ಮಹದಾಯಿಗೆ ಗೋವಾದಲ್ಲಿ 6 ಅಣೆಕಟ್ಟೆಗೆ ಅನುಮೋದನೆ
Team Udayavani, Dec 28, 2019, 3:05 AM IST
ಪಣಜಿ: ಮಹದಾಯಿ ನದಿ ಜಲಾನಯನ ಪ್ರದೇಶದಲ್ಲಿ ರಾಜ್ಯದಲ್ಲಿ ಒಟ್ಟು 6 ಅಣೆಕಟ್ಟೆ ನಿರ್ಮಿಸಲು ಅನುಮೋದನೆ ಪಡೆದಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ. ಶುಕ್ರ ವಾರ ಪರ್ವರಿ ಸಚಿವಾಲಯ ದಲ್ಲಿ ಕ್ಯಾಬಿನೆಟ್ ಸಭೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಮಹದಾಯಿ ವಿಷಯದಲ್ಲಿ ಗೋವಾ ಸರ್ಕಾರ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಈ ಪ್ರಕರಣ ಸುಪ್ರೀಂ ಕೋರ್ಟ್ನಲ್ಲಿದೆ.
ರಾಜ್ಯದ ಜನತೆ ಚಿಂತಿಸಬೇಕಾದ ಅಗತ್ಯವಿಲ್ಲ. ಅಗತ್ಯಬಿದ್ದರೆ ನಾವು ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ವಿರುದ್ಧವೂ ನ್ಯಾಯಾ ಲಯದ ಮೆಟ್ಟಿಲೇರು ತ್ತೇವೆ ಎಂದು ಹೇಳಿದ್ದಾರೆ. ಕಳಸಾ ಬಂಡೂರಿ ಯೋಜನೆಗೆ ಪರಿಸರ ಇಲಾಖೆ ಅನುಮತಿ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಡಿ.24ರಂದು ಕರ್ನಾಟಕಕ್ಕೆ ಪತ್ರ ಬರೆದಿದ್ದಾರೆ. ಈ ವಿಷಯ ದಲ್ಲಿ ಮಧ್ಯಪ್ರವೇಶಿಸುವಂತೆ ಗೋವಾ ಸರ್ಕಾರವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಿದೆ ಎಂದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.