ಮಹದಾಯಿ ಯೋಜನೆ ಮುಂದುವರೆಸಲು ಕೇಂದ್ರ ಅವಕಾಶ ನೀಡಲ್ಲ: ಗೋವಾ ಸಿಎಂ
Team Udayavani, Jul 10, 2023, 1:50 PM IST
ಪಣಜಿ: ಮಹದಾಯಿ ಪ್ರವಾಹ ಪ್ರಾಧಿಕಾರದ ಸ್ಥಾಪನೆ ಮಾಡಲಾಗಿರುವುದರಿಂದ ಈ ಕುರಿತ ಎಲ್ಲ ಅಧಿಕಾರ ಈ ಪ್ರಾಧಿಕಾರಕ್ಕೆ ಲಭಿಸಬೇಕು. ಕರ್ನಾಟಕವು ಮಹದಾಯಿ ಯೋಜನೆಯನ್ನು ಮುಂದುವರಿಸಲು ಕೇಂದ್ರ ಸರ್ಕಾರವು ಅವಕಾಶ ನೀಡುವುದಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಹೇಳಿದ್ದಾರೆ.
ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು- ಮೂರು ವರ್ಷಗಳ ನಂತರ ಇಂದು ಸೋಮವಾರ ಸುಪ್ರೀಂ ಕೋರ್ಟ್‍ನಲ್ಲಿ ಮಹದಾಯಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಗೋವಾ ಸರ್ಕಾರ ನೇಮಿಸಿರುವ ಇತರ ವಕೀಲರು ಈಗಾಗಲೇ ದೆಹಲಿ ತಲುಪಿದ್ದಾರೆ. ನಮ್ಮ ವಕೀಲರು ನ್ಯಾಯಾಲಯದಲ್ಲಿ ಗೋವಾದ ಪರ ವಾದ ಮಂಡಿಸಲಿದ್ದಾರೆ. ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರ್ಕಾರ ಸ್ಥಾಪಿಸಿರುವ ಮಹದಾಯಿ ಪ್ರವಾಹ ಪ್ರಾಧಿಕಾರದ ಮೇಲೆ ನಮಗೆ ಸಂಪೂರ್ಣ ವಿಶ್ವಾಸವಿದೆ.
ಕರ್ನಾಟಕದ ಯಾವುದೇ ಹಕ್ಕುಗಳು ಮತ್ತು ಈ ನಿಟ್ಟಿನಲ್ಲಿ ಟೆಂಡರ್ ಗಳ ಘೋಷಣೆಯು ನದಿ ನೀರು ತಿರುಗಿಸುವುದರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಕೇಂದ್ರವು ಈ ವರ್ಷದ ಮೇ ತಿಂಗಳಲ್ಲಿ ಮಹದಾಯಿ-ಹರಿವು ಪ್ರಾಧಿಕಾರಕ್ಕೆ ತಿಳಿಸಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.
ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಳಸಾ ಬಂಡೂರಿ ಯೋಜನೆಗೆ ಕೇಂದ್ರ ಜಲ ಆಯೋಗ ಪರಿಷ್ಕೃತ ವಿಸ್ತೃತ ಯೋಜನೆಗೆ (ಡಿಪಿಆರ್) ಅನುಮೋದನೆ ನೀಡಿದ ಬಳಿಕ ಗೋವಾ ರಾಜ್ಯದಲ್ಲಿ ಅಸಮಾಧಾನ ಭುಗಿಲೆದ್ದಿತ್ತು.ಈ ಬೆನ್ನಲ್ಲೇ ರಾಜ್ಯ ಸರಕಾರವು ಕೇಂದ್ರ ಸರಕಾರದಿಂದ ಮಹದಾಯಿ ಪ್ರಾಧಿಕಾರವನ್ನು ಸ್ಥಾಪಿಸಲು ಕೋರಿತ್ತು. ಕೇಂದ್ರ ಸರ್ಕಾರವು ಪ್ರಾಧಿಕಾರವನ್ನು ನೇಮಿಸಿದೆ. ಈ ನಿಟ್ಟಿನಲ್ಲಿ ಪ್ರಾಧಿಕಾರಕ್ಕೆ ಎಲ್ಲ ಅಧಿಕಾರ ನೀಡಬೇಕು ಎಂದು ಗೋವಾ ಸರ್ಕಾರ ಆಗ್ರಹಿಸಿದೆ.
ಮಹದಾಯಿ ಜಲವಿವಾದ ನ್ಯಾಯಾಧಿಕರಣದ ತೀರ್ಪಿನ ವಿಚಾರಣೆ ಇಂದು ಸೋಮವಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಯುತ್ತಿದೆ. ಈ ಪ್ರಕರಣಗಳು ಜಲ ನ್ಯಾಯಮಂಡಳಿಯ ಆದೇಶ ಮತ್ತು ಕಳಸಾ-ಭಂಡೂರ ಯೋಜನೆಯಿಂದ ಮಹದಾಯಿ ನದಿ ತಿರುವಿಗೆ ಸಂಬಂಧಿಸಿದೆ. ಕರ್ನಾಟಕದ ವಿರುದ್ಧ ಗೋವಾ ವಿರುದ್ಧ ಮಹಾರಾಷ್ಟ್ರ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ನಾಳೆ ವಿಚಾರಣೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದನ್ನೂ ಓದಿ: ಮನೆಯಲ್ಲೇ ಇರಿ’, ‘ಯಾರೂ ಭಯಪಡಬೇಡಿ… ಹಿಮಾಚಲ ಜನರಿಗೆ ಸಿಎಂ ಸುಖವಿಂದರ್ ಸಿಂಗ್ ಅಭಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.