ಮಹದಾಯಿ ತಿರುಗಿಸಿ ಕೊಳ್ಳಲು ಸಾಧ್ಯವೇ ಇಲ್ಲ
Team Udayavani, Mar 2, 2020, 3:06 AM IST
ಪಣಜಿ: ಕರ್ನಾಟಕ ಮಹದಾಯಿ ನದಿ ನೀರನ್ನು ತಿರುಗಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ ಹೇಳಿದರು. ಪಣಜಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಮಹದಾಯಿ ಪ್ರಕರಣದಲ್ಲಿ ಯಾರು ರಾಜಕಾರಣ ಮಾಡುತ್ತಿದ್ದಾರೋ ಅವರು ಯಾವತ್ತೂ ಮಹದಾಯಿ ನದಿ ಹುಟ್ಟುವ ಮತ್ತು ಹರಿಯುವ ಪ್ರದೇಶಗಳಿಗೆ ಭೇಟಿ ನೀಡಿಯೇ ಇಲ್ಲ.
ಗೋವಾದಲ್ಲಿ ಎಷ್ಟು ಯೋಜನೆಗಳು ಮಹದಾಯಿ ನದಿ ನೀರು ಅವಲಂಬಿಸಿವೆ ಎಂಬುದೂ ಅವರಿಗೆ ಗೊತ್ತಿಲ್ಲವೆಂದರು. ಕರ್ನಾಟಕದ ಮನವಿಯಂತೆ ಕೇಂದ್ರ ಅಧಿಸೂಚನೆ ಹೊರಡಿಸಿದೆ ಎಂದರೆ ಕರ್ನಾಟಕದ ಈ ಯೋಜನೆಗೆ ಕೇಂದ್ರದಿಂದ ಎಲ್ಲ ರೀತಿಯ ಪರವಾನಗಿ ಲಭಿಸುತ್ತದೆ ಎಂದರ್ಥವಲ್ಲ. ವನ್ಯಜೀವಿ ಮಂಡಳಿ ಮತ್ತು ಅರಣ್ಯ ಇಲಾಖೆ ಪರವಾನಗಿ ಲಭಿಸಲು ಹೆಚ್ಚಿನ ಕಾಲಾವಕಾಶ ಹಿಡಿಯುತ್ತದೆ.
ಅಲ್ಲಿಯವರೆಗೆ ಸುಪ್ರೀಂ ಕೋರ್ಟ್‌ನಲ್ಲಿರುವ ಮಹದಾಯಿ ಪ್ರಕರಣದ ಅಂತಿಮ ತೀರ್ಪು ಹೊರಬೀಳಲಿದೆ ಎಂದರು. ಮಹದಾಯಿ ನದಿ ನೀರು ತಿರುಗಿಸಿಕೊಳ್ಳಲು ಕರ್ನಾಟಕ ಕಾಯ್ದೆ ರಹಿತವಾಗಿ ಕಾಮಗಾರಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಈ ಮೂರೂ ರಾಜ್ಯಗಳ ಜಲಸಂಪನ್ಮೂಲ ಇಲಾಖೆ ಅ ಧಿಕಾರಿಗಳು ಜಂಟಿಯಾಗಿ ಮಹದಾಯಿ ಪ್ರಕರಣದ ಕಳಸಾ ಬಂಡೂರಿ ನಾಲೆ ಪರಿಶೀಲನೆ ನಡೆಸಬೇಕು ಎಂದು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಮಾಡಲಾಗುವುದು ಎಂದರು.
ರಾಜ್ಯದ ನೀರು ಪೂರೈಕೆ ಯೋಜನೆಗಳನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕಿದೆ. ಮಹದಾಯಿ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಜಯ ಗಳಿಸಲೇಬೇಕಿದೆ. ಹೀಗಾಗಿ ನ್ಯಾಯಾಧಿಕರಣ ತೀರ್ಪು ಪ್ರಶ್ನಿಸಿ ಸರ್ವೋತ್ಛ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ
Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ
ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?
Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ
Pushpa 2 trailer: ಪೈಸಾ ವಸೂಲ್ ಅವತಾರದಲ್ಲಿ ʼಪುಷ್ಪರಾಜ್ʼ; ಅಲ್ಲು ಭರ್ಜರಿ ಆ್ಯಕ್ಷನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.