತ್ತು ಎಂದು ರಾಜ್ಯಸಭಾ ಸಂಸದ ರಾವುತ್ ಕಿಡಿ ಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.